AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಮಲ್ ನಟನೆಯ ‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಮೋಷನ್ ಪೋಸ್ಟರ್ ಬಿಡುಗಡೆ

‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದಲ್ಲಿ ನಟ ಕೋಮಲ್‌ ಕುಮಾರ್ ಅವರು ದ್ವಿಪಾತ್ರ ಮಾಡಿದ್ದಾರೆ. ಕೋಮಲ್, ಮೇಘನಾ ರಾಜ್, ಅನುಷಾ ರೈ ಮಾತ್ರವಲ್ಲದೇ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಕೂಡ ಒಂದು ಪಾತ್ರ ಮಾಡಿದ್ದಾರೆ. ಈ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ.

ಕೋಮಲ್ ನಟನೆಯ ‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಮೋಷನ್ ಪೋಸ್ಟರ್ ಬಿಡುಗಡೆ
Sangeetha Bar And Restaurant Poster
ಮದನ್​ ಕುಮಾರ್​
|

Updated on: Sep 30, 2026 | 5:46 PM

Share

ಕೋಮಲ್‌ ಕುಮಾರ್‌, ಮೇಘನಾ ರಾಜ್‌, ಅನುಷಾ ರೈ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್ ಮುಗಿದಿದೆ. ಅಲ್ಲದೇ, ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಬಹುತೇಕ ಪೂರ್ಣಗೊಂಡಿವೆ. ಇದೀಗ ಚಿತ್ರತಂಡ ನಿಧಾನವಾಗಿ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಅದರ ಮೊದಲ ಹಂತವಾಗಿ ‘30 ಎಂ.ಎಲ್’ ಹೆಸರಿನಲ್ಲಿ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಮೋಷನ್ ಪೋಸ್ಟರ್​ನಲ್ಲಿ ಹೀರೋ ಕೋಮಲ್ ಅವರು ಆಸ್ಥಾನವೊಂದರ ವರ್ಣಚಿತ್ರ ಕಲಾವಿದನಾಗಿ, ಮೇಘನಾ ರಾಜ್ ಅವರು ರಾಣಿಯಾಗಿ ಕಾಣಿಸಿಕೊಂಡಿದ್ದಾರೆ.

‘ಸಂಗೀತ ಬಾರ್ ಆ್ಯಂಡ್ ರೆಸ್ಟೋರೆಂಟ್’ ಸಿನಿಮಾಗೆ ಸಂದೇಶ್‌ ಶೆಟ್ಟಿ ಆಜ್ರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. ಬಿಗ್ ಬಜೆಟ್​ನಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಎರಡು ಕಾಲಘಟ್ಟದ ಕಥೆಯನ್ನು ಹೇಳಲಾಗುತ್ತಿದೆ. ಎರಡು ಹಂತಗಳಲ್ಲಿ 75 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದ್ದು, ಕುಂದಾಪುರ, ಶಿವಮೊಗ್ಗ, ತೀರ್ಥಹಳ್ಳಿ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ.

ಕುಂದಾಪುರದ ಅಂಪಾರಿನ ವಾಲ್ತೂರು ಗ್ರಾಮದಲ್ಲಿ 7 ವಿಭಿನ್ನ ವಿನ್ಯಾಸದ ಬೃಹತ್‌ ಸೆಟ್‌ಗಳನ್ನು ನಿರ್ಮಿಸಿ, ಅದರಲ್ಲಿ ಸಿನಿಮಾದ ಬಹುಭಾಗ ಶೂಟಿಂಗ್ ಮಾಡಲಾಗಿರುವುದು ವಿಶೇಷ. ಶೇಕಡ 90ರಷ್ಟು ಚಿತ್ರೀಕರಣವನ್ನು ಈ ಸೆಟ್‌ಗಳಲ್ಲಿಯೇ ಚಿತ್ರೀಕರಿಸಲಾಗಿದೆ. ಈ ಸಿನಿಮಾದ ಹೆಸರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಅಂತಿದ್ದರೂ, ಇನ್ನೊಂದು ಟೈಟಲ್‌ ಕೂಡ ಇದೆ ಎಂದು ಚಿತ್ರತಂಡ ಹೇಳಿದೆ.

‘ಎರಡು ಶೀರ್ಷಿಕೆ ಇರಲು ಕಾರಣವೇ ಈ ಚಿತ್ರದ ಕಥಾಹಂದರ. ಸಿನಿಮಾದ ಮೊದಲಾರ್ಧ ಬಾರ್‌ನಲ್ಲಿ ನಡೆಯುತ್ತದೆ. ದ್ವಿತೀಯಾರ್ಧ ದೇವರ ತಾಣದಲ್ಲಿ ಶುರುವಾಗಿ ಅಲ್ಲೇ ಮುಗಿಯುತ್ತದೆ. ಹಾಗಾಗಿ ಚಿತ್ರದ ಮೊದಲಾರ್ಧ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಆಗಿದ್ದರೆ, ದ್ವಿತೀಯಾರ್ಧ ‘ದೇವರ ತಾಣ’ ಅಂತಿದೆ. ಈ ಎರಡೂ ಹೆಸರುಗಳು ಕೂಡ ನಮ್ಮ ಸಿನಿಮಾಗಿವೆ. ಆದರೆ ಸೆನ್ಸಾರ್‌ ನಿಯಮದಂತೆ ಒಂದು ಸಿನಿಮಾಕ್ಕೆ ಒಂದೇ ಹೆಸರು ಇಡಬೇಕಾಗಿರುವುದರಿಂದ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಹೆಸರಿನಲ್ಲಿ ಸಿನಿಮಾ ಬಿಡುಗಡೆ ಆಗಲಿದೆ’ ಎಂದು ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಹೇಳಿದ್ದಾರೆ.

ಇದನ್ನೂ ಓದಿ: ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ತುಮ್ಮಿನಾಡು, ಉತ್ಸವ್‌, ವಜ್ರಧೀರ್‌ ಜೈನ್‌, ಕಾರ್ತಿಕ್‌ ರಾವ್‌, ಸಿರಿಜಾ, ರಘು ರಾಮನಕೊಪ್ಪ, ವರ್ಧನ್, ಕರಣ್‌, ರಾಧಿಕಾ ರಾವ್ ಅಕ್ಷತಾ, ದಿವ್ಯಶ್ರೀ, ಅರಸು, ನಾಗರಾಜ್, ಮಹೇಶ್, ಚಿತ್ರಕಲಾ, ಉಮೇಶ್‌ ಕಿನ್ನಾಳ್‌, ಮನೀಶ್‌ ಶೆಟ್ಟಿ, ಪ್ರಶಾಂತ್ ಸಿದ್ದಿ, ಎಂ.ಕೆ. ಮಠ, ರಾಧಾಕೃಷ್ಣ, ಮಹಾಬಲೇಶ್ವರ ಭಟ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!