AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್ ಬಯೋಗ್ರಫಿ ಬಿಡುಗಡೆ ಮಾಡಿ, ಭಾವುಕರಾದ ಕಿಚ್ಚ ಸುದೀಪ್​

ಕಿಚ್ಚ ಸುದೀಪ್ ಇಂದು (ಮಾರ್ಚ್​ 15) ಬೆಂಗಳೂರಿನಲ್ಲಿ ‘ನೀನೆ ರಾಜಕುಮಾರ’ ಕೃತಿಯನ್ನು ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿರುವುದು ವಿಶೇಷ.

ಪುನೀತ್​ ರಾಜ್​ಕುಮಾರ್ ಬಯೋಗ್ರಫಿ ಬಿಡುಗಡೆ ಮಾಡಿ, ಭಾವುಕರಾದ ಕಿಚ್ಚ ಸುದೀಪ್​
ಪುನೀತ್​ ರಾಜ್​ಕುಮಾರ್ ಬಯೋಗ್ರಫಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 15, 2022 | 7:06 PM

ಪುನೀತ್​ ರಾಜ್​ಕುಮಾರ್ (Puneeth Rajkumar) ಇಲ್ಲ ಎಂಬ ನೋವನ್ನು ಅರಗಿಸಿಕೊಳ್ಳೋಕೆ ಇನ್ನೂ ಸಾಧ್ಯವಾಗುತ್ತಿಲ್ಲ. ಅವರನ್ನು ಕಳೆದುಕೊಂಡು ನಾಲ್ಕು ತಿಂಗಳು ಕಳೆದಿದೆ. ಮಾರ್ಚ್​ 17ಕ್ಕೆ ಅವರ ಬರ್ತ್​ಡೇ ಆಚರಿಸಿಕೊಳ್ಳಲಾಗುತ್ತಿದೆ. ಅವರು ಮಾಡಿದ ಒಳ್ಳೆಯ ಕೆಲಸಗಳನ್ನು ನಾನಾ ರೀತಿಯಲ್ಲಿ ನೆನೆಯಲಾಗುತ್ತಿದೆ. ಪುನೀತ್​ ಅವರು ಹಲವರ ಜತೆ ಒಳ್ಳೆಯ ಒಡನಾಟ ಹೊಂದಿದ್ದರು. ಈಗ ಪುನೀತ್​ ಅವರ ಜೀವನ ಕಥನದ ಕೃತಿ (Puneeth Rajkumar Biography) ಹೊರ ಬಂದಿದೆ. ಸಿನಿಮಾ ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಈ ಕೃತಿಯನ್ನು ಬರೆದಿದ್ದು, ಕಿಚ್ಚ ಸುದೀಪ್ (Kichcha Sudeep)​ ಇದನ್ನು ಬಿಡುಗಡೆ ಮಾಡಿದ್ದಾರೆ.

ಕಿಚ್ಚ ಸುದೀಪ್ ಇಂದು (ಮಾರ್ಚ್​ 15) ಬೆಂಗಳೂರಿನಲ್ಲಿ ‘ನೀನೆ ರಾಜಕುಮಾರ’ ಕೃತಿಯನ್ನು ಬಿಡುಗಡೆ ಮಾಡಿದರು. ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದಿರುವ ಈ ಕೃತಿ ಬಿಡುಗಡೆಗೂ ಮುನ್ನ ಎರಡನೇ ಮುದ್ರಣ ಕಂಡಿರುವುದು ವಿಶೇಷ. ಕೃತಿಯ ಬಿಡುಗಡೆ ಮಾಡಿದ ನಂತರ ಮಾತನಾಡಿದ ಸುದೀಪ್, ‘ಒಂದೊಳ್ಳೆಯ ಕೃತಿಯ ಮೂಲಕ ಪುನೀತ್ ರಾಜ್​​ಕುಮಾರ್ ಅವರಿಗೆ ಶರಣು ಹುಲ್ಲೂರು ನಮನ ಸಲ್ಲಿಸಿದ್ದಾರೆ. ಪುನೀತ್ ಅವರದ್ದು ಪುಸ್ತಕವಾಗುವಂತಹ ವ್ಯಕ್ತಿತ್ವ. ಈ ಕೃತಿ ಅವರ ಜೀವನವನ್ನು ಸೊಗಸಾಗಿ ಹಿಡಿದಿಟ್ಟಿದೆ. ಯಾವತ್ತಿಗೂ ನಾನು ಪುನೀತ್ ಅವರನ್ನು ಮೀಸ್ ಮಾಡಿಕೊಳ್ಳುತ್ತೇನೆ’ ಎಂದರು.

ಕಿಚ್ಚ ಸುದೀಪ್ ಅವರ ಕುರಿತು ಶರಣು ಹುಲ್ಲೂರು ಪುಸ್ತಕ ಬರೆದಿದ್ದರು. ಎರಡು ವರ್ಷಗಳ ಹಿಂದೆ ಪುನೀತ್ ರಾಜ್ ಕುಮಾರ್ ಅವರು ಈ ಪುಸ್ತಕ ಬಿಡುಗಡೆ ಮಾಡಿದ್ದರು. ಪುನೀತ್ ಅವರ ಬಯೋಗ್ರಫಿಯನ್ನು ಇದೀಗ ಸುದೀಪ್ ಅವರು ರಿಲೀಸ್ ಮಾಡಿದ್ದಾರೆ. ಈ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕರಾದ ಜಾಕ್ ಮಂಜು, ಕುಮಾರ್ ಹಾಗೂ ಸಾವಣ್ಣ ಪ್ರಕಾಶನದ ಜಮೀಲ್ ಮತ್ತು ಲೇಖಕ ಶರಣು ಹುಲ್ಲೂರು ಉಪಸ್ಥಿತರಿದ್ದರು.

ಬಯೋಗ್ರಫಿಯಲ್ಲಿ ಏನಿದೆ?

ಪುನೀತ್ ರಾಜ್​ಕುಮಾರ್ ಕುರಿತಾಗಿ ಬರುತ್ತಿರುವ ಮೊದಲ ಬಯೋಗ್ರಫಿ ಇದು. ಇದರಲ್ಲಿ ಪುನೀತ್ ಜೀವನ ಕುರಿತಾದ ವಿಷಯಗಳು ಮಾತ್ರ ಇಲ್ಲ. ಅವರ ವೃತ್ತಿ ಮತ್ತು ಖಾಸಗಿ ಜೀವನ ಕುರಿತಾದ ಅಪರೂಪದ ವಿಷಯಗಳನ್ನು ಮತ್ತು ಛಾಯಾಚಿತ್ರಗಳನ್ನು ಈ ಪುಸ್ತಕ ಒಳಗೊಂಡಿದೆ. ಪುನೀತ್​ ಬಾಲ್ಯ, ಬಾಲ್ಯದಲ್ಲಿ ನಟಿಸಿದ ಸಿನಿಮಾಗಳು ಮತ್ತು ಅರಸು ಚಿತ್ರದಿಂದ ಜೇಮ್ಸ್ ಚಿತ್ರದವರೆಗಿನ ಸಮಗ್ರ ನೋಟ ಈ ಪುಸ್ತಕದಲ್ಲಿದೆ. 264 ಪುಟಗಳನ್ನು ಈ ಪುಸ್ತಕ ಹೊಂದಿದ್ದು, ಒಟ್ಟು 34 ಅಧ್ಯಾಯಗಳನ್ನು ಇದು ಒಳಗೊಂಡಿದೆ.

ಇದನ್ನೂ ಓದಿ: James Pre-Release Event: ‘ನಮ್ಮ ಪಕ್ಕದಲ್ಲೇ ದೇವರಿದ್ದರು’; ಪುನೀತ್ ಬಗ್ಗೆ ಶ್ರೀಮುರಳಿ ಭಾವುಕ ಮಾತು

Puneeth Rajkumar: ಕನ್ನಡಿಗರ ಕಣ್ಮಣಿ ನಮ್ಮ ಅಪ್ಪು ಇನ್ಮುಂದೆ, ಡಾಕ್ಟರ್ ಪುನೀತ್ ರಾಜ್‍ಕುಮಾರ್..!

Published On - 3:27 pm, Tue, 15 March 22

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ