AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಬ್ಯಾನ್ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಮನುವಾದಿಗಳು: ನಟ ಕಿಶೋರ್

Actor Kishore: ಕರ್ನಾಟಕದಲ್ಲಿ ನಡೆದ ಹಿಜಾಬ್ ಸುತ್ತಲ ಹೋರಾಟಗಳ ಬಗ್ಗೆ ನಟ ಕಿಶೋರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಹಿಜಾಬ್ ಬ್ಯಾನ್ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಮನುವಾದಿಗಳು: ನಟ ಕಿಶೋರ್
ಕಿಶೋರ್
ಮಂಜುನಾಥ ಸಿ.
|

Updated on: May 29, 2023 | 3:13 PM

Share

ಬಹುಭಾಷಾ ನಟ ಕಿಶೋರ್ (Kishore), ವಾರಗೆಯ ಹಲವು ನಟರಂತೆ ಪೊಲಿಟಿಕಲಿ ಕರೆಕ್ಟ್ ಅಲ್ಲದೆ, ತಮಗೆ ಸರಿಕಾಣದ ವಿಷಯಗಳ ಬಗ್ಗೆ ಸ್ಪಷ್ಟವಾಗಿ, ನಿಷ್ಠುರವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಧರ್ಮವನ್ನು ರಾಜಕೀಯಕ್ಕೆ ಬಳಸುವವರ ಸ್ಪಷ್ಟ ವಿರೋಧಿಗಳಾಗಿರುವ ನಟ ಕಿಶೋರ್, ಬಿಜೆಪಿ, ಆರ್​ಎಸ್​ಎಸ್​ ಹಾಗೂ ಕೆಲವು ಹಿಂದೂಪರ ಸಂಘಟನೆಗಳ (Pro Hindu Activists) ನಡೆಗಳ ಬಗ್ಗೆ ಟೀಕೆಗಳನ್ನು ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ಹಿಜಾಬ್ ಕುರಿತು ರಾಜ್ಯದಲ್ಲಿ ನಡೆದ ಪ್ರತಿಭಟನೆ, ಗಲಾಟೆಗಳ ಕುರಿತು ವಿವರವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

”ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಬಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ ಶಿಕ್ಷಿತಳೂ ಸಶಕ್ತಳೂ ಆಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ ಅವಳಲ್ಲಿ ಭಯ ಹುಟ್ಟಿಸಿ, ಆಕೆ ತನ್ನ ಆತ್ಮರಕ್ಷಣೆಗಾಗಿ ತನ್ನ ಅಸ್ಮಿತೆಯ ಹುಡುಕಾಟದಲ್ಲಿ ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು. ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ ಹದಿನಾಲ್ಕು ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ, ಇಂಥಾ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ, ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ” ಎಂದಿದ್ದಾರೆ ಕಿಶೋರ್.

”ತನ್ನ ಮನೆ, ಸಂಬಂಧಿಕರು, ಮತ, ಸಂಪ್ರದಾಯವಾದ ಎಲ್ಲವನ್ನೂ ದಾಟಿಬಂದು ಕೊನೆಯ ಹಂತದಲ್ಲಿ ಶಿಕ್ಷಣ ವಂಚಿತಳಾಗುವುದಕ್ಕೆ ಕಾರಣ ಕೂಡ ಸ್ವಯಂ ಅವಳೇ ಆಗಿಬಿಟ್ಟರೆ? ದೇಶದ ಮುಖ್ಯವಾಹಿನಿಯಿಂದ ಮುಸ್ಲಿಂ ಮಹಿಳೆ ಮತ್ತು ಜನಾಂಗ ಎರಡೂ ಹೊರಗೆ ಅದೂ ತನ್ನ ಕಾಲ ಮೇಲೆ ತಾನೇ ಕೊಡಲಿ ಹಾಕಿಕೊಂಡು. ಇದಲ್ಲವೇ ಮಾಸ್ಟರ್ ಸ್ಟ್ರೊಕ್” ಎಂದಿದ್ದಾರೆ.

”ಜಂತರ್ ಮಂತರ್ ನಲ್ಲಿ ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ. ಆಗ ಹೊರಟದ್ದು. ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರಿಗಾದರೆ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ ಇಷ್ಟು ಸಾಲದೇ, ಶತಮಾನಗಳು ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು. ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ ಎಂದು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ ನಟ ಕಿಶೋರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!