Kichcha Sudeep: ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಸುದೀಪ್​? ರಾಜಕೀಯದಲ್ಲಿ ಧೂಳೆಬ್ಬಿಸ್ತಾರಾ ಕಿಚ್ಚ?

ವಿಧಾನಸಭಾ ಚುನಾವಣೆಯ ಕಾವು ಜೋರಾದಂತೆ ಹಲವು ಸೆಲೆಬ್ರಿಟಿಗಳು ರಾಜಕೀಯ ಪಕ್ಷದ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವರು ಚುನಾವಣೆಗೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾರೆ.

Follow us
ರಾಜೇಶ್ ದುಗ್ಗುಮನೆ
|

Updated on:Apr 05, 2023 | 9:25 AM

ಕಿಚ್ಚ ಸುದೀಪ್ (Kichcha Sudeep) ಅವರು ಚಿತ್ರರಂಗಕ್ಕೆ ಕಾಲಿಟ್ಟು ಎರಡೂವರೆ ದಶಕಗಳೇ ಕಳೆದಿವೆ. ಅವರ ವೃತ್ತಿ ಜೀವನದಲ್ಲಿ ಹಲವು ಸೂಪರ್​ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಪರಭಾಷೆಯಲ್ಲೂ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಮಾಡಿ ಮೆಚ್ಚುಗೆ ಪಡೆದಿದ್ದಾರೆ. ಹಲವು ರಾಜಕಾರಣಿಗಳ ಜೊತೆ ಕಿಚ್ಚನಿಗೆ ಆಪ್ತತೆ ಇದೆ. ಇಂದು (ಏಪ್ರಿಲ್ 5) ಸಿಎಂ ಬಸವರಾಜ್​ ಬೊಮ್ಮಾಯಿ ಸುದ್ದಿಗೋಷ್ಠಿ ಕರೆದಿದ್ದು, ಅದರಲ್ಲಿ ಕಿಚ್ಚ ಸುದೀಪ್ ಅವರು ಭಾಗಿ ಆಗಲಿದ್ದಾರೆ. ಈ ವೇಳೆ ಅವರು ತಮ್ಮ ರಾಜಕೀಯ ನಿಲುವು ಏನು ಎಂಬುದನ್ನು ತಿಳಿಸಲಿದ್ದಾರೆ. ಸುದೀಪ್ ಬಿಜೆಪಿ  ಸೇರುತ್ತಾರಾ ಅಥವಾ ಪಕ್ಷದ ಪರ ಪ್ರಚಾರ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ವಿಧಾನಸಭಾ ಚುನಾವಣೆಯ ಕಾವು ಜೋರಾದಂತೆ ಹಲವು ಸೆಲೆಬ್ರಿಟಿಗಳು ರಾಜಕೀಯ ಪಕ್ಷದ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲವರು ಚುನಾವಣೆಗೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾರೆ. ಅದೇ ರೀತಿ ಸುದೀಪ್ ಅವರು ರಾಜಕೀಯ ಸೇರುತ್ತಾರೆ ಎನ್ನುವ ಮಾತು ಕೇಳಿ ಬಂತು. ಇದಕ್ಕೆ ಸಾಕ್ಷ್ಯ ಎಂಬಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಸುದೀಪ್ ಕಾಣಿಸಿಕೊಂಡ ಫೋಟೋ ವೈರಲ್ ಆಯಿತು. ಈ ಬಗ್ಗೆ ಸುದೀಪ್ ಸ್ಪಷ್ಟನೆ ನೀಡಿದ್ದರು. ರಾಜಕೀಯ ಸೇರ್ಪಡೆ ವಿಚಾರವನ್ನು ಅವರು ತಳ್ಳಿ ಹಾಕಿದ್ದರು. ಈಗ ಬಿಜೆಪಿ ಪಾಳಯದ ಜೊತೆ ಸುದೀಪ್ ಗುರುತಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಖಾಸಗಿ ಹೋಟೆಲ್​ನಲ್ಲಿ ಈ ಪ್ರೆಸ್​ಮೀಟ್​ ನಡೆಯಲಿದೆ. ಸುದ್ದಿಗೋಷ್ಠಿ ವೇಳೆ ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಆದರೆ, ಅವರು ಪಕ್ಷ ಸೇರುತ್ತಾರೆ ಎಂಬುದು ಬಹುತೇಕ ಅನುಮಾನವೇ.

ಇದನ್ನೂ ಓದಿ: Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ 

ಸುದೀಪ್ ಅವರು ಬಿಜೆಪಿ ಪ್ರಚಾರ ರಾಯಭಾರಿ ಆದರೆ ಪಕ್ಷಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ. ಬಿಜೆಪಿ ಪಕ್ಷದ ಪರ ಅವರ ಅಭಿಮಾನಿಗಳು ಪ್ರಚಾರ ಮಾಡಲಿದ್ದಾರೆ. ಸುದೀಪ್​ಗೆ ದೊಡ್ಡ ಅಭಿಮಾನಿ ವರ್ಗ ಇದೆ. ಅವರು ಪಕ್ಷದ ಪರ ಪ್ರಚಾರ ಮಾಡಿದರೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ ಅನ್ನೋದು ಬಿಜೆಪಿ ಆಲೋಚನೆ. ಈ ಕಾರಣಕ್ಕೆ ಸುದೀಪ್​ಗೆ ಆಫರ್ ನೀಡಲಾಗಿತ್ತು. ಅವರು ಕಮಲದ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Wed, 5 April 23

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ