Kichcha Sudeep: ಸುದೀಪ್​ ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ ಕಿಚ್ಚ

Kiccha46: ಕಿಚ್ಚ ಸುದೀಪ್​ ನಟಿಸಲಿರುವ ಮುಂದಿನ ಸಿನಿಮಾ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಸಖತ್​ ಕೌತುಕ ಇದೆ. ಈಗಾಗಲೇ ಇದರ ಪ್ರೋಮೋ ಶೂಟ್​ ಮುಗಿದಿದೆ.

Kichcha Sudeep: ಸುದೀಪ್​ ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ ಕಿಚ್ಚ
ಕಿಚ್ಚ ಸುದೀಪ್
Follow us
ಮದನ್​ ಕುಮಾರ್​
|

Updated on:May 24, 2023 | 5:15 PM

‘ವಿಕ್ರಾಂತ್​ ರೋಣ’ ತೆರೆಕಂಡ ಬಳಿಕ ಕಿಚ್ಚ ಸುದೀಪ್ (Kichcha Sudeep)​ ಅವರು ದೀರ್ಘ ಗ್ಯಾಪ್​ ಮಾಡಿದರು. ಸುದೀಪ್​ ಅಭಿನಯದ 46ನೇ ಸಿನಿಮಾ (Kichcha46) ಕುರಿತು ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದರು. ಅವರಿಗೆಲ್ಲ ಖುಷಿ ಸುದ್ದಿ ಸಿಕ್ಕಿದೆ. ಸುದೀಪ್​ ಅವರ ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ಸಿಕ್ಕಿದೆ. ಇಂದು (ಮೇ 24) ಹೊಸ ಮಾಹಿತಿ ಬಿಟ್ಟುಕೊಡಲಾಗಿದೆ. ತಮಿಳಿನ ಖ್ಯಾತ ನಿರ್ಮಾಣ ಸಂಸ್ಥೆ ಜೊತೆ ಸುದೀಪ್ ಕೈ ಜೋಡಿಸಿದ್ದಾರೆ. ‘ವಿ ಕ್ರಿಯೇಷನ್ಸ್​’ ಮೂಲಕ ಅವರ ಹೊಸ ಸಿನಿಮಾ ನಿರ್ಮಾಣ ಆಗಲಿದೆ. ಈ ಚಿತ್ರಕ್ಕೆ ಕಲೈಪುಲಿ ಎಸ್​. ಧಾನು (Kalaipuli S Thanu) ಅವರು ಬಂಡವಾಳ ಹೂಡಲಿದ್ದಾರೆ. ತಮಿಳಿನಲ್ಲಿ ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ‘ವಿ ಕ್ರಿಯೇಷನ್ಸ್​’ ಸಂಸ್ಥೆಗೆ ಇದೆ. ಈ ಬ್ಯಾನರ್​ ಜೊತೆ ಸುದೀಪ್​ ಅವರು ಸಿನಿಮಾ ಮಾಡಲಿರುವುದು ವಿಶೇಷ.

ಇತ್ತೀಚೆಗಷ್ಟೇ ಕಿಚ್ಚ ಸುದೀಪ್​ ಅವರ ಹೊಸ ಸಿನಿಮಾಗೆ ಪ್ರೋಮೋ ಚಿತ್ರೀಕರಣ ನಡೆದಿತ್ತು. ಅವರು ಮೂರು ಸಿನಿಮಾಗಳಿಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಆ ಚಿತ್ರಗಳು ಒಂದರ ನಂತರ ಒಂದು ಸೆಟ್ಟೇರಲಿವೆ. ಜೂನ್​ 1ರಂದು ಹೊಸ ಸಿನಿಮಾ ಲಾಂಚ್​ ಆಗಲಿದೆ. ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲಿರುವುದಾಗಿ ಈಗ ಮಾಹಿತಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
‘ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, ಯಾರಿಗೂ ಟಿಕೆಟ್ ಕೇಳಿಲ್ಲ’; ಸುದೀಪ್ ಸ್ಪಷ್ಟನೆ
Image
Kiccha Sudeep: ತೆರೆಮೇಲೆ ಸುದೀಪ್​ ರಾಜಕಾರಣಿ ಪಾತ್ರ ಮಾಡಿದ್ದು ಒಮ್ಮೆ ಮಾತ್ರ; ‘ಕಿಚ್ಚ’ ಚಿತ್ರದಲ್ಲಿತ್ತು ಪಕ್ಕಾ ಪೊಲಿಟಿಕಲ್​ ಕಥೆ​
Image
‘ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’; ಸುದೀಪ್ ಬಿಜೆಪಿ ಸೇರ್ತಾರೆ ಎನ್ನುವ ವಿಚಾರದಲ್ಲಿ ಪ್ರಕಾಶ್ ರಾಜ್ ಪ್ರತಿಕ್ರಿಯೆ
Image
Kichcha Sudeep: ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

‘ವಿಕ್ರಾಂತ್​ ರೋಣ’ ಬಳಿಕ ಸುದೀಪ್​ ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲು ಅವಸರ ತೋರಲಿಲ್ಲ. ಸಿಸಿಎಲ್​ ಮತ್ತು ಕೆಸಿಸಿ ಪಂದ್ಯಗಳಲ್ಲಿ ಅವರು ತೊಡಗಿಕೊಂಡಿದ್ದರು. ಕ್ರಿಕೆಟ್​ ಬಗ್ಗೆ ಅವರು ವಿಶೇಷ ಪ್ರೀತಿ ಇದೆ. ಹಾಗಾಗಿ ಅವರು ಸಿನಿಮಾ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಕ್ರಿಕೆಟ್​ ಆಡಿದರು. ಆ ಬಳಿಕ ಚುನಾವಣೆಯ ಕಾವು ಹೆಚ್ಚಿತು. ಬಿಜೆಪಿ ಪರವಾಗಿ ಅವರು ರಾಜ್ಯಾದ್ಯಂತ ಕ್ಯಾಂಪೇನ್​ ಮಾಡಿದರು. ಈಗ ಮತ್ತೆ ಸಿನಿಮಾ ಕೆಲಸಗಳಿಗೆ ಅವರು ಮರಳಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: Kichcha Sudeep: ರಾಜಕೀಯ ಪ್ರಚಾರದ ನಡುವೆಯೂ ಅಭಿಮಾನಿಗಳ ಪ್ರೀತಿ ಕಡೆಗೆ ಗಮನ ಹರಿಸಿದ ಸುದೀಪ್​

ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಿಸಿರುವ ‘ವಿ ಕ್ರಿಯೇಷನ್ಸ್​’ ಜೊತೆ ಸುದೀಪ್​ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ಕೌತಕ ಹೆಚ್ಚಾಗಿದೆ. ಈ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಶೀಘ್ರದಲ್ಲೇ ಬಿಡುಗಡೆ ಆಗಲಿರುವ ಟೀಸರ್​ ಮೂಲಕ ಈ ಪ್ರಶ್ನೆಗೆ ಉತ್ತರ ಸಿಗಲಿದೆ. ಇದು ಯಾವ ಪ್ರಕಾರದ ಸಿನಿಮಾ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಸುದೀಪ್​ ಜೊತೆ ಯಾರೆಲ್ಲ ನಟಿಸಲಿದ್ದಾರೆ ಎಂಬ ಮಾಹಿತಿ ಕೂಡ ಇನ್ನಷ್ಟೇ ಬಹಿರಂಗ ಆಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:03 pm, Wed, 24 May 23

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್