AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ಪುಣ್ಯಭೂಮಿ ಆಗ್ಬೇಕು’: ವಿಷ್ಣು ಸ್ಮಾರಕದ ಬಗ್ಗೆ ಸುದೀಪ್​ ಪ್ರತಿಕ್ರಿಯೆ

ವಿಷ್ಣುವರ್ಧನ್​ ಅವರ ಪುಣ್ಯಭೂಮಿಗೆ ಸಂಬಂಧಿಸಿದಂತೆ ಅಭಿಮಾನಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ‘ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ್ದಾರೆ.

‘ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲೇ ಪುಣ್ಯಭೂಮಿ ಆಗ್ಬೇಕು’: ವಿಷ್ಣು ಸ್ಮಾರಕದ ಬಗ್ಗೆ ಸುದೀಪ್​ ಪ್ರತಿಕ್ರಿಯೆ
ವಿಷ್ಣುವರ್ಧನ್​ ಸಮಾಧಿ, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Dec 17, 2023 | 7:35 AM

Share

ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್​ (Vishnuvardhan) ಅವರ ಸ್ಮಾರಕ ಹಾಗೂ ಪುಣ್ಯಭೂಮಿಗೆ ಸಂಬಂಧಿಸಿದಂತೆ ಮೊದಲಿನಿಂದಲೂ ಗೊಂದಲಗಳು ಏರ್ಪಟ್ಟಿವೆ. ಈ ಕುರಿತು ನಟ ಕಿಚ್ಚ ಸುದೀಪ್​ ಅವರು ಮತ್ತೊಮ್ಮೆ ತಮ್ಮ ಅನಿಸಿಕೆ ಏನು ಎಂಬುದನ್ನು ಹಂಚಿಕೊಂಡಿದ್ದಾರೆ. ಇಂದು (ಡಿ.17) ವಿಷ್ಣುವರ್ಧನ್​ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್​ (Kichcha Sudeep) ಅವರು ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಸುದೀಪ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

‘ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ಸುದೀಪ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಪ್ರತಿಭಟನೆ ಯಾಕೆ?

ಡಾ. ವಿಷ್ಣುವರ್ಧನ್​ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್‌ ಸ್ಟುಡಿಯೋ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧ ಹೇರಲಾಗುತ್ತಿದೆ. ಅಭಿಮಾನ್‌ ಸ್ಟುಡಿಯೋದ ಮಾಲೀಕರಿಂದ ಈ ರೀತಿ ಆಗುತ್ತಿದೆ ಎಂದು ವಿಷ್ಣು ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಆಚರಿಸಲು ಹಲವಾರು ತೊಂದರೆಗಳನ್ನು ನೀಡಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದು, ಈ ಸಂಬಂಧವಾಗಿ ಪ್ರತಿಭಟನೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್​ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?

ಇಂದು (ಡಿ.17) ಡಾ. ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಮಾಡಲಾಗುತ್ತಿದೆ. ಫ್ರೀಡಂ ಪಾರ್ಕ್​ನಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಕನ್ನಡಪರ ಸಂಘಟನೆಗಳು, ಕಲಾವಿದರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿಷ್ಣುವರ್ಧನ್‌ ಅವರ ಒಡನಾಡಿಗಳೆಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು