Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಯೆಟ್ನಾಂನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ತಂಡ

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಅನುಭವ ಇರುವ ನಿರ್ದೇಶಕ ಶ್ರೀನಿವಾಸರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್ ಜೊತೆ ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮೊದಲಾದವರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು.

ವಿಯೆಟ್ನಾಂನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ತಂಡ
ಗಣೇಶ್ ಟೀಂ
Follow us
ರಾಜೇಶ್ ದುಗ್ಗುಮನೆ
|

Updated on:Mar 19, 2024 | 8:56 AM

ನಟ ಗಣೇಶ್ (Ganesh) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ನಟನೆಯ ಹಲವು ಸಿನಿಮಾಗಳು ರಿಲೀಸ್ ಆಗಿ ಯಶಸ್ಸು ಕಂಡಿವೆ. ಈಗ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ತಂಡ ವಿಯೆಟ್ನಾಂಗೆ ತೆರಳಿತ್ತು. ಈಗ ಶೂಟಿಂಗ್ ಪೂರ್ಣಗೊಂಡಿದೆ. ಅಲ್ಲಿ ಚಿತ್ರದ ಎರಡು ಸಾಂಗ್ ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ.  ಇದರೊಂದಿಗೆ ಸಿನಿಮಾದ ಶೂಟಿಂಗ್ ಪೂರ್ತಿಗೊಂಡಿದೆ. ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಆಗಲಿದೆ.

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಅನುಭವ ಇರುವ ನಿರ್ದೇಶಕ ಶ್ರೀನಿವಾಸರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದಲ್ಲಿ ಗಣೇಶ್ ಜೊತೆ ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮೊದಲಾದವರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ರೀ-ರೆಕಾರ್ಡಿಂಗ್ ಕೆಲಸಗಳು ನಡೆಯುತ್ತಿದ್ದು ಶೀಘ್ರವೇ ಸಿನಿಮಾ ರಿಲೀಸ್ ಆಗಲಿದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಐದು ಸಾಂಗ್​ಗಳು ಇರಲಿವೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕೆ ಇದೆ. ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಫ್ಯಾಮಿಲಿ ಡ್ರಾಮಾ ಇದೆ. ಈ ಚಿತ್ರವನ್ನು ತ್ರಿಶೂಲ್ ಎಂಟರ್​​ಟೇನ್​ಮೆಂಟ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೂರನೇ ಸಿನಿಮಾ.

ಇದನ್ನೂ ಓದಿ: ‘ಅನುಬಂಧ’ ವೇದಿಕೆ ಮೇಲೆ ‘ಮುಂಗಾರು ಮಳೆ’ ಮರು ಸೃಷ್ಟಿ; ಗಣೇಶ್ ಡೈಲಾಗ್​ಗೆ ಅಭಿಮಾನಿಗಳು ಖುಷ್

ಗಣೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ಗಣೇಶ್ ನಟನೆಯ 41ನೇ ಸಿನಿಮಾ. ಗಣೇಶ್​ಗೆ ನಾಯಕಿಯಾಗಿ ಮಾಳವಿಕಾ ನಾಯರ್ ಕಾಣಿಸಿಕೊಂಡಿದ್ದಾರೆ. ಶರಣ್ಯಾ ಶೆಟ್ಟಿ, ಶ್ರೀನಿವಾಸಮೂರ್ತಿ, ರಂಗಾಯಣ ರಘು, ಸಾಧುಕೋಕಿಲ, ಶ್ರುತಿ, ಶಶಿಕುಮಾರ್, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ಮಾನಸಿ ಸುಧೀರ್, ರಘುರಾಮ್, ಗಿರಿ ಶಿವಣ್ಣ, ಅಂಬುಜ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:52 am, Tue, 19 March 24

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ