‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ಸೀಕ್ವೆಲ್​ ಮಾಡೋಕೆ ರೆಡಿ ಆದ ರಕ್ಷಿತ್ ಶೆಟ್ಟಿ; ನಿರ್ದೇಶನ ಯಾರದ್ದು?

ಹಿಟ್​ ಸಿನಿಮಾಗೆ ಸೀಕ್ವೆಲ್ ತಂದರೆ ಜನರು ಹೆಚ್ಚೆಚ್ಚು ನೋಡೋಕೆ ಇಷ್ಟಪಡುತ್ತಾರೆ. ಹೀಗಾಗಿ, ಚಿತ್ರಕ್ಕೆ ದೊಡ್ಡ ಪ್ರಚಾರ ಸಿಗಲಿದೆ. ಈ ಕಾರಣಕ್ಕೆ ‘ಕಿರಿಕ್ ಪಾರ್ಟಿ’ ಸೀಕ್ವೆಲ್​ ಬಗ್ಗೆ ರಕ್ಷಿತ್ ಶೆಟ್ಟಿ ಯೋಚನೆ ಮಾಡಿದ್ದಾರೆ.

‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ಸೀಕ್ವೆಲ್​ ಮಾಡೋಕೆ ರೆಡಿ ಆದ ರಕ್ಷಿತ್ ಶೆಟ್ಟಿ; ನಿರ್ದೇಶನ ಯಾರದ್ದು?
ರಕ್ಷಿತ್ ಶೆಟ್ಟಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 03, 2022 | 1:51 PM

ರಕ್ಷಿತ್ ಶೆಟ್ಟಿ (Rakshit Shetty) ವೃತ್ತಿ ಜೀವನಕ್ಕೆ ಒಂದು ದೊಡ್ಡ ಯಶಸ್ಸು ತಂದುಕೊಟ್ಟ ಖ್ಯಾತಿ ‘ಕಿರಿಕ್ ಪಾರ್ಟಿ’ ಚಿತ್ರಕ್ಕೆ (Kirik Party Movie) ಇದೆ. ಅದಕ್ಕೂ ಮೊದಲು ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಅಂತಹ ಚಿತ್ರಗಳಲ್ಲಿ ಅವರು ನಟಿಸಿದ್ದರೂ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿರಲಿಲ್ಲ. ಯಾವಾಗ ‘ಕಿರಿಕ್ ಪಾರ್ಟಿ’ ಹಿಟ್ ಆಯಿತೋ ಅಲ್ಲಿಂದ ರಕ್ಷಿತ್ ಶೆಟ್ಟಿ ಅದೃಷ್ಟ ಬದಲಾಯಿತು. ನಾನಾ ರೀತಿಯ ಆಫರ್​ಗಳು ಅವರನ್ನು ಹುಡುಕಿಬಂದವು. ಈಗ ಈ ಚಿತ್ರಕ್ಕೆ ಸೀಕ್ವೆಲ್ ಬರುತ್ತಿದೆ. ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ಟಿ ಘೋಷಣೆ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಬಾರಿ ಅವರು ಯಾವ ತಂಡದ ಜತೆಗೆ ಪ್ರೇಕ್ಷಕರ ಎದುರು ಬರಲಿದ್ದಾರೆ ಎನ್ನುವ ಕುತೂಹಲ ಕೂಡ ಮೂಡಿದೆ.

‘ಕಿರಿಕ್ ಪಾರ್ಟಿ’ ಚಿತ್ರಕ್ಕೆ ರಿಷಬ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದರು. ರಶ್ಮಿಕಾ ಮಂದಣ್ಣ ಹಾಗೂ ಸಂಯುಕ್ತಾ ಹೆಗಡೆ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ತೆರೆಕಂಡ ಬಳಿಕ ರಶ್ಮಿಕಾ ಯಾವ ಹಂತಕ್ಕೆ ಬೆಳೆದರು ಎಂಬುದನ್ನು ಮತ್ತೆ ಹೇಳಬೇಕಿಲ್ಲ. ಸಂಯುಕ್ತಾ ಕೂಡ ಯಶಸ್ಸು ಕಂಡರು. ರಿಷಬ್ ಶೆಟ್ಟಿ ಅವರು ನಿರ್ದೇಶಕನಾಗಿ ಖ್ಯಾತಿ ಹೆಚ್ಚಿಸಿಕೊಂಡರು. ಈಗ ರಕ್ಷಿತ್ ಹಾಗೂ ರಿಷಬ್ ಇಬ್ಬರೂ ಜತೆಯಾಗಿ ‘ಕಿರಿಕ್ ಪಾರ್ಟಿ 2’ ತರಲು ಪ್ಲ್ಯಾನ್ ರೂಪಿಸಿದ್ದಾರೆ.

ಹಿಟ್​ ಸಿನಿಮಾಗೆ ಸೀಕ್ವೆಲ್ ತಂದರೆ ಜನರು ಹೆಚ್ಚೆಚ್ಚು ನೋಡೋಕೆ ಇಷ್ಟಪಡುತ್ತಾರೆ. ಹೀಗಾಗಿ, ಚಿತ್ರಕ್ಕೆ ದೊಡ್ಡ ಪ್ರಚಾರ ಸಿಗಲಿದೆ. ಈ ಕಾರಣಕ್ಕೆ ‘ಕಿರಿಕ್ ಪಾರ್ಟಿ’ ಸೀಕ್ವೆಲ್​ ಬಗ್ಗೆ ರಕ್ಷಿತ್ ಶೆಟ್ಟಿ ಯೋಚನೆ ಮಾಡಿದ್ದಾರೆ. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ಅವರೇ ನಿರ್ದೇಶನ ಮಾಡಲಿದ್ದಾರೆ. ಪಾತ್ರವರ್ಗದಲ್ಲಿ ಯಾರೆಲ್ಲಾ ಇರಲಿದ್ದಾರೆ ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ
Image
21 ನಗರಗಳಲ್ಲಿ ಪ್ರೀಮಿಯರ್​ ಆಗಲಿದೆ ‘777 ಚಾರ್ಲಿ’; ಹೊಸ ದಾಖಲೆ ಬರೆಯಲು ಸಜ್ಜಾದ ರಕ್ಷಿತ್​ ಶೆಟ್ಟಿ ಸಿನಿಮಾ
Image
Pramod Shetty: ‘ರಕ್ಷಿತ್, ರಿಷಬ್’- ಈರ್ವರಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡೋರು ಯಾರು? ಪ್ರಮೋದ್​ ಶೆಟ್ಟಿ ನೀಡಿದ್ರು ಉತ್ತರ
Image
Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
Image
‘ಕೆಜಿಎಫ್​’ ನಿರ್ಮಾಪಕ ವಿಜಯ್​ ಕಿರಗಂದೂರು ಹೇಳಿದ ಮಾತಿನಿಂದ ಮುಗಿಯಿತು ‘ಕಿರಿಕ್​ ಪಾರ್ಟಿ’ ವಿವಾದ

ಇದನ್ನೂ ಓದಿ: ‘ಕೆಜಿಎಫ್​’ ನಿರ್ಮಾಪಕ ವಿಜಯ್​ ಕಿರಗಂದೂರು ಹೇಳಿದ ಮಾತಿನಿಂದ ಮುಗಿಯಿತು ‘ಕಿರಿಕ್​ ಪಾರ್ಟಿ’ ವಿವಾದ

ಗಲಾಟಾ ಪ್ಲಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ರಕ್ಷಿತ್ ಶೆಟ್ಟಿ, ‘ನಾನು ನಿರ್ದೇಶನ ಮಾಡಲಿರುವ ರಿಚರ್ಡ್ ಆ್ಯಂಥೋನಿ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್ ಸಂದರ್ಭದಲ್ಲಿ ಕಿರಿಕ್ ಪಾರ್ಟಿ ಸೀಕ್ವೆಲ್ ಶೂಟಿಂಗ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ನನ್ನ ತಲೆಯಲ್ಲಿ ಈ ಸಿನಿಮಾದ ಕಥೆಯ ಒಂದೆಳೆ ರೆಡಿ ಇದೆ. ರಿಷಬ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದು, ಸಾಕಷ್ಟು ವಿಚಾರಗಳನ್ನು ಅವರೇ ನೋಡಿಕೊಳ್ಳಲಿದ್ದಾರೆ. ಹಾಗಾಗಿ ನಾನು ಹೆಚ್ಚು ಚಿಂತಿಸುವ ಅಗತ್ಯವಿಲ್ಲ. 2 ತಿಂಗಳಲ್ಲಿ ನಮ್ಮ ತಂಡ ಸ್ಕ್ರಿಪ್ಟ್ ಕೆಲಸ ಮುಗಿಸಲಿದೆ. ಮತ್ತೆ ಒಂದು ಸಣ್ಣ ಟೀಂ ಇಟ್ಟುಕೊಂಡು, ಈ ರೀತಿಯ ಸಣ್ಣ ಬಜೆಟ್ ಸಿನಿಮಾ ಮಾಡುವ ಆಲೋಚನೆ ನಮ್ಮದು’ ಎಂದಿದ್ದಾರೆ ರಕ್ಷಿತ್ ಶೆಟ್ಟಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ