Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಣ್ ರಾಜ್ ನಟನೆಯ ‘ರಾನಿ’ ಬಿಡುಗಡೆಗೆ ಮುಹೂರ್ತ ನಿಗದಿ

ಕಿರಣ್ ರಾಜ್ ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿರುವ ಪ್ರತಿಭೆ. ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಅವರು ನಾಯಕನಾಗಿ ನಟಿಸುತ್ತಿರುವ ‘ರಾನಿ’ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಶುಭ ಕೋರಿದೆ.

ಕಿರಣ್ ರಾಜ್ ನಟನೆಯ ‘ರಾನಿ’ ಬಿಡುಗಡೆಗೆ ಮುಹೂರ್ತ ನಿಗದಿ
Follow us
ಮಂಜುನಾಥ ಸಿ.
|

Updated on: Jul 06, 2024 | 9:52 PM

ನಟ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಗುರುತಿಸಿಕೊಂಡಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ‘ರಾನಿ’ ಚಿತ್ರತಂಡ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಪ್ರಮೋದ್ ಮರವಂತೆ ಅವರು ಬರೆದು, ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸಿರುವ ‘ಹವಾಮಾನವೇ ಸುಂದರ ಸುಂದರ’ ಎಂಬ ಹಾಡು ಟಿ-ಸೀರೀಸ್‍ನ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ.

ಹುಟ್ಟುಹಬ್ಬ ಹಾಗೂ ಹಾಡು ಬಿಡುಗಡೆ ಎರಡೂ ಒಟ್ಟಿಗೆ ಆದ ಖುಷಿಯಲ್ಲಿ ಮಾತನಾಡಿದ ಕಿರಣ್‍ ರಾಜ್‍, ‘ಜೀವನದಲ್ಲಿ ಮುಂದೇನು ಮಾಡಬೇಕು ಎಂಬ ಪ್ರಶ್ನೆ ಎದುರಾದಾಗ ನನಗೆ, ‘ರಾನಿ’ ಸಿನಿಮಾದ ನಿರ್ಮಾಪಕರು ಮತ್ತು ನಿರ್ದೇಶಕರು ದೊರೆತರು. ನನಗೂ ಈ ಸಿನಿಮಾದ ಕತೆ ಇಷ್ಟವಾಯಿತು. ಕಥೆ ಕಾಲ್ಪನಿಕ ಆದರೂ, ಪ್ರತಿಯೊಬ್ಬರಿಗೂ ನನ್ನ ಪಾತ್ರ ಹತ್ತಿರವಾಗುತ್ತದೆ‌. ದೊಡ್ಡ ಬಜೆಟ್​ನ ಸಿನಿಮಾ ಇದು. ಕೆಲವರು ನನ್ನ ಸಿನಿಮಾಗೆ ಯಾಕೆ ಇಷ್ಟೊಂದು ಖರ್ಚು ಮಾಡುತ್ತಿದ್ದೀರಾ? ಎಂದು ನಿರ್ಮಾಪಕರನ್ನು ಕೇಳಿರಬಹುದು. ಆದರೆ ನಮ್ಮ ನಿರ್ಮಾಪಕರು ವ್ಯಕ್ತಿಗಿಂತ ವ್ಯಕ್ತಿತ್ವಕ್ಕೆ ಬೆಲೆ ಕೊಡುವವರು. ಹಾಗಾಗಿ, ಹಣಕಾಸಿನ ವಿಚಾರಕ್ಕಿಂತ ಒಳ್ಳೆಯ ಸಿನಿಮಾ ಮಾಡಿದ್ದಾರೆ’ ಎಂದರು.

ಇದನ್ನೂ ಓದಿ:ಕಿರಣ್ ರಾಜ್ ಸಿನಿಮಾದಲ್ಲಿ ತನಿಷಾ ಕುಪ್ಪಂಡ ರಗಡ್ ಪೋಲೀಸ್ ಅವತಾರ

‘ಇದು ಆ್ಯಕ್ಷನ್‍ ಚಿತ್ರವಾದರೂ, ಕೌಟುಂಬಿಕ ಕತೆಯನ್ನೂ ಸಹ ಒಳಗೊಂಡಿದೆ. ಈ ಹಿಂದೆ ನೀವು ನೋಡಿರದ ಕಿರಣ್ ರಾಜ್ ಅನ್ನು ‘ರಾನಿ’ ಸಿನಿಮಾದಲ್ಲಿ ನೋಡಬಹುದು‌. ಸಿನಿಮಾದಲ್ಲಿ ಒಟ್ಟು ಆರು ಆಕ್ಷನ್ ಸೀಕ್ವೆನ್ಸ್​ ಇವೆ. ಕೌಟುಂಬಿಕ ಸೆಂಟಿಮೆಂಟ್‍ ಸಹ ಸ್ವಲ್ಪ ಹೆಚ್ಚಾಗಿಯೇ ಇದೆ. ಆರು ಫೈಟ್‍ಗಳನ್ನು ವಿನೋದ್‍ ಮಾಸ್ಟರ್ ಅವರೇ ಸಾಹಸ ನಿರ್ದೇಶನ ಮಾಡಿದ್ದಾರೆ. ‘ರಾನಿ’ ಸಿನಿಮಾವನ್ನು ಆಗಸ್ಟ್ 30ಕ್ಕೆ ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿದೆ.

ನಿರ್ಮಾಪಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಮಾತನಾಡಿ, ‘ಚಿತ್ರತಂಡದ ಎಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು. “ಹವಮಾನ” ಹಾಡು ಹುಟ್ಟಿದ ಬಗ್ಗೆ ಪ್ರಮೋದ್ ಮರವಂತೆ ಹೇಳಿದರು‌. ಸಂಗೀತದ ಕುರಿತು ಮಣಿಕಂತ್ ಕದ್ರಿ ವಿವರಿಸಿದರು. ನಟಿಯರಾದ ಸಮೀಕ್ಷಾ, ರಾಧ್ಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸ್ಥಿರ ಛಾಯಾಗ್ರಾಹಕರಾಗಿದ್ದ ರಾಘವೇಂದ್ರ ಬಿ ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ