Actor Kishore: ‘ನಂಬಿಕೆ ಇರಲಿ ಮೂಢನಂಬಿಕೆ ಬೇಡ’; ದೈವದ ಬಗ್ಗೆ ನಟ ಕಿಶೋರ್ ಮಾತು

| Updated By: ರಾಜೇಶ್ ದುಗ್ಗುಮನೆ

Updated on: Jan 02, 2023 | 11:20 AM

ಇತ್ತೀಚೆಗೆ ಕಾಂತಾರ ದೈವ ಅವಮಾನಿಸಿದ ಯುವಕ ರಕ್ತಕಾರಿ ಸತ್ತ ಅನ್ನೋ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾತನಾಡಿರುವ ಕಿಶೋರ್ ಅವರು, ‘ನಂಬಿಕೆ ಇರಲಿ ಮೂಢನಂಬಿಕೆ ಬೇಡ’ ಎಂದು ಕಿವಿಮಾತು ಹೇಳಿದ್ದಾರೆ.

Actor Kishore: ‘ನಂಬಿಕೆ ಇರಲಿ ಮೂಢನಂಬಿಕೆ ಬೇಡ’; ದೈವದ ಬಗ್ಗೆ ನಟ ಕಿಶೋರ್ ಮಾತು
ಕಿಶೋರ್
Follow us on

‘ಕಾಂತಾರ’ (Kantara Movie) ಸಿನಿಮಾದಿಂದ ನಟ ಕಿಶೋರ್ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಖ್ಯಾತಿ ಈ ಚಿತ್ರದಿಂದ ದುಪ್ಪಟ್ಟಾಗಿದೆ. ಪರಭಾಷೆಯಿಂದ ಬರುತ್ತಿದ್ದ ಆಫರ್​ಗಳ ಸಂಖ್ಯೆ ಹೆಚ್ಚಿದೆ. ನಟ ಕಿಶೋರ್ (Actor Kishore) ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯಿಸುತ್ತಾರೆ. ಈಗ ವೈರಲ್​ ವಿಡಿಯೋ ಕುರಿತಂತೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಕಾಂತಾರ’ ಸಿನಿಮಾಗೂ ಈ ವಿಡಿಯೋಗೂ ಸಂಬಂಧ ಇರುವುದರಿಂದ ಈ ಮಾತನ್ನು ಅವರು ಹೇಳಿದ್ದಾರೆ.

ಇತ್ತೀಚೆಗೆ ಕಾಂತಾರ ದೈವ ಅವಮಾನಿಸಿದ ಯುವಕ ರಕ್ತಕಾರಿ ಸತ್ತ ಅನ್ನೋ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಮಾತನಾಡಿರುವ ಕಿಶೋರ್ ಅವರು, ‘ನಂಬಿಕೆ ಇರಲಿ ಮೂಢನಂಬಿಕೆ ಬೇಡ’ ಎಂದು ಕಿವಿಮಾತು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

‘ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸ್​​ಆ್ಯಪ್​​ನಲ್ಲಿ ವೈರಲ್ ಆಗಿದೆ. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ. ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೋ, ದೆವ್ವವೋ ಒಂದು ಸಾಧನವಷ್ಟೆ. ಸಿನಿಮಾವಾಗಲಿ ಪುರಾಣವಾಗಲಿ’ ಎಂದು ಬರಹ ಆರಂಭಿಸಿದ್ದಾರೆ ಕಿಶೋರ್.

ಇದನ್ನೂ ಓದಿ
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ’ ಎಂದು ಕಿಶೋರ್ ಹೇಳಿದ್ದಾರೆ.

ಕಿಶೋರ್ ಟ್ವಿಟರ್ ಖಾತೆ ಸಸ್ಪೆಂಡ್​

ಕಿಶೋರ್ ಅವರ ಟ್ವಿಟರ್ ಖಾತೆಯನ್ನು ಟ್ವಿಟರ್ ಕಡೆಯಿಂದ ಸಸ್ಪೆಂಡ್ ಮಾಡಲಾಗಿದೆ. ಟ್ವಿಟರ್ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿರುವುದರಿಂದ ಟ್ವಿಟರ್ ಖಾತೆಯನ್ನು ಸಸ್ಪೆಂಡ್ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಕಿಶೋರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ