Vikrant Rona: ಫೆ.24ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಸುದೀಪ್​ ನಟನೆಯ ಬಹುನಿರೀಕ್ಷಿತ ಚಿತ್ರದಿಂದ ಬಿಗ್​ ನ್ಯೂಸ್​

Vikrant Rona Release Date: ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರ ಫೆ. 24ರಂದು ಅದ್ದೂರಿಯಾಗಿ ಬಿಡುಗಡೆ ಆಗಲಿದೆ. ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

Vikrant Rona: ಫೆ.24ಕ್ಕೆ ‘ವಿಕ್ರಾಂತ್​ ರೋಣ’ ರಿಲೀಸ್​; ಸುದೀಪ್​ ನಟನೆಯ ಬಹುನಿರೀಕ್ಷಿತ ಚಿತ್ರದಿಂದ ಬಿಗ್​ ನ್ಯೂಸ್​
‘ವಿಕ್ರಾಂತ್ ರೋಣ’ ಚಿತ್ರದಲ್ಲಿ ಕಿಚ್ಚ ಸುದೀಪ್
Follow us
TV9 Web
| Updated By: Digi Tech Desk

Updated on:Dec 07, 2021 | 2:34 PM

ಕಿಚ್ಚ ಸುದೀಪ್​ (Kichcha Sudeepa) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್​ ರೋಣ’ (Vikrant Rona Movie) ಬಿಡುಗಡೆಗೆ ಸಜ್ಜಾಗಿದೆ. ಚಿತ್ರತಂಡದಿಂದ ಈಗ ರಿಲೀಸ್​ ದಿನಾಂಕ (Vikrant Rona Release Date) ಕೂಡ ಘೋಷಣೆ ಆಗಿದೆ. 2022ರ ಫೆ.24ರಂದು ವಿಶ್ವಾದ್ಯಂತ ‘ವಿಕ್ರಾಂತ್​ ರೋಣ’ ತೆರೆಕಾಣಲಿದೆ. ಈ ವಿಚಾರವನ್ನು ಸೋಷಿಯಲ್​ ಮೀಡಿಯಾ ಮೂಲಕ ಕಿಚ್ಚ ಸುದೀಪ್​ ಮತ್ತು ಚಿತ್ರತಂಡದವರು ಬಹಿರಂಗಪಡಿಸಿದ್ದಾರೆ. ‘ರಂಗಿತರಂಗ’ ಖ್ಯಾತಿಯ ನಿರ್ದೇಶಕ ಅನೂಪ್​ ಭಂಡಾರಿ ( Anup Bhandari) ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಅದ್ದೂರಿಯಾಗಿ ಸಿನಿಮಾ ಮೂಡಿಬಂದಿದ್ದು, ಜಾಕ್​ ಮಂಜುನಾಥ್​ ಹಾಗೂ ಅಲಂಕಾರ್​ ಪಾಂಡಿಯನ್​ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಟೀಸರ್​ ಮೂಲಕ ‘ವಿಕ್ರಾಂತ್​ ರೋಣ’ ಭರ್ಜರಿ ಸೌಂಡ್​ ಮಾಡಿದೆ. ಕಿಚ್ಚನ ಗೆಟಪ್​ ಕಂಡು ಫ್ಯಾನ್ಸ್ ಥ್ರಿಲ್​ ಆಗಿದ್ದಾರೆ. ಸಿನಿಮಾ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ವಿಶೇಷ ಏನೆಂದರೆ, 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ರಿಲೀಸ್​ ಡೇಟ್​ ಅನೌನ್ಸ್​ ಮಾಡಲು ‘ವಿಕ್ರಾಂತ್​ ರೋಣ’ ತಂಡ ಒಂದು ಟೀಸರ್ ಬಿಡುಗಡೆ ಮಾಡಿದೆ. ಕಿಚ್ಚ ಸುದೀಪ್​ ಅವರು ಬೈಕ್​ ಏರಿ ಖಡಕ್​ ಪೋಸ್​ ನೀಡಿದ್ದಾರೆ. ದಟ್ಟ ಕಾನನದ ಹಿನ್ನೆಲೆಯಲ್ಲಿ ಈ ಕಥೆ ಸಾಗಲಿದೆ ಎಂಬುದನ್ನು ಈ ಟೀಸರ್​ ಸಾರಿ ಹೇಳುತ್ತಿದೆ. ‘2022ರ ಫೆ.24ರಂದು ಈ ಜಗತ್ತಿಗೆ ಹೊಸ ಹೀರೋ ಸಿಗಲಿದ್ದಾನೆ’ ಎಂಬ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ಹಲವು ಕಾರಣಗಳಿಂದಾಗಿ ಈ ಸಿನಿಮಾ ಕೌತುಕ ಮೂಡಿಸಿದೆ. ಕಾಡಿನ ಸೆಟ್​ ಹಾಕಿ ಬಹುತೇಕ ದೃಶ್ಯಗಳನ್ನು ಶೂಟ್​ ಮಾಡಲಾಗಿದೆ. 3ಡಿ ಅವತರಣಿಕೆಯಲ್ಲಿ ‘ವಿಕ್ರಾಂತ್​ ರೋಣ’ ರಿಲೀಸ್​ ಆಗಲಿರುವುದು ಕೂಡ ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್​ ಭಂಡಾರಿ ಕೂಡ ಇದರಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ನಟಿ ನೀತಾ ಅಶೋಕ್​ ಅವರು ಪಾತ್ರವೂ ಗಮನ ಸೆಳೆಯಲಿದೆ. ವಿಶೇಷ ಎಂದರೆ, ಈ ಚಿತ್ರದಲ್ಲಿ ಬಾಲಿವುಡ್​ ಬೆಡಗಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಒಂದು ಸ್ಪೆಷಲ್​ ಸಾಂಗ್​ನಲ್ಲೂ ಅವರು ಡ್ಯಾನ್ಸ್​ ಮಾಡಿದ್ದಾರೆ. ಅವರ ಪಾತ್ರಕ್ಕೆ ಗಡಂಗ್​ ರಕ್ಕಮ್ಮ ಎಂದು ಹೆಸರು ಇಡಲಾಗಿದೆ. ಹೀಗೆ ‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಹತ್ತು ಹಲವು ವಿಶೇಷತೆಗಳಿವೆ.

ಇದನ್ನೂ ಓದಿ:

ಸುದೀಪ್​ಗಾಗಿ ದೇವಸ್ಥಾನ: ಕಿಚ್ಚನ 4 ಅಡಿ ಮೂರ್ತಿ ಎದುರು ಪುನೀತ್​ ರಾಜ್​ಕುಮಾರ್​​ ಭಾವಚಿತ್ರ

ಕ್ರಿಕೆಟ್​, ಸಿನಿಮಾ ಪ್ರಿಯರಿಗೆ ಗುಡ್​ ನ್ಯೂಸ್​; ‘83’ ಟೀಮ್​ ಜತೆ ಸೇರಿಕೊಂಡ ಕಿಚ್ಚ ಸುದೀಪ್​

Published On - 1:26 pm, Tue, 7 December 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ