AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿತೆರೆಗೆ ಬಡ್ತಿ ಪಡೆದ ಅಥರ್ವಗೆ ಸುದೀಪ್ ಸಾಥ್ ‘ಟೇಲ್ಸ್ ಆಫ್ ಮಹಾನಗರ’ಕ್ಕೆ ಕಿಚ್ಚನ ಖಡಕ್ ಧ್ವನಿ

Kichcha Sudeep: ನಟ ಕಿಚ್ಚ ಸುದೀಪ್ ಮತ್ತೊಮ್ಮೆ ಹೊಸಬರ ತಂಡಕ್ಕೆ ಬೆಂಬಲ ನೀಡಿದ್ದಾರೆ, ಯುವಕರ ಹೊಸ ಪ್ರಯತ್ನ 'ಟೇಲ್ಸ್ ಆಫ್ ಮಹಾನಗರ' ಸಿನಿಮಾದ ಟೀಸರ್​ಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ಹಿರಿತೆರೆಗೆ ಬಡ್ತಿ ಪಡೆದ ಅಥರ್ವಗೆ ಸುದೀಪ್ ಸಾಥ್ 'ಟೇಲ್ಸ್ ಆಫ್ ಮಹಾನಗರ'ಕ್ಕೆ ಕಿಚ್ಚನ ಖಡಕ್ ಧ್ವನಿ
ಟೇಲ್ಸ್ ಆಫ್ ಮಹಾನಗರ
ಮಂಜುನಾಥ ಸಿ.
|

Updated on: Aug 12, 2023 | 10:57 PM

Share

ನಟ ಕಿಚ್ಚ ಸುದೀಪ್ (Kichcha Sudeep) ಹೊಸ ಪ್ರತಿಭೆಗಳಿಗೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದ್ದಾರೆ. ಹಲವು ಹೊಸ ಚಿತ್ರ ತಂಡಗಳಿಗೆ ಸೂಕ್ತ ರೀತಿಯ ಸಹಾಯ, ಮಾರ್ಗದರ್ಶನಗಳನ್ನು ನೀಡಿದ್ದಾರೆ, ನೀಡುತ್ತಲೇ ಇದ್ದಾರೆ. ಇದೀಗ ಯುವ ತಂಡವೊಂದು ಮಾಡಿರುವ ಹೊಸ ಸಿನಿಮಾಕ್ಕೆ ಬೆಂಬಲ ನೀಡಿರುವ ಸುದೀಪ್, ಟೀಸರ್​ಗೆ (Teaser) ತಮ್ಮ ಧ್ವನಿ ನೀಡಿದ್ದಾರೆ. ಆ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

‘ಪುನರ್ ​ವಿವಾಹ’, ‘ಪತ್ತೆದಾರಿ ಪ್ರತಿಭಾ’ ಧಾರಾವಾಹಿಗಳಲ್ಲಿ ನಟಿಸಿರುವ ಅಥರ್ವ ನಾಯಕನಾಗಿ ನಟಿಸಿರುವ ‘ಟೇಲ್ಸ್ ಆಫ್ ಮಹಾನಗರ’ ಸಿನಿಮಾದ ಟೀಸರ್ ಇದೀಗ ಬಿಡುಗಡೆ ಆಗಿದ್ದು, ಟೀಸರ್​ಗೆ ನಟ ಕಿಚ್ಚ ಸುದೀಪ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಕಿರುತೆರೆಯಿಂದ ಹಿರಿತೆರೆಗೆ ಬಡ್ತಿ ಪಡೆದಿರುವ ಅಥರ್ವ, ಜನಪ್ರಿಯ ನಿರ್ದೇಶಕ ಬಿ.ಎನ್ ವಿಜಯ್ ಕುಮಾರ್(ಗೆಜ್ಜೆನಾದ) ಅವರ ಪುತ್ರ. ‘ಟೇಲ್ಸ್ ಆಫ್ ಮಹಾನಗರ’ ಸಿನಿಮಾವನ್ನು ಧರ್ಮೇಂದ್ರ ಎಂ ರಾವ್ ಅವರೊಟ್ಟಿಗೆ ಸೇರಿ ಇವರೇ ನಿರ್ಮಾಣ ಮಾಡಿದ್ದಾರೆ. ವಿಜಯ್ ಕುಮಾರ್ ಅವರು ಈ ಹಿಂದೆ “ಗೆಜ್ಜೆನಾದ”, ” ನಂದ ಲವ್ಸ್ ನಂದಿತಾ”, “ಕನ್ನಡದ ಕಂದ”, “ಆಟ” ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

‘ಟೇಲ್ಸ್ ಆಫ್ ಮಹಾನಗರ’ ಸಿನಿಮಾವು ಮಹಾನಗರವೊಂದರಲ್ಲಿ ನಡೆಯುವ ಕಥೆಯಾಗಿದೆ. ಅಧಿಕಾರ, ಹೆಣ್ಣು ಹಾಗೂ ಧರ್ಮ ಈ ಮೂರು ವಿಷಯಗಳಿಗೆ ಸಂಬಂಧಿಸಿದ ಮೂರು ವಿಭಿನ್ನ ಕಥೆಗಳು ಸಿನಿಮಾದಲ್ಲಿವೆ. ಈ ಸಿನಿಮಾಕ್ಕೆ ನಾಯಕ ಅಥರ್ವ್ ಸ್ವತಃ ಕಥೆ ಬರೆದಿದ್ದಾರೆ. ಚಿತ್ರಕಥೆಯನ್ನು ಅಥರ್ವ್ ಹಾಗೂ ರಾಜೀವ್ ಕಿರಣ್ ವೆನಿಯಲ್ ಒಟ್ಟು ಸೇರಿ ರಚಿಸಿದ್ದಾರೆ. ಸಿನಿಮಾದಲ್ಲಿ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರೆಮೋಲ, ಸಂಪತ್ ಮೈತ್ರೇಯ, ಬಿ.ಸುರೇಶ್, ರೂಪಾ ರಾಯಪ್ಪ, ಆಶೀಶ್, ಬಿ.ಎಂ.ವೆಂಕಟೇಶ್, ಮೋಹನ್, ಆರ್ ಜೆ ಅನೂಪ, ನಾಗರಾಜ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ:ಕಿಚ್ಚ ಸುದೀಪ್ v/s ನಿರ್ಮಾಪಕ ಕುಮಾರ್: ಮೊದಲ ದಿನದ ಸಭೆ ಅಂತ್ಯ, ನಾಳೆಯೂ ಮುಂದುವರೆಯಲಿದೆ ಚರ್ಚೆ

ಕೆಲವು ಜಾಹೀರಾತು, ಕಿರುಚಿತ್ರ ಹಾಗೂ ಧಾರಾವಾಹಿಗಳನ್ನು ನಿರ್ದೇಶನ ಮಾಡಿರುವ ರಾಜೀವ್ ಕಿರಣ್ ವೆನಿಯಲ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈಗ ಬಿಡುಗಡೆ ಆಗಿರುವ ಟೀಸರ್​ನಲ್ಲಿ ಕೆಲವು ಗಮನಾರ್ಹ ಅಂಶಗಳಿದ್ದು, ಟೀಸರ್ ಕುತೂಹಲ ಕೆರಳಿಸುವಂತಿದೆ. ಸಿನಿಮಾದ ಛಾಯಾಗ್ರಹಣವನ್ನು ರೌಶನ್ ಜಾ ಮಾಡಿದ್ದಾರೆ. ಪ್ರದೀಪ್ ಗೋಪಾಲ್ ಸಂಕಲನ ಹಾಗೂ ಸಿದ್ಧಾರ್ಥ್ ಪರಾಶರ್ ಸಂಗೀತ ನಿರ್ದೇಶನ ಸಿನಿಮಾಕ್ಕಿದೆ. ಸಿನಿಮಾವು ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಲಿದೆ.

ಇನ್ನು ಕಿಚ್ಚ ಸುದೀಪ್ ಅವರು ಪ್ರಸ್ತುತ ತಮ್ಮ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚೆನ್ನೈ ಸಮೀಪದಲ್ಲಿ ಹೊಸ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದೆ. ಟೀಸರ್ ಬಹುವಾಗಿ ಗಮನ ಸೆಳೆದಿದ್ದು, ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಶೀಘ್ರದಲ್ಲಿಯೇ ಸಿನಿಮಾದ ಹೆಸರು ಘೋಷಣೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್