AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆಪ್ಟೆಂಬರ್ 1ರ ರಾತ್ರಿಯೇ ಸಿಗೋಣವಾ’; ಅಭಿಮಾನಿಗಳಿಗೆ ಕಿಚ್ಚನ ಬರ್ತ್​ಡೇ ಸರ್​ಪ್ರೈಸ್

Kichcha Sudeep Birthday: ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಮೀಪಿಸಿದೆ. ತಮ್ಮ ತಾಯಿಯ ಅಗಲಿಕೆಯ ನೋವಿನೊಂದಿಗೆ ಅವರು ಅಭಿಮಾನಿಗಳಿಗೆ ಓಪನ್ ಲೆಟರ್ ಬರೆದಿದ್ದಾರೆ. ಸೆಪ್ಟೆಂಬರ್ 1 ರಂದು ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಲು ಮತ್ತು ಸೆಪ್ಟೆಂಬರ್ 2 ರಂದು ಶಾಂತವಾಗಿರಲು ಅವರು ವಿನಂತಿಸಿದ್ದಾರೆ.

‘ಸೆಪ್ಟೆಂಬರ್ 1ರ ರಾತ್ರಿಯೇ ಸಿಗೋಣವಾ’; ಅಭಿಮಾನಿಗಳಿಗೆ ಕಿಚ್ಚನ ಬರ್ತ್​ಡೇ ಸರ್​ಪ್ರೈಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 25, 2025 | 5:04 PM

Share

ಕಿಚ್ಚ ಸುದೀಪ್ ಅವರ ಬರ್ತ್​ಡೇ (Sudeep Birthday) ಸಮೀಪಿಸಿದೆ. ಸೆಪ್ಟೆಂಬರ್ 2 ಅವರ ಹುಟ್ಟುಹಬ್ಬ. ಪ್ರತಿ ವರ್ಷ ಈ ದಿನ ಫ್ಯಾನ್ಸ್​ಗೆ ಸಖತ್ ವಿಶೇಷ. ಇದನ್ನು ಅವರು ಹಬ್ಬದ ರೀತಿಯಲ್ಲಿ ಆಚರಿಸುತ್ತಾರೆ. ಈ ಬಾರಿಯೂ ಅದು ಮುಂದುವರಿಯಲಿದೆ. ಆದರೆ, ತಾಯಿ ಇಲ್ಲದೆ ಸುದೀಪ್ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ. ಹೀಗಾಗಿ, ಅವರಿಗೆ ಬೇಸರ ಇದೆ. ಆದರೆ, ಅಭಿಮಾನಿಗಳಿಗೋಸ್ಕರ ಸೆಪ್ಟೆಂಬರ್ 1ರಂದೇ ಅಭಿಮಾನಿಗಳ ಜೊತೆಗೂಡಿ ಈ ವಿಶೇಷ ದಿನ ಆಚರಿಸಿಕೊಳ್ಳಲು ಅವರು ರೆಡಿ ಆಗಿದ್ದಾರೆ. ಅವರು ಅಭಿಮಾನಿಗಳಿಗಾಗಿ ಓಪನ್ ಪತ್ರ ಬರೆದಿದ್ದಾರೆ. ಆ ಪತ್ರದ ಸಾಲುಗಳು ಇಲ್ಲಿವೆ.

‘ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ? ಸೆಪ್ಟೆಂಬರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೋಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬಾ ಕಷ್ಟವಾಗುತ್ತಿದೆ. ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು. ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ’ ಎಂದು ಪತ್ರ ಆರಂಭಿಸಿದ್ದಾರೆ ಕಿಚ್ಚ.

ಇದನ್ನೂ ಓದಿ
Image
VIDEO: ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
Image
ಹಿರಿಯ ನಟ ದಿನೇಶ್​ಗೆ ಇದ್ದ ಆರೋಗ್ಯ ಸಮಸ್ಯೆಗಳು ಒಂದೆರಡಲ್ಲ
Image
‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’; ದರ್ಶನ್ ಧರಿಸಿದ್ದ ಜಾಕೆಟ್ ಬೆಲೆ ಎಷ್ಟು?
Image
ದಿನೇಶ್​ಗಾಗಿ ಮಂಗಳೂರು ಮೀನಿನ ಅಡುಗೆ ಮಾಡಿಸಿದ್ದ ಅಣ್ಣಾವ್ರು

ಸುದೀಪ್ ಟ್ವೀಟ್

‘ಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ! ನಿಮ್ಮ ಮೂಲಕವೇ ನನ್ನ ಹುಟ್ದಬ್ಬ ಹುಟ್ಟಬೇಕು. ಗಡಿಯಾರ ಹನ್ನೆರಡು ಗಂಟೆ ಎಂದು ಸದ್ದುಮಾಡುವಾಗ ನನಗೆ ನಿಮ್ಮ ಶುಭಾಶಯಗ ಕಿವಿಗೆ ಕೇಳಬೇಕು. ಅವುಗಳೇ ಎದೆಗೆ ಇಳಿಯಬೇಕು. ಆದ್ದರಿಂದ ಸೆಪ್ಟೆಂಬರ್ ಒಂದರ ರಾತ್ರಿ ನಾವೆಲ್ಲರೂ ಒಂದು ಕಡೆ ಸೇರೋಣ. ಎಲ್ಲಿ, ಹೇಗೆ? ಅನ್ನೋದನ್ನು ತಿಳಿಸುತ್ತೇನೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಬೆಂಗಳೂರಿನಲ್ಲಿ ಜಾಗ ಖರೀದಿಸಿದ ಕಿಚ್ಚ ಸುದೀಪ್

ಆದರೆ ಮಾರನೇ ದಿನ ಅಂದರೆ ಸೆಪ್ಟೆಂಬರ್ 2ರಂದು ದಯವಿಟ್ಟು ಯಾರೂ ಮನೆ ಹತ್ತಿರ ಬರಬೇಡಿ. ನಾನು ಆ ದಿನ ಮನೆಯಲ್ಲಿ ಇರುವುದಿಲ್ಲ. ನಾನಿರುವುದಿಲ್ಲವೆಂದು ಹೇಳಿ ಮೇಲೂ ನೀವು ಮನೆ ಬಳಿ ಬಂದು ಕಾದರೆ ನಿನ್ನ ಮನಸಿಗೆ ನೋವಾಗುತ್ತದೆ. ಜೊತೆಗೆ ಈ ಸಲ ಅಮ್ಮನಿಲ್ಲದ ಮೊದಲ ವರ್ಷವಾಗಿರುವುದರಿಂದ ಮನೆ ಬಳಿ ಚೂರು ಶಾಂತಿ ವಾತಾವರಣ ಇರಲೆಂದು ಬಯಸುತ್ತಿದ್ದೇನೆ. ನನಗೆ ನಂಬಿಕೆ ಇದೆ; ನೀವು ನನ್ನನ್ನು ಅರ್ಥಮಾಡಿಕೊಳ್ಳುವಿರೆಂದು ಮತ್ತು ನಿರಾಸೆಗೊಳಿಸುವುದಿಲ್ಲವೆಂದು. ಅದು ಬಿಟ್ಟರೆ ಪ್ರತಿವರ್ಷದಂತೆ ಈ ವರ್ಷವೂ ಸಾಮಾಜಿಕ ಸೇವಾ ಕಾರ್ಯಗಳು ಯಥಾಪ್ರಕಾರ ನಡೆಯಲಿವೆ. ನಿಮ್ಮ ಹಾರೈಕೆ, ಅಭಿಮಾನ ಮತ್ತು ಸಾಂಗತ್ಯವೇ ನನ್ನ ಬಹುದೊಡ್ಡ ಆಸ್ತಿ’ ಎಂದು ಸುದೀಪ್ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.