AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ

KRG Studios: ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಕಾರ್ತಿಕ್​ ಗೌಡ ತಿಳಿಸಿದ್ದಾರೆ.

Adipurush: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ನಡೆಯಲಿದೆ ‘ಆದಿಪುರುಷ್​’ ಚಿತ್ರದ ಅದ್ದೂರಿ ಪ್ರೀಮಿಯರ್​ ಶೋ
‘ಆದಿಪುರುಷ್​’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jun 13, 2023 | 8:06 AM

Share

ಜೂನ್​ 16ರಂದು ‘ಆದಿಪುರುಷ್​’ ಸಿನಿಮಾ (Adipurush Movie) ಬಹಳ ಗ್ರ್ಯಾಂಡ್​ ಆಗಿ ರಿಲೀಸ್​ ಆಗಲಿದೆ. ಈ ಸಿನಿಮಾ ಮೇಲೆ ಪ್ರಭಾಸ್​ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಕಾತುರರಾಗಿದ್ದಾರೆ. ಈ ಚಿತ್ರವನ್ನು ಕರ್ನಾಟಕದಲ್ಲಿ ವಿತರಣೆ ಮಾಡುತ್ತಿರುವ ಕೆಆರ್​ಜಿ ಸ್ಟುಡಿಯೋಸ್​ (KRG Studios) ಸಂಸ್ಥೆ ಕಡೆಯುಂದ ಈಗ ಒಂದು ಮಸ್ತ್​ ನ್ಯೂಸ್​ ಸಿಕ್ಕಿದೆ. ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗಾಗಿ ‘ಆದಿಪುರುಷ್​’ ಸಿನಿಮಾದ ಪ್ರೀಮಿಯರ್​ ಶೋ ನಡೆಸಲು ಕೆಆರ್​ಜಿ ಸ್ಟುಡಿಯೋಸ್​ ಸಂಸ್ಥೆ ತೀರ್ಮಾನಿಸಿದೆ. ಈ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ (Karthik Gowda) ಮಾಹಿತಿ ಹಂಚಿಕೊಂಡಿದ್ದಾರೆ. ‘ಜೂನ್​ 16ರಂದು ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಾಗಿ ಆದಿಪುರುಷ್​ ಸಿನಿಮಾದ ಕನ್ನಡ ವರ್ಷನ್​ನ ಪ್ರೀಮಿಯರ್​ ಶೋ ನಡೆಸುತ್ತೇವೆ. ಅದು ಬಹಳ ದೊಡ್ಡ ಇವೆಂಟ್​ ಆಗಿರಲಿದೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸೆಲೆಬ್ರಿಟಿ ಶೋ ನಡೆದರೆ ‘ಆದಿಪುರುಷ್​’ ಚಿತ್ರಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗುತ್ತದೆ. ‘ಕೆಜಿಎಫ್​ ಸ್ಟುಡಿಯೋಸ್​’ ಜೊತೆ ಅನೇಕ ನಟ-ನಟಿಯರು, ನಿರ್ದೇಶಕರು ನಂಟು ಹೊಂದಿದ್ದಾರೆ. ರಮ್ಯಾ, ಡಾಲಿ ಧನಂಜಯ್​, ಯಶ್​, ರಾಧಿಕಾ ಪಂಡಿತ್​, ಜಗ್ಗೇಶ್​, ಸಂತೋಷ್​ ಆನಂದ್​ರಾಮ್​, ರಿಷಬ್​ ಶೆಟ್ಟಿ, ಸಪ್ತಮಿ ಗೌಡ, ಯುವ ರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಪ್ರೀಮಿಯರ್ ಶೋನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಸಿಗಬೇಕಿದೆ.

ಈಗಾಗಲೇ ‘ಆದಿಪುರುಷ್​’ ಚಿತ್ರದ ಬುಕ್ಕಿಂಗ್​ ಓಪನ್​ ಆಗಿದೆ. ಮೊದಲ ದಿನ ಕರ್ನಾಟಕದಲ್ಲಿ ಹಾಗೂ ವಿಶ್ವಾದ್ಯಂತ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾಗೆ ಓಂ ರಾವತ್​ ನಿರ್ದೇಶನ ಮಾಡಿದ್ದಾರೆ. ಪ್ರಭಾಸ್​ ಮತ್ತು ಕೃತಿ ಸನೋನ್​ ಅವರು ರಾಮ-ಸೀತೆಯ ಪಾತ್ರ ಮಾಡಿದ್ದಾರೆ. ಸನ್ನಿ ಸಿಂಗ್​ ಅವರು ಲಕ್ಷ್ಮಣನಾಗಿ ಕಾಣಿಸಿಕೊಂಡಿದ್ದಾರೆ. ದೇವದತ್ತ ನಾಗೆ ಅವರು ಆಂಜನೇಯನ ಪಾತ್ರ ಮಾಡಿದ್ದಾರೆ. ಸೈಫ್​ ಅಲಿ ಖಾನ್ ಅವರಿಗೆ ರಾವಣನ ಪಾತ್ರ ನೀಡಲಾಗಿದೆ. ಈಗಾಗಲೇ ಟ್ರೇಲರ್​ ಗಮನ ಸೆಳೆದಿದೆ. ಸಿನಿಮಾದ ಬಗ್ಗೆ ಭಾರಿ ಹೈಪ್​ ಕ್ರಿಯೇಟ್​ ಆಗಿದೆ.

ಇದನ್ನೂ ಓದಿ: ಒಂದೇ ದಿನದಲ್ಲಿ 39,000 ಟಿಕೆಟ್​ಗಳ ಮಾರಾಟ: ಕೆಜಿಎಫ್ 2 ದಾಖಲೆ ಮುರಿಯಲಿದೆಯೇ ಆದಿಪುರುಷ್?

ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್​ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್​ ಕಪೂರ್​ ಅವರು ಬರೋಬ್ಬರಿ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ರಣಬೀರ್​ ಕಪೂರ್​ ರೀತಿಯೇ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್​ವಾಲ್ ಅವರು ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ‘ಆದಿಪುರುಷ್​’ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್​ ಮೀಸಲಿಡಲು ತೀರ್ಮಾನಿಸಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು