‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?

ಎಸ್.ಎಸ್. ರಾಜಮೌಳಿ ನಿರ್ದೇಶನದ 'ವಾರಣಾಸಿ' (SSMB29) ಚಿತ್ರಕ್ಕೆ ಕಿಚ್ಚ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ರಾಮಾಯಣ ಸ್ಫೂರ್ತಿಯ ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ನಟಿಸುತ್ತಿದ್ದು, ಏಪ್ರಿಲ್‌ನಲ್ಲಿ ಸುದೀಪ್ 15 ದಿನಗಳ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?
ಸುದೀಪ್-ರಾಜಮೌಳಿ

Updated on: Mar 14, 2026 | 7:03 AM

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ (SS Rajamouli) ಅವರು ‘ವಾರಣಾಸಿ’ ಸಿನಿಮಾನ ನಿರ್ದೇಶನ ಮಾಡುವುದರಲ್ಲಿ ಬ್ಯುಸಿ ಇದ್ದಾರೆ. ವಿವಿಧ ಹಂತಗಳಲ್ಲಿ ಸಿನಿಮಾದ ಶೂಟ್ ನಡೆಯುತ್ತಿದ್ದು 2027ರ ಏಪ್ರಿಲ್​ನಲ್ಲಿ ಸಿನಿಮಾ ತೆರೆಗೆ ಬರಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕಥೆ ರಾಮಾಯಣದಿಂದ ಸ್ಫೂರ್ತಿ ಪಡೆದಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಈ ಚಿತ್ರದ ಸೆಟ್​​ಗೆ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ‘ವಾರಣಾಸಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ಈ ವರದಿ ಬಗ್ಗೆ ರಾಜಮೌಳಿ ಆಗಲಿ, ಸುದೀಪ್ ಆಗಲಿ ಅಧಿಕೃತವಾಗಿ ಹೇಳಿಲ್ಲ. ಈಗ ಕೇಳಿ ಬರಿತ್ತಿರುವ ಒಸ ಮಾಹಿತಿ ಎಂದರೆ ಸುದೀಪ್ ಏಪ್ರಿಲ್​​​ನಲ್ಲಿ 15 ದಿನಗಳ ಶೂಟ್​​ನಲ್ಲಿ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಇದು ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿದೆ. ಇನ್ನು, ಸದ್ಯಕ್ಕಂತೂ ಈ ಬಗ್ಗೆ ಅವರು ಮಾಹಿತಿ ನೀಡುವುದು ಅನುಮಾನವೇ.

ಸುದೀಪ್ ಹಾಗೂ ರಾಜಮೌಳಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಕಾರಣ ಆಗಿದ್ದು, ‘ಈಗ’ ಸಿನಿಮಾ. ಈ ಚಿತ್ರವನ್ನು ರಾಜಮೌಳಿ ನಿರ್ದೇಶನ ಮಾಡಿದರೆ, ಸುದೀಪ್ ಅವರು ಇದಕ್ಕೆ ವಿಲನ್. ಈ ಚಿತ್ರದಲ್ಲಿ ಸುದೀಪ್ ಅವರು ಶೋ ವಿನ್ನರ್ ಎನಿಸಿಕೊಂಡರು. ಅವರ ನಟನೆ ಬೇರೆಯದೇ ಲೆವೆಲ್​​​ನಲ್ಲಿ ಇತ್ತು. ಈ ಕಾರಣಕ್ಕೆ ರಾಜಮೌಳಿಗೆ ಸುದೀಪ್ ಎಂದರೆ ಫೇವರಿಟ್. ಈ ಕಾರಣದಿಂದಲೇ ‘ವಾರಣಾಸಿ’ ಸಿನಿಮಾದಲ್ಲಿ ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ನಾನು ಸುದೀಪ್ ಸರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ’; ಉಲ್ಟಾ ಹೊಡೆದ ಸತೀಶ್

ಸುದೀಪ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಮಾರ್ಕ್’ ಚಿತ್ರದಲ್ಲಿ. ಕಳೆದ ವರ್ಷ ಡಿಸೆಂಬರ್​​ನಲ್ಲಿ ಸಿನಿಮಾ ತೆರೆಗೆ ಬಂತು. ಈ ಚಿತ್ರ ಗಮನ ಸೆಳೆಯಿತು. ಇದಾದ ಬಳಿಕ ರೋಮ್​-ಕಾಮ್ ಅಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ತೆಲುಗು ನಿರ್ದೇಶಕ ಸುಕುಮಾರ್ ಅಡಿಯಲ್ಲಿ ಪಳಗಿದ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us