AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮಲ್ ನಟನೆಯ ‘ಕೋಣ’ ಬಿಡುಗಡೆಗೆ ದಿನಾಂಕ ನಿಗದಿ: ನಿರ್ಮಾಪಕಿಯಾದ ತನಿಷಾ ಕುಪ್ಪಂಡ

Komal-Tanisha Kuppanda: ಬಿಗ್​​ಬಾಸ್ ಮೂಲಕ ಖ್ಯಾತಿ ಪಡೆದ ನಟಿ ತನಿಷಾ ಕುಪ್ಪಂಡ ನಾಯಕಿಯಾಗಿ ಹಾಗೂ ನಿರ್ಮಾಪಕಿಯೂ ಆಗಿರುವ ‘ಕೋಣ’ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ಅಂದಹಾಗೆ ‘ಕೋಣ’ ಸಿನಿಮಾನಲ್ಲಿ ಕೋಮಲ್ ನಾಯಕ. ಈ ಸಿನಿಮಾದ ಮೂವರು ನಿರ್ಮಾಪಕರಲ್ಲಿ ತನಿಷಾ ಕುಪ್ಪಂಡ ಸಹ ಒಬ್ಬರು.

ಕೋಮಲ್ ನಟನೆಯ ‘ಕೋಣ’ ಬಿಡುಗಡೆಗೆ ದಿನಾಂಕ ನಿಗದಿ: ನಿರ್ಮಾಪಕಿಯಾದ ತನಿಷಾ ಕುಪ್ಪಂಡ
Kona Kannada Movie
ಮಂಜುನಾಥ ಸಿ.
|

Updated on: Oct 19, 2025 | 7:34 PM

Share

ಬಿಗ್​​ಬಾಸ್​​ (Bigg Boss) ಸ್ಪರ್ಧಿಯಾಗಿ ಭಾರಿ ಜನಪ್ರಿಯತೆ ಗಳಿಸಿರುವ, ನಟಿ, ಉದ್ಯಮಿ ತನಿಷಾ ಕುಪ್ಪಂಡ ಇದೀಗ ಸಿನಿಮಾ ನಿರ್ಮಾಪಕಿ ಆಗಿದ್ದಾಶರೆ. ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಶಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ .ಎನ್ ಅವರುಗಳು ‘ಕೋಣ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಕೋಮಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕೋಣ’ ಸಿನಿಮಾ ಇದೇ ತಿಂಗಳ 31ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರಕ್ಕೆ ಇದೀಗ ಚಾಲನೆ ನೀಡಲಾಗಿದೆ.

ಇತ್ತೀಚೆಗಷ್ಟೆ ‘ಕೋಣ’ ಸಿನಿಮಾದ ಸುದ್ದಿಗೋಷ್ಠಿಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಕೋಮಲ್, ‘ಪ್ರಾಣಿಯಾಗಿ ಕೋಣ ಚಿಕ್ಕ ವಯಸ್ಸಿನಿಂದ ನನಗೆ ಕನೆಕ್ಟೆಡ್. ನಾನು ಸ್ಕೂಲ್ ನಲ್ಲಿ ಓದಬೇಕಾದರೆ‌ ನಮ್ಮ ಟೀಚರ್ ನನ್ನನ್ನು ಕೋಣ ಕೋಣ ಎನ್ನುತ್ತಿದ್ದರು. ನನಗೆ ಆಗ ಕೋಪ ಬರುತ್ತಿತ್ತು. ಈಗ ಕೋಣ ಪಿಕ್ಚರ್ಸ್ ಮಾಡುತ್ತಿರುವುದು ಖುಷಿಯಾಗಿದೆ. ಇಡೀ ತಂಡದ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಚಿತ್ರ ನನಗೆ ತೃಪ್ತಿ ಕೊಟ್ಟಿದೆ ಎಂದರು.

ನಟಿ, ಸಹ ನಿರ್ಮಾಪಕಿ ತನಿಶಾ ಕುಪ್ಪಂಡ ಮಾತನಾಡಿ, ‘ಕೋಣ’ ಸಿನಿಮಾದಲ್ಲಿ ನಾನು ಲಕ್ಷ್ಮಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಅಕ್ಟೋಬರ್ 31ರಂದು ನಮ್ಮ ಚಿತ್ರ ತೆರೆಗೆ ಬರ್ತಿದೆ. ಕೋಮಲ್ ಸರ್ ನಾರಾಯಣ ಎಂಬ ಪಾತ್ರ ಮಾಡಿದ್ದಾರೆ. ಅವರ ಪತ್ನಿಯಾಗಿ ನಾನು ನಟಿಸಿದ್ದೇನೆ. ಇಷ್ಟು ದಿನ ನೀವು ನೋಡದ ರೀತಿಯ ಪಾತ್ರದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಈ ಪಾತ್ರ ನೋಡಿ ಇವರು ಈ ರೀತಿ ನಟಿಸಬಹುದಾ ಎಂದು ಕೆಲವರು ಆಶ್ಚರ್ಯ ವ್ಯಕ್ತಪಡಿಸಬಹುದು. ಪ್ರೊಡ್ಯೂಸರ್ ಆಗಿ ನಾನು ಹೆಜ್ಜೆ ಮುಂದೆ ಇಡಲು ಕಾರಣ ರವಿ ಕಿರಣ್ ಸರ್ ಹಾಗೂ ಕಾರ್ತಿಕ್ ಸರ್ ಎಂದರು.

ಇದನ್ನೂ ಓದಿ:ಬ್ಯಾಂಗಲ್ ಬಂಗಾರಿ ಆದ ನಟಿ ತನಿಷಾ ಕುಪ್ಪಂಡ

ಕೋಮಲ್ ಕುಮಾರ್ ನಾಯಕನಾಗಿ, ತನಿಶಾ ಕುಪ್ಪಂಡ ನಾಯಕಿಯಾಗಿ ನಟಿಸಿದ್ದಾರೆ. ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ನಮ್ರತಾ ಗೌಡ, ವಿನಯ್ ಗೌಡ, ಮೋಹನ್ ಕೃಷ್ಣರಾಜ್ ಹೀಗೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಡಾರ್ಕ್ ಕಾಮೆಡಿ ಶೈಲಿಯಲ್ಲಿ ‘ಕೋಣ’ ಸಿನಿಮಾ ಮೂಡಿಬರಲಿದೆ. ಹರಿಕೃಷ್ಣ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ನಾಗೇಶ್ ಎನ್ ಸಹ ನಿರ್ದೇಶಕರಾಗಿ ಆಗಿ ಕೆಲಸ ಮಾಡಿದ್ದಾರೆ. ಒಂದು ನೈಜ ಘಟನೆಯನ್ನು ಆಧರಿಸಿ ಈ ಚಿತ್ರ ತಯಾರಾಗಿದೆ.

ಶಶಾಂಕ್ ಶೇಷಗಿರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ವೀನಸ್ ನಾಗರಾಜ್ಮೂರ್ತಿ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದು, ಉಮೇಶ್ ಆರ್ಬಿ ಅವರ ಸಂಕಲನ ಚಿತ್ರಕ್ಕಿದೆ, ಸಾಹಸ ನಿರ್ದೇಶಕರಾಗಿ ವಿನೋದ್‌ ಕುಮಾರ್‌, ಮುರುಗ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ಶಶಿಕುಮಾರ್ ಅವರ ಸಂಭಾಷಣೆ ಕೋಣ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!