ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ

Kichcha Sudeep vs Ajay Devgn: ಕಿಚ್ಚ ಸುದೀಪ್​ ಮತ್ತು ಅಜಯ್​ ದೇವಗನ್​ ನಡುವಿನ ಟ್ವಿಟರ್​ ಜಟಾಪಟಿ ತಣ್ಣಗಾಯಿತು. ಈಗ ಈ ಇಬ್ಬರು ಸ್ಟಾರ್​ ನಟರ ಸಿನಿಮಾಗಳ ನಡುವಿನ ಬಾಕ್ಸ್​ ಆಫೀಸ್​ ಕ್ಲ್ಯಾಶ್​ ಬಗ್ಗೆ ಚರ್ಚೆ ಶುರುವಾಗಿದೆ.

ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
ಕಿಚ್ಚ ಸುದೀಪ್, ಅಜಯ್ ದೇವಗನ್
Follow us
TV9 Web
| Updated By: ಮದನ್​ ಕುಮಾರ್​

Updated on: May 08, 2022 | 1:40 PM

ರಾಷ್ಟ್ರ ಭಾಷೆಯ ವಿಚಾರ ಕೆಲವೇ ದಿನಗಳ ಹಿಂದೆ ಭಾರಿ ಸದ್ದು ಮಾಡಿತ್ತು. ‘ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ’ ಎಂದು ಕಿಚ್ಚ ಸುದೀಪ್​ (Kichcha Sudeep) ಅವರು ಹೇಳಿದ್ದಕ್ಕೆ ಬಾಲಿವುಡ್​ ನಟ ಅಜಯ್​ ದೇವಗನ್​ ವಿರೋಧ ವ್ಯಕ್ತಪಡಿಸಿದ್ದರು. ‘ಹಿಂದಿ ರಾಷ್ಟ್ರ ಭಾಷೆ ಅಲ್ಲ ಎನ್ನುವುದಾದರೆ ನಿಮ್ಮ ಸಿನಿಮಾಗಳನ್ನು ಹಿಂದಿಗೆ ಯಾಕೆ ಡಬ್​ ಮಾಡ್ತೀರಿ’ ಎಂದು ಕಿಚ್ಚ ಸುದೀಪ್​ಗೆ ಅಜಯ್​ ದೇವಗನ್​ ಅಸಂಬದ್ಧವಾಗಿ ಪ್ರಶ್ನೆ ಕೇಳಿದ್ದರು. ಈ ಜಟಾಪಟಿಯಲ್ಲಿ ಎಲ್ಲರೂ ಸುದೀಪ್​ಗೆ ಬೆಂಬಲ ನೀಡಿದ್ದರು. ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂದು ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ಒಮ್ಮತದ ಧ್ವನಿ ಮೊಳಗಿಸಿದರು. ಒಟ್ಟಾರೆ ಚರ್ಚೆ ನಡೆಯುವಾಗ ಸುದೀಪ್​ ವರ್ಸಸ್​ ಅಜಯ್​ ದೇವಗನ್​ (Kichcha Sudeep vs Ajay Devgn) ಎಂಬಂತಹ ವಾತಾವರಣ ನಿರ್ಮಾಣ ಆಗಿತ್ತು. ಸುದೀಪ್​ ಅವರು ಟ್ವಿಟರ್​ ಮೂಲಕ ಸೂಕ್ತ ಪ್ರತಿಕ್ರಿಯೆ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಈಗ ಸಿನಿಮಾ ವಿಚಾರದಲ್ಲಿ ಮತ್ತೆ ಅಜಯ್​ ದೇವಗನ್​ ವರ್ಸಸ್​ ಕಿಚ್ಚ ಸುದೀಪ್​ ಎಂಬ ಫೈಟ್​ ನಿರ್ಮಾಣ ಆಗುವ ಸಾಧ್ಯತೆ ದಟ್ಟವಾಗಿದೆ. ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ (Vikrant Rona Movie) ಎದುರಿಗೆ ಅಜಯ್​ ದೇವಗನ್​ ಅವರ ‘ಥ್ಯಾಂಕ್ ಗಾಡ್​’ ಸಿನಿಮಾ ರಿಲೀಸ್​ ಆಗಲಿದೆ!

‘ವಿಕ್ರಾಂತ್​ ರೋಣ’ ಸಿನಿಮಾ ಮೇಲೆ ಕಿಚ್ಚ ಸುದೀಪ್​ ಅವರ ಅಭಿಮಾನಿಗಳು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 3ಡಿ ಅವತರಣಿಕೆಯಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಮತ್ತು ಅಲಂಕಾರ್​ ಪಾಂಡಿಯನ್​ ಅವರು ನಿರ್ಮಾಣ ಮಾಡಿದ್ದಾರೆ. ಹಲವು ಕಾರಣಗಳಿಂದ ಕೌತುಕ ಮೂಡಿಸಿರುವ ಈ ಚಿತ್ರ ಜು.28ರಂದು ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಅದೇ ಸಮಯಕ್ಕೆ ಸರಿಯಾಗಿ ಅಜಯ್​ ದೇವಗನ್​ ನಟನೆಯ ‘ಥ್ಯಾಂಕ್​ ಗಾಡ್​’ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದು ಗಮನಾರ್ಹ ಸಂಗತಿ.

ಅಜಯ್​ ದೇವಗನ್​ ಅವರು ನಟಿಸಿದ ‘ರನ್​ವೇ 34’ ಸಿನಿಮಾ ಇತ್ತೀಚೆಗೆ ಬಿಡುಗಡೆಯಾಗಿ ಸೋಲು ಅನುಭವಿಸಿತು. ಮುಂದಿನ ಸಿನಿಮಾದಲ್ಲಾದರೂ ಅವರು ಗೆಲ್ಲಬೇಕಿದೆ. ‘ಥ್ಯಾಂಕ್​ ಗಾಡ್​’ ಚಿತ್ರಕ್ಕೆ ಇಂದ್ರ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅಜಯ್​ ದೇವಗನ್​ ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ರಾಕುಲ್​ ಪ್ರೀತ್​ ಸಿಂಗ್​ ಕೂಡ ನಟಿಸಿದ್ದಾರೆ. ಈ ಸಿನಿಮಾ ಜ.29ರಂದು ರಿಲೀಸ್​ ಆಗಲಿದೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಅನೇಕ ತಿಂಗಳ ಹಿಂದೆಯೇ ಘೋಷಿಸಲಾಗಿತ್ತು. ಆಗ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಎಂಬ ಪರಿಸ್ಥಿತಿ ಇರಲಿಲ್ಲ. ಆದರೆ ಇತ್ತೀಚೆಗೆ ನಡೆದ ರಾಷ್ಟ್ರ ಭಾಷೆಯ ಜಟಾಪಟಿಯಿಂದ ಇಬ್ಬರು ಸ್ಟಾರ್​ ನಟರ ಸಿನಿಮಾಗಳನ್ನೂ ಕೂಡ ಎದುರುಬದರಾಗಿ ನೋಡುವ ವಾತಾವರಣ ನಿರ್ಮಾಣ ಆಗಿದೆ.

ಇದನ್ನೂ ಓದಿ
Image
Vikrant Rona: ಬಿಡುಗಡೆಗೂ ಮುನ್ನ ವಿದೇಶದಲ್ಲಿ 10 ಕೋಟಿ ರೂ. ಬಿಸ್ನೆಸ್​ ಮಾಡಿದ ‘ವಿಕ್ರಾಂತ್​ ರೋಣ’: ಸುದೀಪ್​ ಫ್ಯಾನ್ಸ್​ ಖುಷ್​
Image
ಸ್ಟಾರ್​ ಹೀರೋ ಜತೆಗಿನ ಜಗಳದ ಬಗ್ಗೆ ಮೌನ ಮುರಿದ ಅಜಯ್​ ದೇವಗನ್​: ‘ಇದೆಲ್ಲ ಫ್ಯಾನ್ಸ್​ ಕೆಲಸ’ ಎಂದ ನಟ
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು
Image
ಹಿಂದಿ ವಿವಾದ: ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಕಾಂಟ್ರವರ್ಸಿ ಶುರು ಆಗಿದ್ದು ಹೇಗೆ? ಇಲ್ಲಿದೆ ವಿವರ..

ಕೇವಲ ಒಂದು ದಿನದ ಅಂತರದಲ್ಲಿ ಬಿಡುಗಡೆ ಆಗಲಿರುವ ‘ವಿಕ್ರಾಂತ್​ ರೋಣ’ (ಜು.28) ಹಾಗೂ ‘ಥ್ಯಾಂಕ್​ ಗಾಡ್​’ (ಜು.29) ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಯಾವ ರೀತಿ ಹಣಾಹಣಿ ನಡೆಸಲಿವೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ‘ವಿಕ್ರಾಂತ್​ ರೋಣ’ ಸಿನಿಮಾ ಈಗಾಗಲೇ ಸಖತ್​ ಸದ್ದು ಮಾಡುತ್ತಿದೆ. ಈ ಸಿನಿಮಾದ ವಿದೇಶಿ ವಿತರಣೆಯ ಹಕ್ಕುಗಳು 10 ಕೋಟಿ ರೂಪಾಯಿಗೆ ಮಾರಾಟ ಆಗಿದೆ ಎಂಬ ಸುದ್ದಿ ಕೂಡ ಕೇಳಿಬರುತ್ತಿದೆ. ಮೇ 3ನೇ ವಾರದಿಂದ ಚಿತ್ರದ ಪ್ರಚಾರ ಕಾರ್ಯ ಆರಂಭ ಆಗಲಿದೆ. ಈ ಸಿನಿಮಾದಲ್ಲಿ ಸುದೀಪ್​ ಜೊತೆ ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​ ಮಿಲಿಯನ್​ಗಟ್ಟಲೆ ವೀಕ್ಷಣೆ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ