ವಿವಾದ ಬದಿಗಿಟ್ಟು ಶೂಟಿಂಗ್​ಗೆ ರೆಡಿ ಆದ ಕಿಚ್ಚ ಸುದೀಪ್; ‘K46’ ಚಿತ್ರೀಕರಣ ಎಲ್ಲಿ?

Kichcha Sudeep: ‘K46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೇಡ್ಯೂಲ್​ನಲ್ಲಿ ಚಿತ್ರೀಕರಣ ನಡೆಯಲಿದೆ.

ವಿವಾದ ಬದಿಗಿಟ್ಟು ಶೂಟಿಂಗ್​ಗೆ ರೆಡಿ ಆದ ಕಿಚ್ಚ ಸುದೀಪ್; ‘K46’ ಚಿತ್ರೀಕರಣ ಎಲ್ಲಿ?
ಸುದೀಪ್
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on: Jul 25, 2023 | 10:54 AM

ಕಿಚ್ಚ ಸುದೀಪ್ (Sudeep) ಅವರ ಹೆಸರಿನ ಸುತ್ತ ವಿವಾದಗಳು ಹುಟ್ಟಿಕೊಂಡಿವೆ. ಎಂಎನ್​ ಕುಮಾರ್ ಅವರ ಕಿಚ್ಚನ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹಣ ಪಡೆದು ಸುದೀಪ್ ಕಾಲ್​ಶೀಟ್ ನೀಡಿಲ್ಲ ಅನ್ನೋದು ಕುಮಾರ್ ಆರೋಪ. ಈ ಪ್ರಕರಣದ ಸಂಧಾನ ಮಾತುಕತೆ ನಡೆಯುತ್ತಿದೆ. ಈಗ ಸುದೀಪ್ ಅವರು ವಿವಾದ ಬದಿಗಿಟ್ಟು ಶೂಟಿಂಗ್​ಗೆ ಮರಳುತ್ತಿದ್ದಾರೆ. ‘ವಿಕ್ರಾಂತ್ ರೋಣ’  (Vikrant Rona Movie) ಬಳಿಕ ಅವರು ಮತ್ತೆ ಕ್ಯಾಮೆರಾ ಎದುರಿಸಲು ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಯುವ ತಂಡಗಳ ಬೆಂಬಲಕ್ಕೆ ನಿಂತರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.

‘K46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೇಡ್ಯೂಲ್​ನಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ.  ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ವಿಜಯ್ ಕಾರ್ತಿಕೇಯ ಅವರು ‘K46’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇತ್ತೀಚೆಗೆ ‘K46’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿತ್ತು. ಇದನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದರು. ಸುದೀಪ್ ಅವರ ಆ್ಯಕ್ಷನ್ ಜನಮೆಚ್ಚುಗೆ ಪಡೆದಿತ್ತು. ಸಿನಿಮಾ ಆದಷ್ಟು ಬೇಗ ರಿಲೀಸ್ ಆಗಲಿ ಎಂದು ಕಾದು ಕೂರುವ ರೀತಿಯಲ್ಲಿ ಈ ಗ್ಲಿಂಪ್ಸ್​ನ ಸಿದ್ಧಪಡಿಸಲಾಗಿತ್ತು. ‘ನಾನು ಮನುಷ್ಯನಲ್ಲ, ರಾಕ್ಷಸ’ ಎನ್ನುವ ಡೈಲಾಗ್​ ಕೂಡ ಹೈಲೈಟ್ ಆಗಿತ್ತು.

ಇದನ್ನೂ ಓದಿ: ಚಕ್ರವರ್ತಿ ಚಂದ್ರಚೂಡ್ ವಿರುದ್ಧ ವಾಗ್ದಾಳಿ ನಡೆಸಿದ ಸೂರಪ್ಪ ಬಾಬು ಸುದೀಪ್ ಬಗ್ಗೆ ಹೇಳಿದ್ದು ಹೀಗೆ

ಮತ್ತೊಂದೆಡೆ ಕಿಚ್ಚ vs ಕುಮಾರ್ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಈ ವಿವಾದ ಪರಿಹರಿಸಲು ರವಿಚಂದ್ರನ್, ಶಿವರಾಜ್​ಕುಮಾರ್ ಎಂಟ್ರಿ ಆಗಿದೆ. ಈಗಾಗಲೇ ಒಂದು ಸುತ್ತಿನ ಸಂಧಾನ ಮಾತುಕತೆ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್