AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ: ಕೋಟಿಗೊಬ್ಬ 3, ಭಜರಂಗಿ 2, ಸಲಗ ಸಿನಿಮಾಗಳ ಭವಿಷ್ಯವೇನು?

ಹೌಸ್​ಫುಲ್ ಪ್ರದರ್ಶನದ ಅವಕಾಶದೊಂದಿಗೆ ಸ್ಟಾರ್​ ಸಿನಿಮಾಗಳು ರಿಲೀಸ್​ ಆದರೆ ಚಿತ್ರೋದ್ಯಮದ ವಹಿವಾಟಿನಲ್ಲಿ ಚೇತರಿಕೆ ಆಗಲಿದೆ. ಚಿತ್ರಮಂದಿರಗಳನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ.

ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ: ಕೋಟಿಗೊಬ್ಬ 3, ಭಜರಂಗಿ 2, ಸಲಗ ಸಿನಿಮಾಗಳ ಭವಿಷ್ಯವೇನು?
ಸುಧಾಕರ್​ ಜೊತೆ ನಿರ್ಮಾಪಕರ ಮಾತುಕತೆ
TV9 Web
| Edited By: |

Updated on: Sep 21, 2021 | 11:51 AM

Share

ಕೊರೊನಾ ಪ್ರಕರಣಗಳು ಇಳಿಮುಖ ಆದ ಬಳಿಕ ಎಲ್ಲ ಉದ್ಯಮಗಳು ಸಹಜಸ್ಥಿತಿಗೆ ಮರಳುತ್ತಿವೆ. ಆದರೆ ಚಿತ್ರೋದ್ಯಮ ಮಾತ್ರ ಸಂಕಷ್ಟದಲ್ಲೇ ಇದೆ. ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸುವಂತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ಆರೋಗ್ಯ ಸಚಿವ ಸುಧಾಕರ್​ ಜೊತೆ ಕೆಲವು ನಿರ್ಮಾಪಕರು ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ಶೇ.100ರಷ್ಟು ಆಸನ ಭರ್ತಿಗೆ ಸರ್ಕಾರದಿಂದ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ.

ಸುದೀಪ್​ ನಟನೆಯ ‘ಕೋಟಿಗೊಬ್ಬ 3’, ದುನಿಯಾ ವಿಜಯ್​ ನಟನೆಯ ‘ಸಲಗ’, ಹಾಗೂ ಶಿವರಾಜ್​ಕುಮಾರ್​ ಅಭಿನಯದ ‘ಭಜರಂಗಿ 2’ ಸಿನಿಮಾಗಳು ಸದ್ಯ ಬಿಡುಗಡೆಗಾಗಿ ಕಾದಿವೆ. ಸರ್ಕಾರದಿಂದ ಶೇ.100ರಷ್ಟು ಆಕ್ಯುಪೆನ್ಸಿಗೆ ಅವಕಾಶ ಸಿಕ್ಕರೆ ಈ ಸಿನಿಮಾಗಳು ಸರದಿ ಪ್ರಕಾರ ತೆರೆಕಾಣಲಿವೆ. ಈ ಸಂಬಂಧ ‘ಭಜರಂಗಿ 2’ ಚಿತ್ರದ ನಿರ್ಮಾಪಕ ಜಯಣ್ಣ, ಸಲಗ ಸಿನಿಮಾ ನಿರ್ಮಾಪಕ ಕೆ.ಪಿ. ಶ್ರೀಕಾಂತ್​, ಕೋಟಿಗೊಬ್ಬ 3 ಚಿತ್ರಕ್ಕೆ ಬಂಡವಾಳ ಹೂಡಿರುವ ಸೂರಪ್ಪ ಬಾಬು ಸೇರಿದಂತೆ ಹಲವರ ಜೊತೆ ಸಚಿವ ಸುಧಾಕರ್​ ಸಭೆ ನಡೆಸಿದ್ದಾರೆ.

ಎರಡು ವಾರದ ಅಂತರದಲ್ಲಿ ಒಂದೊಂದು ಸ್ಟಾರ್​ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ಮಾಪಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅನುಮತಿ ಸಿಕ್ಕರೆ ಮೊದಲು ‘ಸಲಗ’ ಚಿತ್ರ ಬಿಡುಗಡೆ ಆಗಲಿದೆ. ಅ.1ರಂದು ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಬಳಿಕ ಅ.14ರಂದು ‘ಕೋಟಿಗೊಬ್ಬ 3’ ಹಾಗೂ ಅ.29ಕ್ಕೆ ‘ಭಜರಂಗಿ 2’ ಸಿನಿಮಾ ರಿಲೀಸ್​ ಆಗುವ ಸಾಧ್ಯತೆ ಇದೆ.

ಸದ್ಯ ಕೇವಲ ಶೇ.50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಇರುವುದರಿಂದ ಕೆಲವು ಸಣ್ಣ ಬಜೆಟ್​ನ ಸಿನಿಮಾಗಳು ತೆರೆಕಾಣುತ್ತಿವೆ. ದೊಡ್ಡ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿಲ್ಲ. ಪರಭಾಷೆಯ ಕೆಲವು ಬಿಗ್​ ಬಜೆಟ್​ ಚಿತ್ರಗಳು ತೆರೆಕಂಡು ಕೈ ಸುಟ್ಟುಕೊಂಡಿವೆ. ಹೌಸ್​ಫುಲ್​ ಪ್ರದರ್ಶನದ ಅವಕಾಶದೊಂದಿಗೆ ಸ್ಟಾರ್​ ಸಿನಿಮಾಗಳು ರಿಲೀಸ್​ ಆದರೆ ಚಿತ್ರೋದ್ಯಮದ ವಹಿವಾಟಿನಲ್ಲಿ ಚೇತರಿಕೆ ಆಗಲಿದೆ. ಚಿತ್ರಮಂದಿರಗಳನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ನಡೆಸುತ್ತಿವೆ. ಆದರೆ ಕೊರೊನಾ ಕಾರಣದಿಂದ ಚಿತ್ರಮಂದಿಗಳು ನಷ್ಟ ಅನುಭವಿಸುತ್ತಿರುವುದರಿಂದ ಹಲವರ ಹೊಟ್ಟೆಪಾಡು ಕಷ್ಟವಾಗಿದೆ. ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ಸಿಕ್ಕು, ಸ್ಟಾರ್​ ಸಿನಿಮಾಗಳು ಬಿಡುಗಡೆಯಾದರೆ ಪರಿಸ್ಥಿತಿ ಸುಧಾರಿಸಲಿದೆ.

ಇದನ್ನೂ ಓದಿ:

ಒಂದೇ ಒಂದು ಗುಡ್​ ನ್ಯೂಸ್​ಗಾಗಿ ಕಾಯುತ್ತಿದೆ ಚಿತ್ರರಂಗ; ಮತ್ತೆ ರಂಗೇರಲಿದೆ ಗಾಂಧಿನಗರ

Shivarajkumar: ‘ಭಜರಂಗಿ 2’ ರಿಲೀಸ್​ ಡೇಟ್​ ಮುಂದೂಡಿಕೆ; ಕೊರೊನಾ ಭೀತಿಯಿಂದ ಚಿತ್ರತಂಡದ ನಿರ್ಧಾರ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?