AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಫರೆಂಟ್​ ಟ್ರೇಲರ್​ನಿಂದ​ ಗಮನ ಸೆಳೆದ ‘ಬ್ಲಾಂಕ್​’ ಚಿತ್ರ; ಫೆ.25ಕ್ಕೆ ರಿಲೀಸ್​ ಆಗಲಿದೆ ಸೈಕಲಾಜಿಕಲ್​ ಥ್ರಿಲ್ಲರ್ ಸಿನಿಮಾ

ವಿಭಿನ್ನ ನಿರೂಪಣಾ ಶೈಲಿಯಲ್ಲಿ ಮೂಡಿಬಂದಿರುವ ‘ಬ್ಲಾಂಕ್​’ ಚಿತ್ರದಲ್ಲಿ ಸೈಕಲಾಜಿಕಲ್​ ಥ್ರಿಲ್ಲರ್​ ಕಥಾಹಂದರ ಇದೆ. ಫೆ.25ರಂದು ಈ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಡಿಫರೆಂಟ್​ ಟ್ರೇಲರ್​ನಿಂದ​ ಗಮನ ಸೆಳೆದ ‘ಬ್ಲಾಂಕ್​’ ಚಿತ್ರ; ಫೆ.25ಕ್ಕೆ ರಿಲೀಸ್​ ಆಗಲಿದೆ ಸೈಕಲಾಜಿಕಲ್​ ಥ್ರಿಲ್ಲರ್ ಸಿನಿಮಾ
‘ಬ್ಲಾಂಕ್’​ ಸಿನಿಮಾ ತಂಡ
TV9 Web
| Updated By: ಮದನ್​ ಕುಮಾರ್​|

Updated on: Feb 19, 2022 | 3:19 PM

Share

ಹೊಸ ವಿಧಾನಗಳ ಮೂಲಕ ಕಥೆ ಹೇಳಿದರೆ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ಆ ನಿಟ್ಟಿನಲ್ಲಿ ಹಲವು ನಿರ್ದೇಶಕರು ಹೊಸ ಪ್ರಯೋಗಳನ್ನು ಮಾಡುತ್ತಾರೆ. ಈ ವಾರ ಬಿಡುಗಡೆ ಆಗಲಿರುವ ‘ಬ್ಲಾಂಕ್​’ (Blank Kannada Movie) ಚಿತ್ರ ಕೂಡ ಇದೇ ಪ್ರಕಾರಕ್ಕೆ ಸೇರುತ್ತದೆ. ಈಗಾಗಲೇ ಈ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಈ ಟ್ರೇಲರ್​ ಕಂಡು ವಾವ್​ ಎಂದಿದ್ದಾರೆ. ಕೃಷಿ ತಾಪಂಡ (Krishi Thapanda), ಭರತ್ ಹಾಸನ್, ರಶ್ ಮಲ್ಲಿಕ್, ಸಚೀಂದ್ರ ಪ್ರಸಾದ್, ಪೂರ್ಣಚಂದ್ರ ಮೈಸೂರು (Poornachandra Mysore), ಪ್ರಶಾಂತ್ ಸಿದ್ದಿ ಮುಂತಾದವರು ‘ಬ್ಲಾಂಕ್’ ಚಿತ್ರದಲ್ಲಿ ನಟಿಸಿದ್ದಾರೆ. ಫೆ.25ರಂದು ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ಎಸ್​. ಜಯ್​ ನಿರ್ದೇಶನ ಮಾಡಿದ್ದಾರೆ. ಎನ್​.ಪಿ. ಮಂಜುನಾಥ ಪ್ರಸನ್ನ ಅವರು ‘ಬ್ಲಾಂಕ್’ ಚಿತ್ರವನ್ನು ನಿರ್ಮಿಸಿದ್ದಾರೆ. ಯೂಟ್ಯೂಬ್​ನಲ್ಲಿ ಲಕ್ಷಾಂತರ ಮಂದಿ ಈ ಟ್ರೇಲರ್​ ನೋಡಿದ್ದು ಪಾಸಿಟಿವ್​ ಆಗಿ ಕಮೆಂಟ್​ ಮಾಡಿದ್ದಾರೆ. ಆ ಮೂಲಕ ಪ್ರೇಕ್ಷಕರ ಮನದಲ್ಲಿ ನಿರೀಕ್ಷೆ ಮೂಡಿಸುವಲ್ಲಿ ‘ಬ್ಲಾಂಕ್​’ ಸಿನಿಮಾ ಯಶಸ್ವಿ ಆಗಿದೆ.

ನಿರೂಪಣೆಯ ಶೈಲಿಯಲ್ಲಿ ನಿರ್ದೇಶಕರು ಒಂದಷ್ಟು ಪ್ರಯೋಗ ಮಾಡಿದ್ದಾರೆ. ಹಾಗಾಗಿ ಮೊದಲ ಬಾರಿಗೆ ನೋಡುವ ಪ್ರೇಕ್ಷರಿಗೆ ಕೊಂಚ ಗೊಂದಲ ಆಗಬಹುದು ಎಂದು ಚಿತ್ರತಂಡದವರೇ ಹೇಳಿಕೊಂಡಿದ್ದಾರೆ. ‘ನಮ್ಮ ಸಿನಿಮಾವನ್ನು ಮೊದಲ ಸಲ ನೋಡದವರಿಗೆ ಸ್ವಲ್ಪ ಅರ್ಥವಾಗುವುದು ಕಷ್ಟ. ನಾಲ್ಕು ಮುಖ್ಯ ಪಾತ್ರಗಳ ಮೂಲಕ ಈ ಚಿತ್ರ ಸಾಗುತ್ತದೆ. ಇದು ಕನಸು ಹಾಗೂ ವಾಸ್ತವಗಳ ನಡುವಿನ ಪಯಣ ಎನ್ನಬಹುದು. ಒಟ್ಟಿನಲ್ಲಿ ಹೇಳಬೇಕೆಂದರೆ ‘ಲೂಸಿಯಾ’, ‘ಉಳಿದವರು ಕಂಡಂತೆ’ ರೀತಿಯ ಸಿನಿಮಾ ಎನ್ನಬಹುದು. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಸಿನಿಮಾ ಮಾಡಿದ್ದೇವೆ ಎಂಬ ಸಮಾಧಾನ ಇದೆ’ ಎನ್ನುತ್ತಾರೆ ನಿರ್ದೇಶಕ ಎಸ್. ಜಯ್.

‘ಬ್ಲಾಂಕ್​’ ಚಿತ್ರದಲ್ಲಿ ಸೈಕಲಾಜಿಕಲ್​ ಥ್ರಿಲ್ಲರ್​ ಕಥಾಹಂದರ ಇದೆ. ಈ ರೀತಿಯ ಉತ್ತಮ ಚಿತ್ರಕ್ಕೆ ಬಂಡವಾಳ ಹೂಡಿದ್ದಕ್ಕೆ ಖುಷಿ ಇದೆ ಎನ್ನುವ ನಿರ್ಮಾಪಕ ಮಂಜುನಾಥ ಪ್ರಸನ್ನ ಅವರು, ಈಗ ಜನರ ಪ್ರತಿಕ್ರಿಯೆಗಾಗಿ ಕಾದಿದ್ದಾರೆ. ‘ಬೇರೆ ಭಾಷೆಗಳಲ್ಲಿ ಮಾತ್ರ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳು ಬರುತ್ತದೆ, ನಮ್ಮಲ್ಲಿ ಬರುವುದಿಲ್ಲ ಅಂತ ಕೆಲವರು ಹೇಳುತ್ತಾರೆ. ಆದರೆ ಇತ್ತೀಚೆಗೆ ಕನ್ನಡದಲ್ಲೂ ಸಾಕಷ್ಟು ವಿಭಿನ್ನ ಕಥೆಯುಳ್ಳ ಚಿತ್ರಗಳು ಬರುತ್ತಿದೆ. ನಮ್ಮ ಚಿತ್ರದ ಬಗ್ಗೆ ಹೆಚ್ಚು ಹೊಗಳುವುದಿಲ್ಲ. ಆದರೆ ಈ ಸಿನಿಮಾ ಯಾರಿಗೂ ನಿರಾಸೆ ಮಾಡುವುದಿಲ್ಲ ಅಂತ ಹೇಳುತ್ತೇನೆ. ನಮ್ಮ ನಿರ್ದೇಶಕರ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ’ ಎಂದಿದ್ದಾರೆ ನಿರ್ಮಾಪಕ ಎನ್​.ಪಿ. ಮಂಜುನಾಥ ಪ್ರಸನ್ನ.

ಈವರೆಗೂ ಚಿತ್ರರಂಗದಲ್ಲಿ ಹಲವು ಬಗೆಯ ಪಾತ್ರಗಳನ್ನು ನಿಭಾಯಿಸಿರುವ ನಟಿ ಕೃಷಿ ತಾಪಂಡ ಅವರು ‘ಬ್ಲಾಂಕ್​’ ಚಿತ್ರದಲ್ಲಿ ಡಿಫರೆಂಟ್​ ಆದಂತಹ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ‘ಮೂರು ಶೇಡ್​ಗಳಲ್ಲಿ ನನ್ನ ಪಾತ್ರ ಸಾಗುತ್ತದೆ. ಇದೊಂದು ಅದ್ಭುತ ಚಿತ್ರ ಎನ್ನುವುದಕ್ಕಿಂತ ಪ್ರಯೋಗಾತ್ಮಕ ಸಿನಿಮಾ ಎನ್ನಬಹುದು. ಪ್ರತಿ ದೃಶ್ಯದಲ್ಲೂ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡುವ ಅನೇಕ ಅಂಶಗಳು ನಮ್ಮ ಚಿತ್ರದಲ್ಲಿದೆ’ ಎಂದು ಹೇಳುವ ಮೂಲಕ ನಟಿ ಕೃಷಿ ತಾಪಂಡ ಅವರು ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ.

(ಬ್ಲಾಂಕ್​ ಸಿನಿಮಾ ಟ್ರೇಲರ್​)

ಖ್ಯಾತ ನಟ ಪ್ರಶಾಂತ್​ ಸಿದ್ದಿ ಅವರು ಕೂಡ ‘ಬ್ಲಾಂಕ್​’ ಚಿತ್ರದಲ್ಲೊಂದು ಡಿಫರೆಂಟ್​ ಪಾತ್ರವನ್ನು ನಿಭಾಯಿಸಿದ್ದಾರೆ. ಶ್ರೀಶಾಸ್ತ ಸಂಗೀತ ನಿರ್ದೇಶನ ಮಾಡಿದ್ದು, ಜೆ.ಪಿ. ಮ್ಯಾನ್ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ:

ಪುನೀತ್​-ರಾಜೇಶ್​ ಕೊನೇ ಭೇಟಿಯ ಕ್ಷಣಗಳು; ಅಗಲಿದ ಸಾಧಕರಿಗೆ ಇದು ಚಿತ್ರನಮನ

3 ತಿಂಗಳ ರಾಯರ ಸೇವೆ ಬಳಿಕ ನಡೆದಿದ್ದು ಪವಾಡ; ಬದುಕಿನ ಅಚ್ಚರಿಯ ವಿಚಾರ ತೆರೆದಿಟ್ಟ ನಟ ಜಗ್ಗೇಶ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ