AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್​ ಹೊಸ ಸಿನಿಮಾ ‘ಮೇಘಾ’; ಟೀಸರ್​ ಬಿಡುಗಡೆ ಮಾಡಿದ ನಾಗೇಂದ್ರ ಪ್ರಸಾದ್​

ವಿ. ನಾಗೇಂದ್ರ ಪ್ರಸಾದ್ ಅವರು ‘ಮೇಘ’ ಸಿನಿಮಾದ ಟೀಸರ್ ಅನಾವರಣ ಮಾಡಿದ್ದಾರೆ. ಅಲ್ಲದೇ, ಚಿತ್ರತಂಡಕ್ಕೆ ಅವರು ಶುಭ ಹಾರೈಸಿದ್ದಾರೆ. ಚರಣ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕಿರಣ್ ರಾಜ್ ಮತ್ತು ಕಾಜಲ್ ಕುಂದರ್ ಅವರು ಜೋಡಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ ಅವರಿಗೂ ಒಂದು ಪ್ರಮುಖ ಪಾತ್ರವಿದೆ.

ಕಿರಣ್ ರಾಜ್​ ಹೊಸ ಸಿನಿಮಾ ‘ಮೇಘಾ’; ಟೀಸರ್​ ಬಿಡುಗಡೆ ಮಾಡಿದ ನಾಗೇಂದ್ರ ಪ್ರಸಾದ್​
ಕಾಜಲ್​ ಕುಂದರ್​, ಕಿರಣ್​ ರಾಜ್​
ಮದನ್​ ಕುಮಾರ್​
|

Updated on: Jan 26, 2024 | 5:36 PM

Share

ಕಿರುತೆರೆಯಲ್ಲಿ ಹೆಸರು ಗಳಿಸಿ, ನಂತರ ಹಿರಿತೆರೆಯಲ್ಲಿ ಸಾಧನೆ ಮಾಡಲು ಬಂದ ಅನೇಕರು ಕನ್ನಡ ಚಿತ್ರರಂಗದಲ್ಲಿ ಇದ್ದಾರೆ. ಅಂಥವರ ಸಾಲಿನಲ್ಲಿ ನಟ ಕಿರಣ್​ ರಾಜ್​ (Kiran Raj) ಕೂಡ ಪ್ರಮುಖರು. ‘ಕನ್ನಡತಿ’ ಧಾರಾವಾಹಿ ಮೂಲಕ ಕಿರಣ್​ ರಾಜ್​ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಅದರ ಜೊತೆ ಅವರು ಸಿನಿಮಾಗಳಲ್ಲೂ ನಟಿಸಿದರು. ಈಗ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಕಿರಣ್​ ರಾಜ್​ ನಟಿಸಿದ ‘ಮೇಘ’ ಸಿನಿಮಾ (Megha Kannada Movie) ಟೀಸರ್​ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ವೇಳೆ ಸುದ್ದಿಗೋಷ್ಠಿ ನಡೆಸಿ, ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ‘ಮೇಘ’ ಚಿತ್ರತಂಡದವರು.

ಸ್ಯಾಂಡಲ್​ವುಡ್​ನ ಜನಪ್ರಿಯ ಗೀತರಚನಕಾರ ವಿ. ನಾಗೇಂದ್ರ ಪ್ರಸಾದ್ ಅವರು ‘ಮೇಘ’ ಸಿನಿಮಾದ ಟೀಸರ್ ಅನಾವರಣ ಮಾಡಿದ್ದಾರೆ. ಅಲ್ಲದೇ, ಚಿತ್ರತಂಡಕ್ಕೆ ಅವರು ಶುಭ ಹಾರೈಸಿದ್ದಾರೆ. ಮೂಲತಃ ಐಟಿ ಉದ್ಯೋಗಿ ಆಗಿದ್ದ ಚರಣ್​ ಅವರು ‘ಮೇಘ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಕೊವಿಡ್ ಬಳಿಕ ನಾನು ಐಟಿ ಕೆಲಸ ಬಿಟ್ಟು ನಾಗೇಂದ್ರ ಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಸೇರಿಕೊಂಡೆ. ಇದು ನನ್ನ ಮೊದಲ ನಿರ್ದೇಶನದ ಸಿನಿಮಾ. ‘ಮೇಘ’ಗಳು ಆಕಾಶದಲ್ಲಿ ಸದಾ ಒಟ್ಟಾಗಿ ಚಲಿಸುತ್ತವೆ. ಆದರೆ ಮಳೆಯನ್ನು ಎಲ್ಲೋ ಸುರಿಸುತ್ತವೆ. ಆ ಎಳೆಯನ್ನೇ ಇಟ್ಟುಕೊಂಡು ಲವ್​ ಸ್ಟೋರಿ ಸಿದ್ಧ ಮಾಡಿಕೊಂಡೆ. ನಮ್ಮ ಸಿನಿಮಾದಲ್ಲಿ ‘ಮೇಘ’ ಎಂದರೆ ಪ್ರೀತಿ’ ಎಂದು ನಿರ್ದೇಶಕ ಚರಣ್​ ಹೇಳಿದ್ದಾರೆ.

‘ಮೇಘಾ’ ಸಿನಿಮಾದ ಟೀಸರ್​ ಬಿಡುಗಡೆ ಕಾರ್ಯಕ್ರಮ

ಈ ಸಿನಿಮಾದಲ್ಲಿ ಕಿರಣ್ ರಾಜ್ ಅವರಿಗೆ ಜೋಡಿಯಾಗಿ ಕಾಜಲ್ ಕುಂದರ್ ನಟಿಸಿದ್ದಾರೆ. ರಾಜೇಶ್ ನಟರಂಗ ಸೇರಿದಂತೆ ಹಲವು ಹಿರಿಯ ಕಲಾವಿದರು ಅಭಿನಯಿಸಿದ್ದಾರೆ. ‘ಲವ್​, ಫ್ರೆಂಡ್​ಶಿಪ್​, ಸೆಂಟಿಮೆಂಟ್.. ಹೀಗೆ ಎಲ್ಲ ಅಂಶಗಳು ನಮ್ಮ ಸಿನಿಮಾದಲ್ಲಿವೆ’ ಎಂದು ನಿರ್ದೇಶಕರು ಹೇಳಿದ್ದಾರೆ. ಈ ಚಿತ್ರಕ್ಕೆ ಜೋಯಲ್ ಸಕ್ಕರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ 5 ಹಾಡುಗಳು ಇರಲಿವೆ. 2 ಹಾಡುಗಳನ್ನು ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಇನ್ನುಳಿದ ಮೂರು ಹಾಡುಗಳಿಗೆ ನಿರ್ದೇಶಕರೇ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ: ಟಿ-ಸೀರಿಸ್​ ಪಾಲಾಯ್ತು ‘ರಾನಿ’ ಆಡಿಯೋ ಹಕ್ಕು; ಕಿರಣ್​ ರಾಜ್​ ನಟನೆಯ ಚಿತ್ರದ ಬಗ್ಗೆ ಇಲ್ಲಿದೆ ಅಪ್​ಡೇಟ್​

ಯತೀಶ್ ಹೆಚ್.ಆರ್. ಅವರು ‘ಮೇಘ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚಿತ್ರದ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ‘ಚಿತ್ರರಂಗ ನನಗೆ ಹೊಸದು. ನಿರ್ಮಾಪಕರಾದ ಎಂ.ಜಿ. ರಾಮಮೂರ್ತಿ ಮತ್ತು ತ್ರಿವಿಕ್ರಮ ಸಾಫಲ್ಯ ಅವರ ಮಾರ್ಗದರ್ಶನದಲ್ಲಿ ‘ಕೃಷಿ ಪ್ರೊಡಕ್ಷನ್ಸ್’ ಮೂಲಕ ‘ಮೇಘ’ ಸಿನಿಮಾವನ್ನು ನಿರ್ಮಿಸಿದ್ದೇನೆ’ ಎಂದು ಯತೀಶ್ ಹೇಳಿದ್ದಾರೆ. ಗೌತಮ್ ನಾಯಕ್ ಅವರ ಛಾಯಾಗ್ರಾಹಕ ಮತ್ತು ಸಂಕಲನ ಈ ಚಿತ್ರಕ್ಕಿದೆ.

‘ಮೇಘ’ ಸಿನಿಮಾ ಟೀಸರ್:

ಈ ಸಿನಿಮಾದಲ್ಲಿ ಕಥಾನಾಯಕಿ ಮತ್ತು ಕಥಾನಾಯಕನ ಪಾತ್ರಗಳ ಹೆಸರು ಮೇಘ. ‘ನಾನು ಇಲ್ಲಿಯವರೆಗೆ ಮಾಡಿರದಂತಹ ಒಂದು ಪಾತ್ರವನ್ನು ಈ ಸಿನಿಮಾದಲ್ಲಿ ಮಾಡಿದ್ದೇನೆ. ಲವ್​ಸ್ಟೋರಿ ಆಗಿದ್ದರೂ ಈ ಕಥೆಯಲ್ಲಿನ ಎಮೋಷನ್ ಎಲ್ಲರ ಗಮನ ಸೆಳೆಯುತ್ತದೆ. ನಾನು ಈ ಸಿನಿಮಾದ ಕಥೆ ಕೇಳಿದ ಬಳಿಕ ಅಪ್ಪನಿಗೆ ಬುಲೆಟ್ ಕೊಡಿಸಿದ್ದೇನೆ. ಈಗಿನ ತಲೆಮಾರಿನ ಪ್ರೇಕ್ಷಕರಿಗೆ ಬೇಕಾದ ಎಲ್ಲ ಅಂಶಗಳು ಈ ಚಿತ್ರದಲ್ಲಿವೆ’ ಎಂದು ಕಿರಣ್ ರಾಜ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ