AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​; ಜೂನ್​ 14ರಂದು ರಿಲೀಸ್​

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್​ ಅವರು ‘ಕೋಟಿ’ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಿನಿಮಾದ ಮೊದಲ ಟಿಕೆಟ್​ ನೀಡಲಾಗಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್, ಮೋಕ್ಷಾ ಕುಶಾಲ್​ ಅವರು ಜೋಡಿ ಆಗಿದ್ದಾರೆ. ವಿಲನ್​ ಪಾತ್ರದಲ್ಲಿ ರಮೇಶ್​ ಇಂದಿರಾ ನಟಿಸಿದ್ದಾರೆ. ಪರಮ್​ ಅವರು ನಿರ್ದೇಶನ ಮಾಡಿದ್ದಾರೆ.

ಕಿಚ್ಚ ಸುದೀಪ್​ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್​; ಜೂನ್​ 14ರಂದು ರಿಲೀಸ್​
ಪರಮ್​, ಡಾಲಿ ಧನಂಜಯ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jun 07, 2024 | 9:38 PM

Share

ಹಲವು ಕಾರಣಗಳಿಂದಾಗಿ ‘ಕೋಟಿ’ ಸಿನಿಮಾ (Kotee Kannada Movie) ಸುದ್ದಿ ಆಗುತ್ತಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಸದ್ದು ಮಾಡಿದೆ. ಈ ಚಿತ್ರದಲ್ಲಿ ನಟ ಡಾಲಿ ಧನಂಜಯ (Daali Dhananjaya) ಅವರು ಕೋಟಿ ಎಂಬ ಸಾಮಾನ್ಯ ಡ್ರೈವರ್‌ ಪಾತ್ರವನ್ನು ಮಾಡಿದ್ದಾರೆ. ಯಾರಿಗೂ ಮೋಸ ಮಾಡದೇ ಮತ್ತು ನೋವು ನೀಡದೇ ತಾನು 1 ಕೋಟಿ ರೂಪಾಯಿ ಸಂಪಾದಿಸಬೇಕು ಎಂಬುದು ಈ ಸಿನಿಮಾದ ಕಥಾನಾಯಕನ ಗುರಿ. ಅವನು ಇದನ್ನೆಲ್ಲ ಮಾಡುವುದು ತನ್ನ ಫ್ಯಾಮಿಲಿಗಾಗಿ. ಆ ಹಾದಿಯಲ್ಲಿ ಅವನಿಗೆ ಏನೆಲ್ಲ ಕಷ್ಟಗಳು ಎದುರಾಗುತ್ತವೆ ಎಂಬುದನ್ನು ‘ಕೋಟಿ’ ಸಿನಿಮಾ ನೋಡಿ ತಿಳಿಯಬೇಕು. ಈ ಸಿನಿಮಾದ ಮೊದಲ ಟಿಕೆಟ್​ ಈಗ ಕಿಚ್ಚ ಸುದೀಪ್ (Kichcha Sudeep) ಅವರ ಕೈ ಸೇರಿದೆ.

ಜೂನ್ 14ರಂದು ‘ಕೋಟಿ’ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರತಂಡದವರು ಈ ಸಿನಿಮಾದ ಮೊದಲ ಟಿಕೆಟ್​ ಅನ್ನು ಕಿಚ್ಚ ಸುದೀಪ್​ ಅವರಿಗೆ ನೀಡಿದ್ದಾರೆ. ಅದ್ದೂರಿಯಾಗಿ ನಡೆದ ‘ಕೋಟಿ’ ಚಿತ್ರದ ವಿಶೇಷ ಪ್ರೀ-ರಿಲೀಸ್ ಟಿವಿ ಕಾರ್ಯಕ್ರಮಕ್ಕೆ ನಟ ಸುದೀಪ್ ಅವರು ಆಗಮಿಸಿದ್ದರು. ಒಂದು ಗಂಟೆಗೂ ಹೆಚ್ಚು ಸಮಯ ಅವರು ವೇದಿಕೆಯ ಮೇಲಿದ್ದು‌ ಅಭಿಮಾನಿಗಳನ್ನು ರಂಜಿಸಿದರು. ಈ ವೇದಿಕೆಯಲ್ಲಿ ‘ಕೋಟಿ’ ಚಿತ್ರತಂಡದವರು ಸುದೀಪ್​ಗೆ ಮೊದಲ ಟಿಕೆಟ್ ನೀಡಿ, ಅವರಿಂದ ಶುಭ ಹಾರೈಕೆ ಪಡೆದರು.

ಈ ಸಂದರ್ಭದಲ್ಲಿ ಸುದೀಪ್​ ಅವರು ‘ಕೋಟಿ’ ಸಿನಿಮಾದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಈ ಸಿನಿಮಾಗೆ ಪರಮ್​ ನಿರ್ದೇಶನ ಮಾಡಿದ್ದಾರೆ. ಪ್ರೇಕ್ಷಕರು ‘ಕೋಟಿ’ ಖಂಡಿತಾ ಇಷ್ಟ ಆಗಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ. ಈ ಸಿನಿಮಾದ ಪಾತ್ರವರ್ಗದಲ್ಲಿ ಡಾಲಿ ಧನಂಜಯ್​ ಜೊತೆ ಮೋಕ್ಷಾ ಕುಶಾಲ್‌, ರಮೇಶ್ ಇಂದಿರಾ, ರಂಗಾಯಣ ರಘು, ಸರ್ದಾರ್‌ ಸತ್ಯ, ತಾರಾ, ಪೃಥ್ವಿ ಶಾಮನೂರು, ಅಭಿಷೇಕ್ ಶ್ರೀಕಾಂತ್, ತನುಜಾ ವೆಂಕಟೇಶ್, ವಿಜಯ್ ಶೋಭರಾಜ್ ಪವೂರ್ ಸೇರಿದಂತೆ ಹಲವು ನಟಿಸಿದ್ದಾರೆ.

ಇದನ್ನೂ ಓದಿ: ‘ಕೋಟಿ’ ಸಿನಿಮಾ ಟ್ರೇಲರ್​ ಮೂಲಕ ಕೌತುಕ ಹೆಚ್ಚಿಸಿದ ಡಾಲಿ, ಪರಮ್​

ಹಲವು ವರ್ಷಗಳ ಕಾಲ ‘ಕಲರ್ಸ್​ ಕನ್ನಡ’ ವಾಹಿನಿಯನ್ನು ಮುನ್ನಡೆಸಿದ ಪರಮೇಶ್ವರ್​ ಗುಂಡ್ಕಲ್​ (ಪರಮ್​) ಅವರು ‘ಕೋಟಿ’ ಸಿನಿಮಾ ಮೂಲಕ ನಿರ್ದೇಶಕರಾಗಿದ್ದಾರೆ. ಈ ಸಿನಿಮಾವನ್ನು ‘ಜಿಯೋ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಲಾಗಿದೆ. ‘ಕೋಟಿ’ ಸಿನಿಮಾದ 5 ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ನೋಬಿನ್‌ ಪೌಲ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರತೀಕ್‌ ಶೆಟ್ಟಿ ಸಂಕಲನ, ಅರುಣ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್