ಹೊಯ್ಸಳ ಕಲೆಕ್ಷನ್ ಬಗ್ಗೆ ನಿರ್ಮಾಪಕ ಟ್ವೀಟ್, ಸ್ಪಷ್ಟ ಸಂಖ್ಯೆ ಕೊಡಿ ಎಂದ ನೆಟ್ಟಿಗರು

ಹೊಯ್ಸಳ ಸಿನಿಮಾ ಹಿಟ್? ಅಥವಾ ಫ್ಲಾಪ್? ಸಿನಿಮಾದ ಒಟ್ಟು ಕಲೆಕ್ಷನ್ ಎಷ್ಟು? ಕಾರ್ತಿಕ್ ಗೌಡ ಟ್ವೀಟ್ ಬಳಿಕ ಸ್ಪಷ್ಟ ಸಂಖ್ಯೆ ಕೇಳಿದ ನೆಟ್ಟಿಗರು.

ಹೊಯ್ಸಳ ಕಲೆಕ್ಷನ್ ಬಗ್ಗೆ ನಿರ್ಮಾಪಕ ಟ್ವೀಟ್, ಸ್ಪಷ್ಟ ಸಂಖ್ಯೆ ಕೊಡಿ ಎಂದ ನೆಟ್ಟಿಗರು
ಹೊಯ್ಸಳ
Follow us
ಮಂಜುನಾಥ ಸಿ.
|

Updated on: Apr 09, 2023 | 8:19 PM

ಡಾಲಿ ಧನಂಜಯ್ (Daali Dhananjay) ನಟನೆಯ ಹೊಯ್ಸಳ (Hoysala) ಸಿನಿಮಾ ಬಿಡುಗಡೆ ಆಗಿ ಎರಡು ವಾರಗಳು ಕಳೆದಿವೆ. ಸಿನಿಮಾದ ಉತ್ತಮ ಪ್ರತಿಕ್ರಿಯೆಯೇ ವ್ಯಕ್ತವಾಗಿತ್ತು. ಆದರೆ ಸಿನಿಮಾದ ಕಲೆಕ್ಷನ್ (Collection) ಬಗ್ಗೆ ಮಿಶ್ರ ಅಭಿಪ್ರಾಯಗಳು ಹೊರಹೊಮ್ಮಿದ್ದವು. ಸಿನಿಮಾದ ಕಲೆಕ್ಷನ್ ಸೂಪರ್ ಎಂದು ಕೆಲವೆರೆಂದರೆ, ಆವರೇಜ್ ಎಂದು ಇನ್ನು ಕೆಲವರೆಂದರು. ಈ ನಡುವೆ ಸಿನಿಮಾದ ಕಲೆಕ್ಷನ್ ಬಗ್ಗೆ ನಿರ್ಮಾಪಕರಲ್ಲೊಬ್ಬರಾದ ಕಾರ್ತಿಕ್ ಗೌಡ (Karthik Gowda)

ಆಗಿದ್ದಿಷ್ಟು, ಹೊಯ್ಸಳ ಸಿನಿಮಾದ ಕಲೆಕ್ಷನ್ 2.60 ರಿಂದ 2.90 ಕೋಟಿ ಆಗಿದೆ ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. ಆ ಟ್ವೀಟ್​ಗೆ ಪ್ರತಿಕ್ರಿಯಿಸಿದ ನಿರ್ಮಾಪಕ ಕಾರ್ತಿಕ್ ಗೌಡ, ಅದಕ್ಕಿಂತಲೂ ಹೆಚ್ಚು ಕಲೆಕ್ಷನ್ ಆಗಿದೆ ಎಂದಿದ್ದರು. ಆದರೆ ಕಾರ್ತಿಕ್ ಗೌಡರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಕೆಲವರು ಹಾಗಿದ್ದರೆ ಸರಿಯಾದ ಕಲೆಕ್ಷನ್ ಮೊತ್ತ ಎಷ್ಟು ಎಂಬುದನ್ನು ನೀವೇ ತಿಳಿಸಿ ಎಂದು ಒತ್ತಾಯಿಸಿದ್ದರು. ಇದೀಗ ಸ್ವತಃ ಕೆಆರ್​ಜಿ ಸ್ಟುಡಿಯೋಸ್, ಹೊಯ್ಸಳ ಸಿನಿಮಾ ಹಿಟ್ ಆಗಿರುವ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಕಳೆದ ವಾರ ಬಿಡುಗಡೆಯಾದ ನಮ್ಮ ಸಂಸ್ಥೆ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಅಪಾರ ಮೆಚ್ಚುಗೆ ಸಿಕ್ಕಿದ್ದು, ಚಿತ್ರ ಎರಡನೆಯ ವಾರಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ಚುನಾವಣೆಗಳ ಕಾವು ಮತ್ತು ಐಪಿಎಲ್ ಜ್ವರದ ನಡುವೆಯೂ ಚಿತ್ರಕ್ಕೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಡಿ ಗೆಲ್ಲಿಸಿದ್ದಾರೆ. ಈ ಪ್ರಶಂಸೆಯಿಂದ ನಮ್ಮ ತಂಡಕ್ಕೆ ಸಾರ್ಥಕ್ಯದ ಭಾವ ಮೂಡಿದೆ. ನಮ್ಮ ಕೆ ಆರ್ ಜಿ ಸ್ಟುಡಿಯೋಸ್ ನ ಎರಡನೆಯ ಚಿತ್ರಕ್ಕೂ ಜನಮನ್ನಣೆ ಸಿಕ್ಕಿರುವುದು ನಮ್ಮೆಲ್ಲರ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮರ್ಯಾದೆ ಹತ್ಯೆ ಎಂಬ ಗಹನವಾದ ಸಮಸ್ಯೆಯ ಕುರಿತ ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ನಮಗೆ ಈ ತರಹದ ಇನ್ನಷ್ಟು ಸೂಕ್ಷ್ಮ ಸಂವೇದನೆಯ ಚಿತ್ರಗಳನ್ನು ನಿರ್ಮಿಸುವುದಕ್ಕೆ ಪ್ರೇರೇಪಿಸಿದೆ ಎಂದಿದ್ದಾರೆ.

ನಮ್ಮ ಎರಡೂ ಚಿತ್ರಗಳ ಯಶಸ್ಸಿನ ಬೆನ್ನಲ್ಲೆ ನಮ್ಮ ಸಂಸ್ಥೆಯ ಮೂರನೆಯ ಪ್ರಯತ್ನವಾದ ಉತ್ತರಕಾಂಡ ಚಿತ್ರವನ್ನು ಸದ್ಯದಲ್ಲೇ ಶುರು ಮಾಡಲಿದ್ದೇವೆ. ಉತ್ತರ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ನಡೆಯುವ ಈ ಕಥೆಯಲ್ಲೂ ಧನಂಜಯ ನಟಿಸುತ್ತಿದ್ದಾರೆ. ಇದಲ್ಲದೆ ಇನ್ನಷ್ಟು ಚಿತ್ರಗಳನ್ನು ನಮ್ಮ ಸಂಸ್ಥೆಯಡಿ ನಿರ್ಮಿಸುತ್ತಿದ್ದು, ಸದ್ಯದಲ್ಲೇ ಈ ಬಗ್ಗೆ ಘೋಷಣೆಯಾಗಲಿದೆ. ನಮ್ಮ ಈ ಗೆಲುವಿನಲ್ಲಿ ಸಿನಿಮಾ ಪ್ರೇಮಿಗಳು ಮತ್ತು ಮಾಧ್ಯಮದವರ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಮುಂದಿನ ಕನಸುಗಳಿಗೆ ಅವರೇ ಸ್ಫೂರ್ತಿ ಎಂದರೆ ತಪ್ಪಿಲ್ಲ. ಜತೆಗೆ ವಿಮರ್ಶಕರು, ಸೋಷಿಯಲ್ ಮೀಡಿಯಾದ ಇನ್ಫ್ಲೂಯೆನ್ಸ್ ಪ್ರೋತ್ಸಾಹ ಮತ್ತು ಸಿನಿಮಾ ಪ್ರೀತಿ ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಹೊಯ್ಸಳ’ ನಿರ್ಮಾಪಕರಿಂದ ಧನಂಜಯ್​ಗೆ ಕಾರು ಗಿಫ್ಟ್​; ಈ ಕಾರಿನ ಬೆಲೆ 1 ಕೋಟಿ ರೂಪಾಯಿ

ನಮಗೆ ಸಲಹೆ, ಸೂಚನೆ ಮತ್ತು ಅಪರಿಮಿತ ಪ್ರೀತಿ ತೋರಿಸುತ್ತಾ ಬಂದಿರುವ ಸಹೋದರರಾದ ವಿಜಯ್ ಕಿರಗಂದೂರು ಮತ್ತು ನನ್ನ ಎಲ್ಲ ಹಿತೈಷಿಗಳಿಗೂ ನಾನು ಚಿರಋಣಿ. ಇಂದು ಕೆ ಆರ್ ಜಿ ಸ್ಟುಡಿಯೋಸ್ ಮತ್ತು ಕೆ ಆರ್ ಜಿ ಕನೆಕ್ಟ್ಸ್ ಈ ಹಂತಕ್ಕೆ ಬೆಳೆಯುತ್ತಿರುವುದಕ್ಕೆ ನಮ್ಮ ತಂಡದ ಪ್ರೀತಿ ಮತ್ತು ಪರಿಶ್ರಮ ಸಹ ಕಾರಣ. ಮುಂದಿನ ದಿನಗಳಲ್ಲಿ ನಿಮ್ಮನ್ನು ಇನ್ನಷ್ಟು ಮನರಂಜಿಸುವುದಕ್ಕೆ ಉತ್ಸುಕರಾಗಿದ್ದೇವೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ