ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್

ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರ ಮಾಡಿದರು. ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ.

ಸುದೀಪ್ ನಟನೆಯ ಹೊಸ ಸಿನಿಮಾ ಪ್ರೋಮೋಶೂಟ್ ಶುರು; ಇನ್ನೊಂದು ವಾರದಲ್ಲಿ ಲಾಂಚ್
ನಟ ಸುದೀಪ್​
Follow us
ರಾಜೇಶ್ ದುಗ್ಗುಮನೆ
|

Updated on: May 22, 2023 | 12:07 PM

ಕಿಚ್ಚ ಸುದೀಪ್ (Kichcha Sudeep) ಅವರು ತಮ್ಮ ವೃತ್ತಿ ಜೀವನದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದರು. ‘ವಿಕ್ರಾಂತ್ ರೋಣ’ (Vikrant Rona Movie) ಬಳಿಕ ಅವರು ಹೊಸ ಸಿನಿಮಾ ಘೋಷಿಸಲಿಲ್ಲ. ಈ ಚಿತ್ರ ರಿಲೀಸ್ ಆಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಈವರೆಗೂ ಅವರು ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಿಲ್ಲ. ಈಗ ಕಿಚ್ಚ ಬ್ಯಾಕ್​ ಟು ಬ್ಯಾಕ್ 3 ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆ ಪೈಕಿ ಒಂದು ಸಿನಿಮಾದ ಪ್ರೋಮೋಶೂಟ್ ಇಂದು (ಮೇ 22) ಆರಂಭ ಆಗಿದೆ. ಜೂನ್ 1ರಂದು ಸಿನಿಮಾ ಘೋಷಣೆ ಆಗಲಿದೆ. ಈ ದಿನಕ್ಕಾಗಿ ಸುದೀಪ್ ಫ್ಯಾನ್ಸ್ ಕಾದಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಆ ಬಳಿಕ ಸುದೀಪ್ ಯಾವುದೇ ಹೊಸ ಸಿನಿಮಾ ಅನೌನ್ಸ್ ಮಾಡಲಿಲ್ಲ. ಕೆಲ ಸಮಯ ಕಿಚ್ಚ ರಾಜಕೀಯದಲ್ಲೂ ಬ್ಯುಸಿ ಆದರು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅವರು ಪ್ರಚಾರ ಮಾಡಿದರು. ಈಗ ಚುನಾವಣೆ ಮುಗಿದಿದೆ. ಈಗ ಅವರು ಪ್ರೋಮೋಶೂಟ್​ನಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಚುನಾವಣೆ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದ ಸುದೀಪ್ ಅವರು ಮೇ 22ರಂದು ಸಿನಿಮಾ ಶೂಟಿಂಗ್​ನಲ್ಲಿ ಭಾಗಿ ಆಗುವುದಾಗಿ ಹೇಳಿದ್ದರು. ಅಂತೆಯೇ ಅವರು ಭರ್ಜರಿಯಾಗಿ ಪ್ರೋಮೋಶೂಟ್ ಮಾಡಿಸುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ್ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಭಾಷಾ’ ಚಿತ್ರದ ಪ್ರೋಮೋಶೂಟ್ ಇದು ಎಂದು ಹೇಳಲಾಗುತ್ತಿದೆ.

ಇದರ ಹೊರತಾಗಿ ಇನ್ನೂ ಎರಡು ಸಿನಿಮಾಗಳಲ್ಲಿ ಸುದೀಪ್ ನಟಿಸಲಿದ್ದಾರೆ. ತಮಿಳಿನ ನಿರ್ದೇಶಕ ಚರಣ್ ಜೊತೆ ಸುದೀಪ್​ ಕೈ ಜೋಡಿಸುತ್ತಾರೆ ಎನ್ನಲಾಗಿದೆ. ‘ಬಿಲ್ಲ ರಂಗ ಭಾಷಾ’ ಹಾಗೂ ಚರಣ್ ಜೊತೆಗಿನ ಸಿನಿಮಾ ಬಹುತೇಕ ಒಟ್ಟೊಟ್ಟಿಗೆ ಚಿತ್ರೀಕರಣಗೊಳ್ಳಲಿವೆ ಎನ್ನಲಾಗುತ್ತಿವೆ. ಇವೆರಡು ಸಿನಿಮಾಗಳ ಬಳಿಕ ನಂದ ಕಿಶೋರ್ ಅವರ ಜೊತೆ ಸುದೀಪ್ ಸಿನಿಮಾ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್