AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದರ್ಶನ್ ​ಮೇಲೆ ಕೋಪ ಇಲ್ಲ, ನಾವು ಕಿತ್ತಾಡಿಕೊಂಡಿಲ್ಲ’; ಬರ್ತ್​ಡೇ ದಿನ ಖುಷಿ ಖುಷಿಯಿಂದ ಮಾತನಾಡಿದ ಸುದೀಪ್

ಇತ್ತೀಚೆಗೆ ಸುಮಲತಾ ಅಂಬರೀಷ್ ಬರ್ತ್​ಡೇ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ.

‘ದರ್ಶನ್ ​ಮೇಲೆ ಕೋಪ ಇಲ್ಲ, ನಾವು ಕಿತ್ತಾಡಿಕೊಂಡಿಲ್ಲ’; ಬರ್ತ್​ಡೇ ದಿನ ಖುಷಿ ಖುಷಿಯಿಂದ ಮಾತನಾಡಿದ ಸುದೀಪ್
ಸುದೀಪ್-ದರ್ಶನ್
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Sep 02, 2023 | 1:17 PM

ನಟ ದರ್ಶನ್ ಹಾಗೂ ಸುದೀಪ್ (Sudeep) ಮಧ್ಯೆ ವೈಮನಸ್ಸು ಮೂಡಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಒಂದಾಗಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಈ ವಿಚಾರದಲ್ಲಿ ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಲೇ ಬಂದಿದ್ದಾರೆ. ಇಂದು (ಸೆಪ್ಟೆಂಬರ್ 2) ಸುದೀಪ್ ಜನ್ಮದಿನ. ಈ ವೇಳೆ ಅವರು ದರ್ಶನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ದರ್ಶನ್ ಮೇಲೆ ಕೋಪವಿಲ್ಲ’ ಎಂದು ಅವರು ನೇರವಾಗಿ ಹೇಳಿದ್ದಾರೆ. ಜೊತೆಗೆ ರಾಜಿ ಸಂಧಾನದ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಸುಮಲತಾ ಅಂಬರೀಷ್ ಬರ್ತ್​ಡೇ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ‘ದರ್ಶನ್ ಹಾಗೂ ನಾನು ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ನನಗೆ ಖುಷಿ ತಂದಿದೆ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ನಂಗೂ ಕೆಲವು ಪ್ರಶ್ನೆಗಳು ಇವೆ, ಅದೇ ರೀತಿ ದರ್ಶನ್​ಗೂ ಪ್ರಶ್ನೆ ಇದೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ಸುಮಲತಾ ಮೇಲಿನ ಗೌರವದಿಂದ ಆ ಪಾರ್ಟಿಗೆ ಹೋಗಿದ್ದೆ’ ಎಂದಿದ್ದಾರೆ ಸುದೀಪ್.

‘ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್​​ಗಳನ್ನು ನೋಡಲು ಹೋಗುವುದಿಲ್ಲ. ದರ್ಶನ್ ಏನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ನಾನು ನೋಡಿಲ್ಲ. ನೇರವಾಗಿ ಏನಾದರೂ ಹೇಳಿದರೆ ಅದನ್ನು ಪರಿಗಣನೆ ಮಾಡುತ್ತೇನೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡದಲ್ಲ. ಕೆಲವೊಂದಕ್ಕೆ ಸಮಯ ಕೂಡಿ ಆ ಬಳಿಕ ಸರಿ ಹೋಗುತ್ತದೆ. ನಾವು ಇಬ್ಬರು ಮತ್ತೆ ಒಂದಾದ್ರೆ ನನಗೆ ಖುಷಿ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಸುದೀಪ್ ಬರ್ತ್​ಡೇಗಿಲ್ಲ ‘ಬಿಲ್ಲ ರಂಗ ಭಾಷಾ’ ಅಪ್​ಡೇಟ್​; ಕಾರಣ ತಿಳಿಸಿದ ಅನೂಪ್ ಭಂಡಾರಿ

ಅಭಿಮಾನಿಗಳು ಬರ್ತ್​​ಡೇ ಆಚರಿಸುತ್ತಿರುವ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ‘ಎಲ್ಲವೂ ಸರ್ಪ್ರೈಸ್ ಆಗಿ ಬರುತ್ತಿದೆ. ರಾತ್ರಿಯಿಂದ ನಿದ್ದೆಯನ್ನೇ ಮಾಡಿಲ್ಲ. ನಿಮ್ಮಿಂದಲೇ ತಾಳ್ಮೆ ಕಲಿತಿದ್ದೀನಿ. ನಾನು ಹೇಗೆ ಬೇಕಾದ್ರು ಇರುತ್ತೇನೆ ಎನ್ನುವುದಕ್ಕೆ ಆಗುವುದಿಲ್ಲ. ಕಲಾವಿದರಾಗಿ ನಾವು ಸರ್ವೆಂಟ್ ಆಗಬೇಕು. ಸಾವಿರ ನೋವಿರಲಿ ಎಲ್ಲರನ್ನೂ ಭೇಟಿಯಾಗಬೇಕು’ ಎಂದಿದ್ದಾರೆ ಕಿಚ್ಚ. ನಿರ್ದೇಶನಕ್ಕೆ ಸುದೀಪ್ ಮರಳುತ್ತಿದ್ದಾರೆ. ಇದಕ್ಕೆ ಅವರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದಾರಂತೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ