Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ

Kichcha Sudeep: ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಕಿಚ್ಚ ಸುದೀಪ್​ ಅವರು ಟ್ವಿಟರ್​ ಮೂಲಕ ಪ್ರತಿ ದಿನ ಹೊಸ ಹೊಸ ಅಪ್​ಡೇಟ್​ ನೀಡುತ್ತಿದ್ದಾರೆ. ತಾವು ವಿಶೇಷ ಡ್ರೆಸ್​ನಲ್ಲಿ​ ಅಭಿಮಾನಿಗಳನ್ನು ನೋಡಲು ಬಯಸುತ್ತಿರುವುದಾಗಿ ಅವರು​ ಪೋಸ್ಟ್​ ಮಾಡಿದ್ದಾರೆ.

Vikrant Rona: ಟಿ-ಶರ್ಟ್​, ಜಾಕೆಟ್​, ಕಾಫಿ ಮಗ್​.. ಎಲ್ಲೆಲ್ಲೂ ಕಿಚ್ಚ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಹವಾ
‘ವಿಕ್ರಾಂತ್ ರೋಣ’ ಟಿ-ಶರ್ಟ್, ಜಾಕೆಟ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 20, 2022 | 1:11 PM

ಬಹುನಿರೀಕ್ಷಿತ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ಜುಲೈ 28ರಂದು ಈ ಚಿತ್ರ ಅದ್ದೂರಿಯಾಗಿ ರಿಲೀಸ್​ ಆಗಲಿದೆ. ಚಿತ್ರ ತೆರೆಕಾಣಲು ಇನ್ನು ಕೆಲವೇ ದಿನಗಳ ಬಾಕಿ ಉಳಿದಿರುವಾಗ ಜೋರಾಗಿ ಪ್ರಚಾರ ಮಾಡಲಾಗುತ್ತಿದೆ. ಕಿಚ್ಚ ಸುದೀಪ್​ ಅಭಿಮಾನಿಗಳು ಕೂಡ ಈ ಕಾರ್ಯದಲ್ಲಿ ಭಾಗಿ ಆಗುತ್ತಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ವಿಕ್ರಾಂತ್​ ರೋಣ’ (Vikrant Rona) ಅಬ್ಬರಿಸಲಿದೆ. ಬಿಗ್​ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ತಕ್ಕಂತೆಯೇ ಹೈಪ್​ ಸೃಷ್ಟಿ ಆಗಿದೆ. ಕಿಚ್ಚನ ಫೋಟೋ ಮತ್ತು ‘ವಿಕ್ರಾಂತ್​ ರೋಣ’ ಸಿನಿಮಾ ಟೈಟಲ್​ ಇರುವ ಕಾಫಿ ಮಗ್​, ಟಿ-ಶರ್ಟ್​, ಜಾಕೆಟ್​, ನೋಟ್​ ಪ್ಯಾಡ್​ ಮುಂತಾದ ವಸ್ತುಗಳು ಈಗ ಮಾರುಕಟ್ಟೆಯಲ್ಲಿ ಲಭ್ಯವಾಗಿವೆ. ಈ ಬಗ್ಗೆ ಸ್ವತಃ ಸುದೀಪ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ಸುದೀಪ್​ ಅವರು ಟ್ವಿಟರ್​ ಮೂಲಕ ಪ್ರತಿ ದಿನ ಹೊಸ ಹೊಸ ಅಪ್​ಡೇಟ್​ ನೀಡುತ್ತಿದ್ದಾರೆ. ವಿಶೇಷವಾಗಿ ಪ್ರಿಂಟ್​ ಮಾಡಲಾಗಿರುವ ಕಾಫಿ ಮಗ್​, ಟಿ-ಶರ್ಟ್​, ಜಾಕೆಟ್​, ನೋಟ್​ ಪ್ಯಾಡ್​ ಸೇರಿದಂತೆ ಹಲವು ವಸ್ತುಗಳು ಲಭ್ಯವಿರುವ ಕುರಿತು ಕೂಡ ಅವರು ಟ್ವಿಟರ್​ ಮೂಲಕ ತಿಳಿಸಿದ್ದಾರೆ. ತಾವು ಈ ಡ್ರೆಸ್​ನಲ್ಲಿ ಅಭಿಮಾನಿಗಳನ್ನು ನೋಡಲು ಬಯಸುತ್ತಿರುವುದಾಗಿ ಸುದೀಪ್​ ಪೋಸ್ಟ್​ ಮಾಡಿದ್ದಾರೆ. ಈ ವಸ್ತುಗಳು ಎಲ್ಲಿ ಸಿಗುತ್ತದೆ ಎಂಬುದರ ಲಿಂಕ್​ ಕೂಡ ಅವರು ಶೇರ್​ ಮಾಡಿದ್ದಾರೆ.

ಇದನ್ನೂ ಓದಿ
Image
ಬಾಗಲಕೋಟೆಯಲ್ಲಿ ರಾ.. ರಾ.. ರಕ್ಕಮ್ಮ ಹಾಡಿಗೆ ನೂರಾರು ಜನರಿಂದ ಭರ್ಜರಿ ಸ್ಟೆಪ್
Image
Jacqueline Fernandez: ಸೆನ್ಸೇಶನ್ ಸೃಷ್ಟಿಸಿದ ‘ರಾ ರಾ ರಕ್ಕಮ್ಮ’; ಕನ್ನಡದಲ್ಲೇ ಧನ್ಯವಾದ ಹೇಳಿದ ಜಾಕ್ವೆಲಿನ್​
Image
 ‘ರಾ ರಾ ರಕ್ಕಮ್ಮಾ..’ ಹಾಡಿಗೆ ಮಸ್ತ್​ ಆಗಿ ಹೆಜ್ಜೆ ಹಾಕಿದ ಅರವಿಂದ್ ಕೆಪಿ-ದಿವ್ಯಾ ಉರುಡುಗ
Image
Vikrant Rona: ಕನ್ನಡದಲ್ಲೇ ಮಾತನಾಡಿದ ಜಾಕ್ವೆಲಿನ್; ‘ರಕ್ಕಮ್ಮ’ಗಾಗಿ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಬಂಡವಾಳ ಹೂಡಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಅಜನೀಶ್​ ಲೋಕನಾಥ್​ ಅವರ ಬತ್ತಳಿಕೆಯಿಂದ ಬಂದ ಹಾಡುಗಳು ಸೂಪರ್​ ಹಿಟ್​ ಆಗಿವೆ. ಎಲ್ಲೆಲ್ಲೂ ‘ರಾ..ರಾ.. ರಕ್ಕಮ್ಮ..’ ಹಾಡು ರಾರಾಜಿಸುತ್ತಿದೆ.

ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್​ ಆಗಲಿದೆ. ದೇಶದ ಪ್ರಮುಖ ನಗರಗಳಿಗೆ ತೆರಳಿ ಸುದೀಪ್​ ಮತ್ತು ತಂಡದವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಆ ಮೂಲಕ ಪರರಾಜ್ಯದ ಹೆಚ್ಚು ಜನರಿಗೆ ಸಿನಿಮಾವನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ. 3ಡಿಯಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಸಖತ್​ ಪ್ರತಿಕ್ರಿಯೆ ಸಿಗುವ ನಿರೀಕ್ಷೆ ಇದೆ.

Published On - 12:48 pm, Wed, 20 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ