AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?

ಶ್ರೀನಿವಾಸರಾಜು ಅವರ ನಿರ್ದೇಶನದ, ಪ್ರಶಾಂತ್ ಜಿ. ರುದ್ರಪ್ಪ ಅವರು ನಿರ್ಮಾಣ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ವಿದೇಶದಲ್ಲೂ ಈ ಸಿನಿಮಾ ಅಬ್ಬರಿಸಿದೆ. ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? 25 ದಿನಗಳಲ್ಲಿ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಕೃಷ್ಣಂ ಪ್ರಣಯ ಸಖಿ’ 25 ದಿನಗಳಲ್ಲಿ ಮಾಡಿದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು?
ಮಾಳವಿಕಾ-ಗಣೇಶ್
ರಾಜೇಶ್ ದುಗ್ಗುಮನೆ
|

Updated on: Sep 10, 2024 | 12:44 PM

Share

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಯಿತು. ಈ ಸಿನಿಮಾ ಸ್ಯಾಂಡಲ್​ವುಡ್​ನಲ್ಲಿ ಹೊಸ ಅಲೆ ಸೃಷ್ಟಿಸಿದೆ. ಮಂಕಾಗಿದ್ದ ಕನ್ನಡ ಚಿತ್ರರಂಗಕ್ಕೆ ಈ ಸಿನಿಮಾ ದೊಡ್ಡ ಚೈತನ್ಯ ತುಂಬಿದೆ. ಅದೇ ರೀತಿ ಗಣೇಶ್​ಗೂ ದೊಡ್ಡ ಗೆಲುವು ನೀಡಿದೆ. ಈ ಸಿನಿಮಾ ಇತ್ತೀಚೆಗೆ 25ನೇ ದಿನ ಪೂರೈಸಿದೆ. ಆ ಪ್ರಯುಕ್ತ ತಂಡ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಹಾಗಾದರೆ, ಈವರೆಗೆ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

ಕಳೆದ ಭಾನುವಾರ (ಸೆಪ್ಟೆಂಬರ್ 8) ಸಿನಿಮಾ ಬರೋಬ್ಬರಿ 56 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಇದು ಸಿನಿಮಾಗೆ ನಾಲ್ಕನೇ ಭಾನುವಾರ. ಆದಾಗ್ಯೂ ಸಿನಿಮಾ ಒಳ್ಳೆಯ ಟ್ರ್ಯಾಕ್​ ರೆಕಾರ್ಡ್ ಮೂಲಕ ಸಾಗುತ್ತಿದೆ. ಇದು ಸಿನಿಮಾ ತಂಡದ ಖುಷಿ ಹೆಚ್ಚಿಸಿದೆ. ಹಾಗಾದರೆ, ಚಿತ್ರದ ಒಟ್ಟಾರೆ ಗಳಿಕೆ ಎಷ್ಟು? 25 ದಿನಗಳಲ್ಲಿ ಸಿನಿಮಾ ಗಳಿಕೆ ಮಾಡಿದ್ದು ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ವಿವರ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಭಾನುವಾರ 25ನೇ ದಿನಕ್ಕೆ ಕಾಲಿಟ್ಟಿದೆ. ಈ ಸಿನಿಮಾ ಭಾನುವಾರವೂ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 18.87 ಕೋಟಿ ರೂಪಾಯಿ (ಗ್ರಾಸ್ ಕಲೆಕ್ಷನ್) ಎಂದು sacnilk ವರದಿ ಮಾಡಿದೆ. ಈ ಮೂಲಕ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರಕ್ಕೆ ಥಿಯೇಟರ್​ನ ಜೊತೆಗೆ ಟಿವಿ ಹಕ್ಕು, ಒಟಿಟಿ ಹಕ್ಕಿನಿಂದಲೂ ಒಳ್ಳೆಯ ಆದಾಯ ಹರಿದು ಬಂದಿದೆ. ಈ ಚಿತ್ರದಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ‘ಕೃಷ್ಣಂ ಪ್ರಣಯ ಸಖಿ’ ವಿಶೇಷ ಪ್ರದರ್ಶನ; ಗಣೇಶ್ ಸಿನಿಮಾ ಸೂಪರ್ ಹಿಟ್

ಬುಕ್ ಮೈ ಶೋನಲ್ಲೂ ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. ಈ ಸಿನಿಮಾಗೆ 16 ಸಾವಿರ ಮಂದಿ ರೇಟಿಂಗ್ ನೀಡಿದ್ದು, 8.6 ರೇಟಿಂಗ್ ದೊರೆತಿದೆ. ಈ ಚಿತ್ರದಲ್ಲಿ ಗಣೇಶ್, ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್