AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​

ಸನ್ಮಾನ ಪಡೆದ ನಂತರ ಮಾತನಾಡಿದ ಸುದೀಪ್​, ನಾನು ಚಿತ್ರರಂಗಕ್ಕೆ ಬಂದು 25 ವರ್ಷ ಆಯ್ತು ಎನಿಸಲೇ ಇಲ್ಲ ಎಂದು ಮಾತು ಆರಂಭಿಸಿದರು.

Kichcha Sudeep: ನೀವು ಕೊಟ್ಟ ಪ್ರೀತಿ ಎದುರು ಬಾಕ್ಸ್​ ಆಫೀಸ್​ ಗಳಿಕೆ ಏನೂ ಅಲ್ಲ; ಕಿಚ್ಚ ಸುದೀಪ್​
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 15, 2021 | 8:55 PM

Share

ನಟ ಕಿಚ್ಚ ಸುದೀಪ್​ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಕಳೆದಿದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಸುದೀಪ್​ ಅಭಿಮಾನಿಗಳನ್ನು ರಂಜಿಸಿದ್ದಾರೆ.  ಈ ಸಂದರ್ಭದಲ್ಲಿ ಕಿಚ್ಚ ಸುದೀಪ್​ ಅವರನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಸನ್ಮಾನ ಮಾಡಿದ್ದಾರೆ. ನಂತರ ಮಾತನಾಡಿದ ಸುದೀಪ್​, ಅಭಿಮಾನಿಗಳು ಹಾಗೂ ಚಿತ್ರರಂಗ ಕೊಟ್ಟ ಪ್ರೀತಿ ಎದುರಿಗೆ ಬಾಕ್ಸ್​ ಆಫೀಸ್​ ಗಳಿಕೆ ಏನು ಅಲ್ಲ ಎಂದಿದ್ದಾರೆ.

ಸನ್ಮಾನ ಪಡೆದ ನಂತರ ಮಾತನಾಡಿದ ಸುದೀಪ್​, ನಾನು ಚಿತ್ರರಂಗಕ್ಕೆ ಬಂದು 25 ವರ್ಷ ಆಯ್ತು ಎನಿಸಲೇ ಇಲ್ಲ. ಹಾಗೆ ಅನಿಸೋಕೆ ನೀವು ಬಿಟ್ಟಿಲ್ಲ. ನಾವು ಎಷ್ಟು ಸಿನಿಮಾ ಮಾಡಿದ್ದೇವೆ ಎನ್ನುವುದು ಒಂದು ಲೆಕ್ಕ ಆದರೆ, ಬಾಕ್ಸ್​ ಆಫೀಸ್​ನಲ್ಲಿ ಒಳ್ಳೆ ಕಲೆಕ್ಷನ್​ ಮಾಡಿದ ಸಿನಿಮಾಗಳೆಷ್ಟು ಎನ್ನುವುದು ಮತ್ತೊಂದು ಲೆಕ್ಕ. ಸಿನಿಮಾ ರಂಗ ಹಾಗೂ ಅಭಿಮಾನಿಗಳು ಕೊಟ್ಟ ಪ್ರೀತಿ ಎದುರಿಗೆ ಬಾಕ್ಸ್​ ಆಫೀಸ್​ ಗಳಿಕೆ ಏನು ಅಲ್ಲ ಎಂದರು.

ಕ್ರೇಜಿಸ್ಟಾರ್​ ರವಿಚಂದ್ರನ್, ಸೆಂಚ್ಯುರಿ ಸ್ಟಾರ್​ ಶಿವರಾಜ್ ಕುಮಾರ್, ರವಿಶಂಕರ್​ ಸೇರಿದಂತೆ ಬಹುತೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಇವರ ಬಗ್ಗೆ ಮಾತನಾಡಿದ ಸುದೀಪ್​, ನಮಗೆ ಇನ್ನೂ ಹಿರಿಯರಿದ್ದಾರೆ. ನಮಗೆ ಇನ್ನೂ ತಪ್ಪುಮಾಡುವ ಅವಕಾಶವಿದೆ. ಶಿವಣ್ಣ-ರವಿಶಂಕರ್​ ನೀವಿರುವ ತನಕ ನಾನು ತಪ್ಪು ಮಾಡುತ್ತೇನೆ. ಏಕೆಂದರೆ, ನೀವು ಅದನ್ನು ತಿದ್ದುತ್ತೀರಿ ಎನ್ನುವ ವಿಶ್ವಾಸವಿದೆ ಎಂದರು ಸುದೀಪ್​.

ನಾನು ಎಷ್ಟೋ ವೇದಿಕೆ ಹತ್ತಿದ್ದೇನೆ. ಇದೇ ಮೊದಲ ಬಾರಿಗೆ ನರ್ವಸ್​ ಆಗಿದ್ದೇನೆ. ಕನ್ನಡ ಚಿತ್ರರಂಗದಲ್ಲಿ ನನಗೊಂದು ಸ್ಥಾನ ಸಿಕ್ಕಿದೆ. ಕನ್ನಡ ಚಿತ್ರರಂಗದ ಪುಟದಲ್ಲಿ ನನಗೊಂದು ಹಾಳೆಯಿರುವ ಬಗ್ಗೆ ಎನ್ನುವ ಖುಷಿ ಇದೆ. ಕನ್ನಡ ಚಿತ್ರರಂಗದ ಬಗ್ಗೆ ಪುಸ್ತಕ ಬರೆದರೆ ಒಂದು ಹಾಳೆ ನನಗೆ ಸಿಗುತ್ತದೆ ಎನ್ನುವುದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ ಎಂದರು.

1997ರಲ್ಲಿ ತೆರೆಕಂಡ ‘ತಾಯವ್ವ’ ಸಿನಿಮಾ ಮೂಲಕ ಸುದೀಪ್​​ ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. ಅವರ ನಟನೆಯನ್ನು ನೋಡಿ ಪರಭಾಷೆಯವರು ಕೂಡ ಸುದೀಪ್​ಗೆ ಆಹ್ವಾನ ನೀಡಿದ್ದರು. ಸದ್ಯ ಸುದೀಪ್​ ಕೋಟಿಗೊಬ್ಬ 3, ವಿಕ್ರಾಂತ್​ ರೋಣ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಉಪೇಂದ್ರ ನಟನೆಯ ಕಬ್ಜಾ ಚಿತ್ರದಲ್ಲಿ ಸುದೀಪ್​ ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ. ಕಿಚ್ಚ ಸುದೀಪ್​ ನಟನೆಯ ಕೋಟಿಗೊಬ್ಬ 3 ಸಿನಿಮಾ ಶೀಘ್ರವೇ ತೆರೆಗೆ ಬರುತ್ತಿದೆ. ಮಡೋನಾ ಸೆಬಾಸ್ಟಿಯನ್ ಹಾಗೂ ಶ್ರದ್ಧಾ ದಾಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅರ್ಜುನ್​ ಜನ್ಯಾ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಚಿತ್ರರಂಗದ ಪಯಣಕ್ಕೆ 25 ವರ್ಷ; ಶಾಲು ಹೊದಿಸಿ ಸನ್ಮಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

Published On - 8:52 pm, Mon, 15 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ