Kabza: ‘ಕಬ್ಜ’ ಟೀಸರ್​ ಬಗ್ಗೆ ಮಾತಾಡಿದ ಕಿಚ್ಚ ಸುದೀಪ್​; ಉಪ್ಪಿ ಅಭಿಮಾನಿಗಳಲ್ಲಿ ಜೋರಾಯ್ತು ಕ್ರೇಜ್​

Kabza Movie Teaser: ‘ಕಬ್ಜ’ ಸಿನಿಮಾದ ಮೇಲೆ ಅಭಿಮಾನಿಗಳ ಕ್ರೇಜ್​ ಹೆಚ್ಚುತ್ತಲೇ ಇದೆ. ಈಗ ಕಿಚ್ಚ ಸುದೀಪ್​ ಅವರು ಟೀಸರ್​ ರಿಲೀಸ್​ ಬಗ್ಗೆ ಮಾತನಾಡಿ, ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

Kabza: ‘ಕಬ್ಜ’ ಟೀಸರ್​ ಬಗ್ಗೆ ಮಾತಾಡಿದ ಕಿಚ್ಚ ಸುದೀಪ್​; ಉಪ್ಪಿ ಅಭಿಮಾನಿಗಳಲ್ಲಿ ಜೋರಾಯ್ತು ಕ್ರೇಜ್​
ಕಿಚ್ಚ ಸುದೀಪ್
Follow us
TV9 Web
| Updated By: ಮದನ್​ ಕುಮಾರ್​

Updated on: Sep 15, 2022 | 7:21 AM

ಬಹುನಿರೀಕ್ಷಿತ ‘ಕಬ್ಜ’ (Kabza) ಸಿನಿಮಾದ ಕ್ರೇಜ್​ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಚಿತ್ರದಲ್ಲಿ ರಿಯಲ್​ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್​, ಶ್ರೀಯಾ ಶರಣ್​ ಮುಂತಾದವರು ನಟಿಸುತ್ತಿದ್ದಾರೆ. ಆರ್​. ಚಂದ್ರು ಬತ್ತಳಿಕೆಯಿಂದ ಬರಲಿರುವ ಈ ಸಿನಿಮಾದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಈ ಚಿತ್ರದ ಟೀಸರ್​ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಉಪೇಂದ್ರ (Upendra) ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ದಿನ ಮುನ್ನ, ಅಂದರೆ ಸೆ.17ರಂದು ಈ ಟೀಸರ್​ ರಿಲೀಸ್​ ಆಗಲಿದೆ. ಆ ಬಗ್ಗೆ ಕಿಚ್ಚ ಸುದೀಪ್ (Kichcha Sudeep) ಕೂಡ ಮಾತನಾಡಿದ್ದು, ಅಭಿಮಾನಿಗಳಲ್ಲಿ ಇನ್ನಷ್ಟು ಕ್ರೇಜ್​ ಹೆಚ್ಚುವಂತೆ ಮಾಡಿದ್ದಾರೆ.

ಹತ್ತಾರು ಕಾರಣಗಳಿಂದಾಗಿ ‘ಕಬ್ಜ’ ಸಿನಿಮಾ ಮೇಲೆ ಭರವಸೆ ಮೂಡಿದೆ. ಈಗಾಗಲೇ ಬಿಡುಗಡೆ ಆಗಿರುವ ಒಂದೊಂದು ಪೋಸ್ಟರ್​ ಕೂಡ ಸಖತ್​ ಭಿನ್ನವಾಗಿದೆ. ಮೇಕಿಂಗ್​ ಗುಣಮಟ್ಟವಂತೂ ಬೇರೊಂದು ಹಂತದಲ್ಲಿ ಇರಲಿದೆ ಎಂಬುದಕ್ಕೆ ಈ ಪೋಸ್ಟರ್​ಗಳೇ ಸಾಕ್ಷಿ ಒದಗಿಸಿವೆ. ಅದು ಸುದೀಪ್​ ಅವರ ಗಮನವನ್ನೂ ಸೆಳೆದಿದೆ. ಆ ಕುರಿತು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

‘ಮೊದಲನೆಯದಾಗಿ ಎಲ್ಲರಿಗೂ ಬಿಗ್​ ಹೆಲೋ. ಕಬ್ಜ ಚಿತ್ರದ ಡಿಫರೆಂಟ್​ ಪೋಸ್ಟರ್​ಗಳನ್ನು ಎಲ್ಲರೂ ನೋಡಿರುತ್ತೀರಿ. ಮೂರು ವರ್ಷಗಳ ಸತತ ಕೆಲಸದ ನಂತರ ಈಗ ಮೊದಲ ಬಾರಿ, ಮೊದಲ ಟೀಸರ್​ ಸೆ.17ರಂದು ಸಂಜೆ 5 ಗಂಟೆ 4 ನಿಮಿಷಕ್ಕೆ ನಿಮ್ಮ ಮುಂದೆ ಬರುತ್ತಿದೆ. ಇಡೀ ಕಬ್ಜ ತಂಡಕ್ಕೆ ಆಲ್​ ದಿ ಬೆಸ್ಟ್​ ಹೇಳುತ್ತೇನೆ. ತಾವೆಲ್ಲರೂ ಈ ಟೀಸರ್​ ನೋಡಿ, ಶೇರ್​ ಮಾಡಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
‘ವಿಕ್ರಾಂತ್​ ರೋಣ’ ಸೂಪರ್​ ಹಿಟ್​; ಕಿಚ್ಚ ಸುದೀಪ್​ ಅಭಿಮಾನಿಗಳಿಗೆ ‘ಕಬ್ಜ’ ಮೇಲೆ ಹೆಚ್ಚಿತು ನಿರೀಕ್ಷೆ
Image
Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

ಇದು ಪ್ಯಾನ್​ ಇಂಡಿಯಾ ಸಿನಿಮಾಗಳ ಜಮಾನಾ. ಕನ್ನಡದ ಹಲವು ಚಿತ್ರಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುತ್ತಿವೆ. ಆ ಸಾಲಿಗೆ ‘ಕಬ್ಜ’ ಕೂಡ ಸೇರ್ಪಡೆ ಆಗುತ್ತಿದೆ. ಕನ್ನಡದ ಈ ಸಿನಿಮಾ ತಮಿಳು, ಮಲಯಾಳಂ, ಹಿಂದಿ, ತಮಿಳು ಮುಂತಾದ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗಲಿದೆ. ಅಂಡರ್​ವರ್ಲ್ಡ್​ ಕಥಾಹಂದರ ಇರುವ ಈ ಚಿತ್ರ ರೆಟ್ರೋ ಶೈಲಿಯಲ್ಲಿ ಮೂಡಿಬರುತ್ತಿರುವುದು ಇನ್ನೊಂದು ವಿಶೇಷ. ಅದಕ್ಕೆ ತಕ್ಕಂತೆಯೇ ಉಪೇಂದ್ರ ಅವರ ಗೆಟಪ್​ ಇದೆ.

‘ಕಬ್ಜ’ ಚಿತ್ರ ಸೆಟ್ಟೇರಿದಾಗಿನಿಂದಲೂ ಸಿಕ್ಕಾಪಟ್ಟೆ ಹೈಪ್​ ಪಡೆದುಕೊಂಡಿದೆ. ಉಪೇಂದ್ರ ಮತ್ತು ಸುದೀಪ್​ ಅವರಿಗೆ ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆ ಅಭಿಮಾನಿಗಳು ಇದ್ದಾರೆ. ಹಾಗಾಗಿ ದೇಶಾದ್ಯಂತ ಈ ಟೀಸರ್​ ಕುರಿತು ನಿರೀಕ್ಷೆ ಮೂಡಿದೆ. ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿಯೇ ಟೀಸರ್​ ಅನಾವರಣ ಆಗುತ್ತಿರುವುದರಿಂದ ಫ್ಯಾನ್ಸ್​ ಪಾಲಿಗೆ ಡಬಲ್​ ಧಮಾಕ ಆಗಿರಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್