ಸಮಾಜ ಸೇವೆಗೆ ಮತ್ತೊಂದು ಕೊಡುಗೆ; ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಆರಂಭ

| Updated By: ರಾಜೇಶ್ ದುಗ್ಗುಮನೆ

Updated on: Jan 06, 2025 | 10:53 AM

ಕಿಚ್ಚ ಸುದೀಪ್ ಅವರು ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಎಂಬ ಹೊಸ ಚಾರಿಟೇಬಲ್ ಟ್ರಸ್ಟ್ ಆರಂಭಿಸಿದ್ದಾರೆ. ಈ ಫೌಂಡೇಶನ್ ಶಿಕ್ಷಣ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸುವ ಗುರಿ ಹೊಂದಿದೆ. ಅವರ ‘ಮ್ಯಾಕ್ಸ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ಭವಿಷ್ಯದಲ್ಲಿ ಅವರು ‘ಬಿಲ್ಲ ರಂಗ ಭಾಷ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಮಾಜ ಸೇವೆಗೆ ಮತ್ತೊಂದು ಕೊಡುಗೆ; ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಆರಂಭ
ಸುದೀಪ್ ಕೇರ್ ಫೌಂಡೇಷನ್
Follow us on

ಕಿಚ್ಚ ಸುದೀಪ್ ಅವರು ನಟನೆಯ ಜೊತೆಗೆ  ಸಮಾಜ ಸೇವೆಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರಿಂದ ಅನೇಕ ಸಮಾಜಮುಖಿ ಕೆಲಸಗಳೂ ನಡೆದಿವೆ. ಈ ಮೂಲಕ ಅವರು ಅನೇಕರಿಗೆ ಮಾದರಿ ಆಗಿದ್ದಾರೆ. ಈಗ ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಎಂಬ ಹೊಸ ಚಾರಿಟೇಬಲ್ ಟ್ರಸ್ಟ್ ಆರಂಭಿಸಲಾಗಿದೆ. ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ಈ ಫೌಂಡೇಶನ್ ಲೋಗೋ ಹಾಗೂ ಟೀ ಶರ್ಟ್​ನ ಇತ್ತೀಚೆಗೆ ಬಿಡುಗಡೆ ಮಾಡಿದರು. ಈ ಮೂಲಕ ಸಮಾಜುಮುಖಿ ಕೆಲಸ ಮಾಡಲು ಸುದೀಪ್ ಅವರು ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.

ಸುದೀಪ್ ಅವರು ಈಗಾಗಲೇ ‘ಕಿಚ್ಚ ಸುದೀಪ ಚಾರಿಟೆಬಲ್ ಸೊಸೈಟಿ’ ಹೊಂದಿದ್ದಾರೆ. ಇದರ ಅಡಿಯಲ್ಲಿ ಅವರು ಶಾಲೆಗಳನ್ನು ದತ್ತು ಪಡೆದು ಅದರ ಏಳ್ಗೆಗಾಗಿ ದುಡಿಯುತ್ತಿದ್ದಾರೆ. ಕಷ್ಟದಲ್ಲಿರುವ ಮಕ್ಕಳಿಗೆ ಸ್ಕಾಲರ್​ಶಿಪ್ ಕೂಡ ಇದರ ಮೂಲಕ ನೀಡಲಾಗುತ್ತಿದೆ. ಕೊವಿಡ್ ಸಂದರ್ಭದಲ್ಲಿ ಕಷ್ಟದಲ್ಲಿರುವ ಕನ್ನಡದ ಹಿರಿಯ ಕಲಾವಿದರು ಹಾಗೂ ತಂತ್ರಜ್ಞರಿಗೆ ದಿನಸಿ ಸಾಮಗ್ರಿ ನೀಡಿದ್ದರು. ಈಗ ಸುದೀಪ್ ಅವರು ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಮೂಲಕ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ.

ಉದ್ದೇಶ ಏನು?

ಸದ್ಯ ಆರಂಭಿಸಿರುವ ‘ಕಿಚ್ಚ ಸುದೀಪ್ ಕೇರ್ ಫೌಂಡೇಶನ್’ ಮೂಲಕ ಶಿಕ್ಷಣ ಹಾಗೂ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶ ಇಟ್ಟುಕೊಳ್ಳಲಾಗಿದೆ. ಈ ಮೂಲಕ ಅವರು ಮತ್ತಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.

‘ಮ್ಯಾಕ್ಸ್’ ಗೆಲುವು

ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಅಬ್ಬರದ ಗಳಿಕೆ ಮಾಡುತ್ತಿದೆ. ಈ ಸಿನಿಮಾ ದಾಖಲೆಗಳ ಮೇಲೆ ದಾಖಲೆ ಬರುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಸಿನಿಮಾ ಪ್ರದರ್ಶನ ಕಾಣುವ ನಿರೀಕ್ಷೆ ಇದೆ. ಈ ಚಿತ್ರ ಯಾವ ಒಟಿಟಿಯಲ್ಲಿ ಬರುತ್ತದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ಸುದೀಪ್ ಸಿಕ್ಕ ಮೇಲೆ ಬದುಕು ಬದಲಾಯಿತು; ಅರ್ಜುನ್ ಜನ್ಯ ಹೇಳಿದ ಅಪರೂಪದ ವಿಚಾರ

ಹೊಸ ಸಿನಿಮಾಗಳು

ಸುದೀಪ್ ಅವರು ಈಗಾಗಲೇ ‘ಬಿಲ್ಲ ರಂಗ ಭಾಷ’ ಚಿತ್ರನ ಫೈನಲ್ ಮಾಡಿದ್ದಾರೆ. ಅನೂಪ್ ಭಂಡಾರಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೂ ಸಾಕಷ್ಟು ನಿರೀಕ್ಷೆ ಇದೆ. ಬಿಗ್ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಇನ್ನೂ ಕೆಲವು ಚಿತ್ರಗಳಲ್ಲಿ ಸುದೀಪ್ ಬ್ಯುಸಿ ಇದ್ದಾರೆ. ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಗುರಿ ಹೊಂದಿದ್ದಾರೆ. ಸದ್ಯ ‘ಬಿಗ್ ಬಾಸ್’ ಶೋ ನಡೆಸಿಕೊಡುತ್ತಿದ್ದು, ಮೂರು ವಾರಗಳಲ್ಲಿ ಪೂರ್ಣಗೊಳ್ಳಲಿದೆ. ಆ ಬಳಿಕ ಸುದೀಪ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.