Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?

Kotigobba 3: ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರದ ಬಾಕ್ಸಾಫೀಸ್ ಲೆಕ್ಕ ಬಹಿರಂಗಗೊಂಡಿದೆ. ಒಂದು ದಿನ ತಡವಾಗಿ ಚಿತ್ರ ಬಿಡುಗಡೆಯಾದರೂ ಚಿತ್ರ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ಇದೀಗ ತೆಲುಗಿನಲ್ಲೂ ‘ಕೋಟಿಗೊಬ್ಬ 3’ ಬಿಡುಗಡೆಯಾಗಲಿದೆ.

Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?
‘ಕೋಟಿಗೊಬ್ಬ 3’ ಚಿತ್ರದಲ್ಲಿ ಸುದೀಪ್
Follow us
TV9 Web
| Updated By: shivaprasad.hs

Updated on: Oct 20, 2021 | 12:13 PM

ಕೆಲವು ವಿಘ್ನಗಳ ನಂತರ ‘ಕೋಟಿಗೊಬ್ಬ 3’ ಘೋಷಿಸಿದ ದಿನದಂದು ಬಿಡುಗಡೆಯಾಗಿರಲಿಲ್ಲ. ಆದರೆ ನಂತರ ಬಿಡುಗಡೆಯಾಗಿದ್ದ ಚಿತ್ರ ಬಾಕ್ಸಾಫೀಸ್​ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದರೂ, ಅಭಿಮಾನಿಗಳು ಚಿತ್ರವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಇದು ಚಿತ್ರದ ಕಲೆಕ್ಷನ್​ಗೆ ಬಹುದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಇದೀಗ ‘ಕೋಟಿಗೊಬ್ಬ 3’ ಚಿತ್ರದ ಬಾಕ್ಸಾಫೀಸ್ ಗಳಿಕೆಯ ಲೆಕ್ಕಾಚಾರ ಹೊರಬಿದ್ದಿದೆ. ನಟ ಕಿಚ್ಚ ಸುದೀಪ್ ಸ್ವತಃ ಟ್ವಿಟರ್​ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಆ ಪ್ರಕಾರ ಚಿತ್ರವು ಕೇವಲ ನಾಲ್ಕು ದಿನದಲ್ಲಿ ₹ 40.5 ಕೋಟಿಗೂ ಅಧಿಕ ಹಣವನ್ನು ಬಾಚಿಕೊಂಡಿದೆ.

ವೀಕೆಂಡ್ ಹಾಗೂ ಸಾಲು ಸಾಲು ರಜೆಗಳಿದ್ದ ಪರಿಣಾಮ ‘ಕೋಟಿಗೊಬ್ಬ 3’ ಚಿತ್ರದ ಕಲೆಕ್ಷನ್ ಮತ್ತಷ್ಟು ಏರಿಕೆಯಾಗಿದೆ. ಈ ವಾರ ಕೂಡ ಚಿತ್ರ ಉತ್ತಮವಾಗಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ಇನ್ನಷ್ಟು ಗಳಿಸೋದು ಖಂಡಿತಾ ಎನ್ನುತ್ತಿದ್ದಾರೆ ಬಾಕ್ಸಾಫೀಸ್ ಪಂಡಿತರು. ಚಿತ್ರದ ಯಶಸ್ಸು ಕಿಚ್ಚನ ಅಭಿಮಾನಿಗಳಿಗೆ ಅತೀವ ಸಂತಸ ಉಂಟುಮಾಡಿದ್ದು, ಎರಡು ವರ್ಷದ ನಂತರ ನೆಚ್ಚಿನ ನಟನನ್ನು ತೆರೆಯ ಮೇಲೆ ನೋಡುತ್ತಾ ಯಶಸ್ಸನ್ನು ಸಂಭ್ರಮಿಸುತ್ತಿದ್ದಾರೆ. ‘ಕೋಟಿಗೊಬ್ಬ 3’ ಮೊದಲ ದಿನವೇ ಅಂದಾಜು ₹ 12 ಕೋಟಿಯಷ್ಟು ಗಳಿಸಿತ್ತು ಎಂದು ವರದಿಗಳು ಹರಿದಾಡಿದ್ದವು. ಪ್ರಸ್ತುತ ಚಿತ್ರತಂಡದಿಂದ ಅಧಿಕೃತ ಲೆಕ್ಕ ಬಿಡುಗಡೆಯಾಗಿದ್ದು, 4 ದಿನಕ್ಕೆ ₹ 40.5 ಕೋಟಿ ಗಳಿಸುವುದರೊಂದಿಗೆ ಯಶಸ್ಸು ಕಂಡಿದೆ.

ಚಿತ್ರದ ಕಲೆಕ್ಷನ್ ಕುರಿತು ಕಿಚ್ಚ ಸುದೀಪ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಬಿಡುಗಡೆಯಾಯ್ತು ‘ಕೋಟಿಗೊಬ್ಬ 3’ ತೆಲುಗು ಟ್ರೈಲರ್: ‘ಕೋಟಿಗೊಬ್ಬ 3’ ಚಿತ್ರವು ತೆಲುಗಿನಲ್ಲೂ ತೆರೆಕಾಣುತ್ತಿದೆ. ‘ಕೆ3 ಕೋಟಿಕೊಕ್ಕಡು’ ಹೆಸರಿನಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಸುದೀಪ್​ಗೆ ತೆಲುಗಿನಲ್ಲೂ ಅಪಾರ ಅಭಿಮಾನಿಗಳಿರುವ ಕಾರಣ, ಚಿತ್ರ ಅಲ್ಲೂ ಯಶಸ್ವಿಯಾಗುವುದನ್ನು ನಿರೀಕ್ಷಿಸಲಾಗುತ್ತಿದೆ. ಪ್ರಸ್ತುತ ಟ್ರೈಲರ್ ಉತ್ತಮ ಪ್ರತಿಕ್ರಿಯೆಗಳನ್ನು ಪಡೆದುಕೊಳ್ಳುತ್ತಿದೆ.

‘ಕೆ3 ಕೋಟಿಕೊಕ್ಕಡು’ ಟ್ರೈಲರ್ ಇಲ್ಲಿದೆ:

‘ಕೋಟಿಗೊಬ್ಬ 3’ ಚಿತ್ರವನ್ನು ಶಿವ ಕಾರ್ತಿಕ್ ನಿರ್ದೇಶಿಸಿದ್ದು, ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಸುದೀಪ್ ಅವರೊಂದಿಗೆ ಮಡೋನ್ನಾ ಸೆಬಾಸ್ಟಿಯನ್, ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿಶಂಕರ್ ಮೊದಲಾದವರು ನಟಿಸಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

ವಾಲ್ಮೀಕಿ ಜಯಂತಿಯ ಶುಭಾಶಯ ಕೋರಿದ ಕಿಚ್ಚ:

ಇದನ್ನೂ ಓದಿ:

ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ