AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಮ್ಮ’ನ ಕರೆತಂದ ‘ವಿಕ್ರಾಂತ್ ರೋಣ’ ತಂಡ; ಹೇಗಿದೆ ನೋಡಿ ನಾಲ್ಕನೇ ಸಾಂಗ್

Gumma Banda Gumma Lyrical Video: ‘ವಿಕ್ರಾಂತ್ ರೋಣ’ ಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರು ನೀಡಿರುವ ಹಾಡುಗಳು ಸಾಕಷ್ಟು ಗಮನ ಸೆಳೆದಿವೆ.

‘ಗುಮ್ಮ’ನ ಕರೆತಂದ ‘ವಿಕ್ರಾಂತ್ ರೋಣ’ ತಂಡ; ಹೇಗಿದೆ ನೋಡಿ ನಾಲ್ಕನೇ ಸಾಂಗ್
ಸುದೀಪ್
TV9 Web
| Edited By: |

Updated on: Jul 21, 2022 | 11:10 AM

Share

‘ವಿಕ್ರಾಂತ್ ರೋಣ’ ಸಿನಿಮಾ (Vikrant Rona Movie) ಸದ್ಯ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಮೂರು ಹಾಡುಗಳು ರಿಲೀಸ್ ಆಗಿವೆ. ಈಗ ಈ ಚಿತ್ರದ ನಾಲ್ಕನೇ ಸಾಂಗ್ ರಿಲೀಸ್ ಆಗಿದೆ. ‘ಗುಮ್ಮಾ ಬಂದ ಗುಮ್ಮಾ..’ ಲಿರಿಕಲ್ ಸಾಂಗ್ (Gumma Banda Gumma Lyrical Video) ಇಂದು (ಜುಲೈ 21) ಬೆಳಗ್ಗೆ 11 ಗಂಟೆಗೆ ಬಿಡುಗಡೆ ಆಗಿದೆ. ನಟ ಸುದೀಪ್, ನಿರ್ದೇಶಕ ಅನೂಪ್​ ಭಂಡಾರಿ ಅವರು ಈ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ.

‘ವಿಕ್ರಾಂತ್ ರೋಣ’ ಚಿತ್ರತಂಡ ಮೊಟ್ಟ ಮೊದಲ ಬಾರಿಗೆ ರಿಲೀಸ್ ಮಾಡಿದ ಸಾಂಗ್ ‘ರಾ ರಾ ರಕ್ಕಮ್ಮ..’. ಸುದೀಪ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ. ಈ ಲಿರಿಕಲ್ ಸಾಂಗ್ ಸೂಪರ್ ಹಿಟ್ ಆಯಿತು. ಇದರ ಸಿಗ್ನೇಚರ್ ಸ್ಟೆಪ್ ಸಖತ್ ವೈರಲ್ ಆಗಿದೆ. ಇದಾದ ಬಳಿಕ ‘ರಾಜಕುಮಾರಿ..’ ಹೆಸರಿನ ಮೆಲೋಡಿ ಸಾಂಗ್ ಬಿಡುಗಡೆ ಮಾಡಲಾಯಿತು. ನಂತರ ರಿಲೀಸ್ ಆಗಿದ್ದು ‘ಹೇ ಫಕೀರಾ..’ ಹಾಡು. ನಿರೂಪ್ ಭಂಡಾರಿ ಪಾತ್ರವನ್ನು ಈ ಹಾಡು ಪರಿಚಯಿಸಿದೆ. ಈಗ ‘ಗುಮ್ಮಾ ಬಂದ ಗುಮ್ಮಾ..’ ಹಾಡು ಬಿಡುಗಡೆಗೆ ಆಗಿ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ ಯಾವಾಗ? ಪ್ಲ್ಯಾನ್​ ಬಗ್ಗೆ ವಿವರ ನೀಡಿದ ಸುದೀಪ್​
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Jacqueline Fernandez: ಸೆನ್ಸೇಶನ್ ಸೃಷ್ಟಿಸಿದ ‘ರಾ ರಾ ರಕ್ಕಮ್ಮ’; ಕನ್ನಡದಲ್ಲೇ ಧನ್ಯವಾದ ಹೇಳಿದ ಜಾಕ್ವೆಲಿನ್​
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ

‘ವಿಕ್ರಾಂತ್ ರೋಣ’ ಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅವರು ನೀಡಿರುವ ಹಾಡುಗಳು ಸಾಕಷ್ಟು ಗಮನ ಸೆಳೆದಿವೆ. ಸಾಂಗ್​ಗಳಿಂದ ಚಿತ್ರದ ಮೈಲೇಜ್ ಹೆಚ್ಚಿದ ಸಾಕಷ್ಟು ಉದಾಹರಣೆ ಇದೆ. ಈಗ ಹಾಡುಗಳ ಮೂಲಕ ‘ವಿಕ್ರಾಂತ್ ರೋಣ’ ಸಾಕಷ್ಟು ಗಮನ ಸೆಳೆಯುತ್ತಿದೆ.

‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಅನೂಪ್ ಭಂಡಾರಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಜಾಕ್ ಮಂಜು ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಅವರು ಸಾಕಷ್ಟು ಹಣ ಖರ್ಚು ಮಾಡಿದ್ದಾರೆ. ಹೀಗಾಗಿ, ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ ಎಂಬುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ. ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ನಿರೂಪ್ ಭಂಡಾರಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. 3ಡಿ ಅವತರಣಿಕೆಯಲ್ಲಿ ಸಿನಿಮಾ ಹೇಗೆ ಮೂಡಿ ಬಂದಿದೆ ಎಂಬ ಕುತೂಹಲ ಫ್ಯಾನ್ಸ್​​ಗಳದ್ದು.

ಕ್ಷಮೆ ಕೇಳಿದ ಸುದೀಪ್

ಸುದೀಪ್​ ಅವರಿಗೆ ಅನಾರೋಗ್ಯ ಕಾಡಿದೆ. ಮಳೆಯಲ್ಲಿ ನೆನೆದ ಕಾರಣ ಅವರಿಗೆ ಜ್ವರ ಬಂದಿದೆ. ಹೀಗಾಗಿ, ಅವರು ಕೆಲ ರಾಜ್ಯಗಳಿಗೆ ಪ್ರಚಾರಕ್ಕೆ ತೆರಳಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಪರ ರಾಜ್ಯದ ಮಾಧ್ಯಮ ಮಿತ್ರರ ಬಳಿ ಸುದೀಪ್ ಕ್ಷಮೆ ಕೇಳಿದ್ದಾರೆ. ಜುಲೈ 22ರಿಂದ ಮತ್ತೆ ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.

ಸುದೀಪ್ ಮಾಡಿದ ಟ್ವೀಟ್​..

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್