AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಶೀರ್ಷಿಕೆಯ ಕಾರಣದಿಂದ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾ ಗಮನ ಸೆಳೆಯುತ್ತಿದೆ. ಕೋಮಲ್‌ ಕುಮಾರ್‌, ಮೇಘನಾ ರಾಜ್‌, ಅನುಷಾ ರೈ ಮಾತ್ರವಲ್ಲದೇ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಈ ಚಿತ್ರಕ್ಕೆ ಶೂಟಿಂಗ್ ಮುಕ್ತಾಯ ಆಗಿದೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ..

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್
Anusha Rai, Komal Kumar, Meghana Raj
ಮದನ್​ ಕುಮಾರ್​
|

Updated on: Mar 10, 2026 | 9:53 PM

Share

ಕೋಮಲ್‌ ಕುಮಾರ್‌ (Komal Kumar), ಮೇಘನಾ ರಾಜ್‌, ಅನುಷಾ ರೈ ಅವರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. 2 ಹಂತಗಳಲ್ಲಿ 75 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿಸಿಕೊಂಡಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ (Sangeetha Bar and Restaurant) ಚಿತ್ರತಂಡ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಆಗಿದೆ.

ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಚಿತ್ರದ ಬಹುತೇಕ ಶೂಟಿಂಗ್ ನಡೆಸಲಾಗಿದೆ. ಕುಂದಾಪುರದ ಅಂಪಾರಿನ ವಾಲ್ತೂರು ಗ್ರಾಮದಲ್ಲಿ ಏಳು ವಿಭಿನ್ನ ವಿನ್ಯಾಸದ ಬೃಹತ್‌ ಸೆಟ್‌ಗಳನ್ನು ನಿರ್ಮಿಸಲಾಗಿತ್ತು. ಅದರಲ್ಲಿ ಬಹುಭಾಗದ ಚಿತ್ರೀಕರಣವನ್ನು ಮಾಡಲಾಗಿದೆ. ಸುಮಾರು ಎರಡು ಎಕರೆ ಜಾಗದಲ್ಲಿ 7 ವೈವಿಧ್ಯಮಯ ಸೆಟ್‌ಗಳನ್ನು ಹಾಕಲಾಗಿತ್ತು.

ಈ ಸಿನಿಮಾಗೆ ಎರಡು ಟೈಟಲ್ ಇದೆ ಎಂದು ಚಿತ್ರತಂಡ ಹೇಳಿದೆ. ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಎಂಬುದು ಒಂದು ಶೀರ್ಷಿಕೆ. ‘ದೇವರ ತಾಣ’ ಎಂಬುದು ಇನ್ನೊಂದು ಟೈಟಲ್. ಚಿತ್ರದ ಮೊದಲಾರ್ಧ ಬಾರ್‌ನಲ್ಲಿ ಶುರುವಾಗಿ, ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗುತ್ತದೆ. ಆದರೆ ಸೆನ್ಸಾರ್‌ ನಿಯಮದ ಪ್ರಕಾರ ಒಂದು ಸಿನಿಮಾಕ್ಕೆ ಒಂದೇ ಟೈಟಲ್ ಇರಬೇಕು. ಹಾಗಾಗಿ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಶೀರ್ಷಿಕೆಯಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಹೇಳಿದ್ದಾರೆ.

ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ಕೋಮಲ್ ಕುಮಾರ್ ಅವರು ಡಬಲ್ ರೋಲ್ ಮಾಡಿದ್ದಾರೆ. ಒಂದು ಪಾತ್ರದಲ್ಲಿ ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಸಿನಿಮಾ ನಿರ್ದೇಶಕನ ಪಾತ್ರವನ್ನು ಕೋಮಲ್‌ ಮಾಡಿದ್ದಾರೆ. ಮೇಘನಾ ರಾಜ್‌ ರಾಣಿಯಾಗಿ ಮತ್ತು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಕೋಮಲ್‌ ಹೊಸ ಸಿನಿಮಾ ‘ತೆನಾಲಿ DA LLB’; ಮೊದಲ ಬಾರಿ ಲಾಯರ್ ಪಾತ್ರ

ಪ್ರಮೋದ್‌ ಶೆಟ್ಟಿ, ವಜ್ರಧೀರ್‌ ಜೈನ್‌, ಪ್ರಕಾಶ್‌ ತುಮ್ಮಿನಾಡ್‌, ಉತ್ಸವ್‌, ರಾಘು ರಾಮನಕೊಪ್ಪ, ಕಾರ್ತಿಕ್‌ ರಾವ್‌, ಸಿರಿಜಾ, ವರ್ಧನ್, ರಾಧಿಕ ರಾವ್ ದಿವ್ಯಶ್ರೀ, ಕರಣ್‌, ಅಕ್ಷತಾ, ಅರಸು, ಮಹೇಶ್, ಚಿತ್ರಕಲಾ, ನಾಗರಾಜ್ , ಉಮೇಶ್‌ ಕಿನ್ನಾಳ್‌, ರಾಧಾಕೃಷ್ಣ, ಮನೀಶ್‌ ಶೆಟ್ಟಿ, ಮಹಾಬಲೇಶ್ವರ ಭಟ್ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಸಹ ಒಂದು ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!