ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕ ಹಾಗೂ ಪುಣ್ಯಭೂಮಿಗೆ ಸಂಬಂಧಿಸಿದಂತೆ ಮೊದಲಿನಿಂದಲೂ ಗೊಂದಲಗಳು ಏರ್ಪಟ್ಟಿವೆ. ಈ ಕುರಿತು ನಟ ಕಿಚ್ಚ ಸುದೀಪ್ ಅವರು ಮತ್ತೊಮ್ಮೆ ತಮ್ಮ ಅನಿಸಿಕೆ ಏನು ಎಂಬುದನ್ನು ಹಂಚಿಕೊಂಡಿದ್ದಾರೆ. ಇಂದು (ಡಿ.17) ವಿಷ್ಣುವರ್ಧನ್ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ (Kichcha Sudeep) ಅವರು ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನೆ ನಡೆಯಲಿರುವ ಹಿನ್ನೆಲೆಯಲ್ಲಿ ಸುದೀಪ್ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
‘ಡಾ. ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ’ ಎಂದು ಕಿಚ್ಚ ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ.
— Kichcha Sudeepa (@KicchaSudeep) December 16, 2023
ಡಾ. ವಿಷ್ಣುವರ್ಧನ್ ಅವರ ಅಂತ್ಯ ಸಂಸ್ಕಾರವಾದ ಅಭಿಮಾನ್ ಸ್ಟುಡಿಯೋ ಒಳಗೆ ಪ್ರವೇಶಿಸಲು ಅಭಿಮಾನಿಗಳಿಗೆ ನಿರ್ಬಂಧ ಹೇರಲಾಗುತ್ತಿದೆ. ಅಭಿಮಾನ್ ಸ್ಟುಡಿಯೋದ ಮಾಲೀಕರಿಂದ ಈ ರೀತಿ ಆಗುತ್ತಿದೆ ಎಂದು ವಿಷ್ಣು ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಆಚರಿಸಲು ಹಲವಾರು ತೊಂದರೆಗಳನ್ನು ನೀಡಲಾಗುತ್ತಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದು, ಈ ಸಂಬಂಧವಾಗಿ ಪ್ರತಿಭಟನೆ ಮಾಡಲಾಗುತ್ತಿದೆ.
ಇದನ್ನೂ ಓದಿ: ಅವಿನಾಶ್-ಮಾಳವಿಕಾ ಜೀವನದಲ್ಲಿ ವಿಷ್ಣುವರ್ಧನ್ಗೆ ಏಕಷ್ಟು ಪ್ರಾಧಾನ್ಯತೆ? ದೇವರ ಕೋಣೆಯಲ್ಲಿ ವಿಷ್ಣು ಫೋಟೊ ಏಕೆ?
ಇಂದು (ಡಿ.17) ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಫ್ರೀಡಂ ಪಾರ್ಕ್ನಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಪ್ರತಿಭಟನೆ ನಡೆಯಲಿದೆ. ಇದರಲ್ಲಿ ಕನ್ನಡಪರ ಸಂಘಟನೆಗಳು, ಕಲಾವಿದರ ಸಂಘ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.