AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ: ಕೊಡವ ಕೌನ್ಸಿಲ್ ಒತ್ತಾಯ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ವಿಪರೀತ ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಶಾಸಕ ರವಿಕುಮಾರ್ ಅವರಂತೂ ರಶ್ಮಿಕಾ ಮಂದಣ್ಣಗೆ ಸರಿಯಾಗಿ ಬುದ್ಧಿ ಕಲಿಸಬೇಕು ಎಂದು ಬೆದರಿಕೆ ಧ್ವನಿಯಲ್ಲಿ ಹೇಳಿದ್ದರು. ಇದೀಗ ರಶ್ಮಿಕಾ ಮಂದಣ್ಣ ಬೆಂಬಲಕ್ಕೆ ನಿಂತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ರಶ್ಮಿಕಾಗೆ ಹೆಚ್ಚುವರಿ ಭದ್ರತೆ ಒದಗಿಸಬೇಕು ಎಂದಿದೆ.

ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ: ಕೊಡವ ಕೌನ್ಸಿಲ್ ಒತ್ತಾಯ
Rashmika Mandanna
Follow us
ಮಂಜುನಾಥ ಸಿ.
|

Updated on:Mar 08, 2025 | 4:53 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗೆ ಬಹಳ ಟೀಕೆಗೆ ಗುರಿಯಾಗಿದ್ದಾರೆ. ಶಾಸಕ ರವಿಕುಮಾರ್ ಗಾಣಿಗ,ರಶ್ಮಿಕಾ ಮಂದಣ್ಣ ವಿರುದ್ಧ ಸತತ ಟೀಕೆಗಳನ್ನು ಮಾಡಿದ್ದು, ಕಾರ್ಯಕ್ರಮಕ್ಕೆ ಕರೆಯಲು ಹೋದರೆ ಕರ್ನಾಟಕ ಎಲ್ಲಿದೆ ಎಂದು ರಶ್ಮಿಕಾ ಕೇಳಿದ್ದರು. ಆಕೆಗೆ ಸರಿಯಾಗಿ ಬುದ್ಧಿ ಕಲಿಸಬೇಕಿದೆ ಎಂದಿದ್ದರು. ಮುಂಬೈನ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ ತಮ್ಮನ್ನು ತಾವು ಹೈದರಾಬಾದ್​ನವರು ಎಂದು ಪರಿಚಯಿಸಿಕೊಂಡಿದ್ದು ಸಹ ಸಖತ್ ಟೀಕೆಗೆ ಕಾರಣವಾಗಿತ್ತು. ರಶ್ಮಿಕಾ ವಿರುದ್ಧ ಶಾಸಕ ರವಿಕುಮಾರ್, ಕನ್ನಡ ರಕ್ಷಣಾ ಪಡೆಗಳು ಟೀಕೆ, ನಿಂದನೆ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೆ ಕೊಡವ ನ್ಯಾಷನಲ್ ಕೌನ್ಸಿಲ್​ನವರು ನಟಿಯ ಬೆಂಬಲಕ್ಕೆ ಬಂದಿದ್ದಾರೆ.

ಕೊಡಲ ನ್ಯಾಷನಲ್ ಕೌನ್ಸಿಲ್​ನ ಅಧ್ಯಕ್ಷ ಎನ್​ಯು ನಾಚಪ್ಪ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದ್ದಾರೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಸೇರಿದ ರಶ್ಮಿಕಾ ಮಂದಣ್ಣ ತಮ್ಮ ಕಠಿಣ ಶ್ರಮ ಮತ್ತು ಪರಿಶ್ರಮದಿಂದ ಇಂದು ಭಾರತೀಯ ಚಿತ್ರರಂಗದಲ್ಲಿ ಅಪ್ರತಿಮ ಸ್ಥಾನ ಸಂಪಾದನೆ ಮಾಡಿದ್ದಾರೆ. ರಶ್ಮಿಕಾರ ಪರಿಶ್ರಮ, ಪ್ರತಿಭೆಯನ್ನು ಅರಿಯದ ಕೆಲವರು ಅನವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ, ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿರುವುದು ಬೆದರಿಕೆಗೆ ಸಮ ಎಂದು ಅವರು ಆರೋಪ ಮಾಡಿದ್ದಾರೆ.

‘ರಶ್ಮಿಕಾ ಮಂದಣ್ಣ ಒಬ್ಬ ಶ್ರೇಷ್ಠ ನಟಿ, ಅವರ ಸ್ವಂತ ಆಯ್ಕೆ ಮತ್ತು ಸ್ವಾತಂತ್ರ್ಯಗಳನ್ನು ನಾವು ಗೌರವಿಸಬೇಕು. ಯಾರದ್ದೋ ಸೂಚನೆಯಂತೆ, ಯಾರದ್ದೋ ಮರ್ಜಿಯಂತೆ ನಡೆದುಕೊಳ್ಳಬೇಕು ಎಂದು ನಾವು ಒತ್ತಾಯಿಸಬಾರದು. ಒಂದೊಮ್ಮೆ ಹೀಗೆ ಮಾಡಿದರೆ ಅದನ್ನು ಕೊಡವ ಫೋಬಿಯಾ ಎಂದು ಗುರುತಿಸಬೇಕಾಗುತ್ತದೆ. ರಶ್ಮಿಕಾರ ಸಮುದಾಯವನ್ನು ಗುರಿ ಮಾಡಿಕೊಂಡು ಹೇರುತ್ತಿರುವ ಬೆದರಿಕೆ ಎನ್ನುವ ಅರ್ಥ ಬರುತ್ತದೆ’ ಎಂದಿದ್ದಾರೆ ನಟಿ.

ಇದನ್ನೂ ಓದಿ:ಟ್ರೋಲಿಂಗ್: ರಶ್ಮಿಕಾ ಮಂದಣ್ಣ ಪರ ನಿಂತ ನಟಿ ರಮ್ಯಾ

‘ಕಾವೇರಿ ನದಿಯನ್ನು ಬಹುವಾಗಿ ಪ್ರೀತಿಸುವ ಮಂಡ್ಯದ ಜನರನ್ನು ಪ್ರತಿನಿಧಿಸುವ ಶಾಸಕರು, ಕಾವೇರಿ ಮಾತೆಯ ಪ್ರೀತಿಯ ಪುತ್ರಿ ಮತ್ತು ಆ ಭಾಗದ ಹೆಮ್ಮೆಯ ಪುತ್ರಿ ರಶ್ಮಿಕಾ ಮಂದಣ್ಣ ಅವರನ್ನು ಟೀಕೆ ಮಾಡಿರುವುದು ವಿಪರ್ಯಾಸ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದಾಗಿ ಮತ್ತು ಜನರ ಆಶಯಗಳನ್ನು ಕಾಪಾಡುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ಶಾಸಕರಾಗಿರುವಂಥಹವರು ಟೀಕಾ ವೈಖರಿ ಆಕ್ಷೇಪಾರ್ಹ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರು ಚಿತ್ರರಂಗದವರ ನೆಟ್ಟು-ಬೋಲ್ಟು ಟೈಟ್ ಮಾಡುವುದು ಗೊತ್ತಿದೆ ಎಂದು ಹೇಳಿದ ಬೆನ್ನಲ್ಲೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದ ರವಿಕುಮಾರ್ ರಶ್ಮಿಕಾ ಮಂದಣ್ಣ ಅವರ ಮೇಲೆ ವಾಕ್ಪ್ರಹಾರ ಮಾಡಿದ್ದರು. ಕಾರ್ಯಕ್ರಮಕ್ಕೆ ಕರೆಯಲು ಹೋದಾಗ ಕರ್ನಾಟಕದ ಬಗ್ಗೆ ತುಚ್ಛವಾಗಿ ಮಾತನಾಡಿದ್ದರು ಎಂದು ಆರೋಪ ಮಾಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Sat, 8 March 25

ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ