ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್

‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್​ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಕ್ರಿಕೆಟ್​ ಕುರಿತ ಕಥೆ ಇದೆ. ಹಾಗಾಗಿ ಕ್ರಿಕೆಟರ್​ ಕೃಷ್ಣಪ್ಪ ಗೌತಮ್​ ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ. ‘ಪಿಆರ್​ಕೆ ಆಡಿಯೋ’ ಮೂಲಕ ಟ್ರೇಲರ್​ ರಿಲೀಸ್​ ಆಗಿದೆ. ‘ಸಹಾರಾ’ ಸಿನಿಮಾಗೆ ಮಂಜೇಶ್ ಭಗವತ್ ಅವರು ನಿರ್ದೇಶನ, ಎಂ. ಗೌಡ ಅವರು ನಿರ್ಮಾಣ ಮಾಡಿದ್ದಾರೆ.

ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್
‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ
Follow us
ಮದನ್​ ಕುಮಾರ್​
|

Updated on: May 26, 2024 | 3:00 PM

ಈಗ ಎಲ್ಲೆಲ್ಲೂ ಕ್ರಿಕೆಟ್​ನದ್ದೇ ಹವಾ. ಅದಕ್ಕೆ ಕಾರಣ ಐಪಿಎಲ್​. ಸಿನಿಮಾರಂಗದಲ್ಲೂ ಕ್ರಿಕೆಟ್​ (Cricket) ಕಥೆಗಳು ಬರುತ್ತಿವೆ. ಕನ್ನಡದಲ್ಲಿ ಮಹಿಳಾ ಕ್ರಿಕೆಟರ್​ ಜೀವನಾಧಾರಿತ ‘ಸಹಾರಾ’ ಸಿನಿಮಾ (Sahara Movie) ಟ್ರೇಲರ್ ಬಿಡುಗಡೆ ಆಗಿದೆ. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಈ ಸಿನಿಮಾದ ಟ್ರೇಲರ್ ಅನಾವರಣ ಮಾಡಲಾಯಿತು. ಕ್ರಿಕೆಟರ್​ ಕೃಷ್ಣಪ್ಪ ಗೌತಮ್ (Krishnappa Gowtham) ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ‘ಟ್ರೇಲರ್ ರಿಯಲಿಸ್ಟಿಕ್ ಆಗಿ ಮೂಡಿಬಂದಿದೆ. ಈ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ವಿಶ್​ ಮಾಡಿದರು.

‘ಸಹಾರಾ’ ಸಿನಿಮಾದಲ್ಲಿ ನಟಿ ಸಾರಿಕಾ ರಾವ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಅವರು ಮಾತನಾಡಿ, ‘ಇದು ಸ್ಫೂರ್ತಿದಾಯಕ ಕಹಾನಿ. ಜವಾಬ್ದಾರಿಯಿಂದ ನಾನು ನನ್ನ ಪಾತ್ರವನ್ನು ಮಾಡಿದ್ದೇನೆ. ಮಹಿಳಾ ಪ್ರಧಾನ ಸಿನಿಮಾವನ್ನು ನಿರ್ದೇಶಕರಾದ ಮಂಜೇಶ್ ಅವರು ಕನ್ನಡ ಚಿತ್ರರಂಗಕ್ಕೆ ನೀಡುತ್ತಿದ್ದಾರೆ. ಕಿಚ್ಚ ಸುದೀಪ್, ಸಿಂಪಲ್ ಸುನಿ, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರೆಲ್ಲ ಸೇರಿ ಹೊಸಬರಿಗೆ ಬೆಂಬಲ ನೀಡಿದ್ದಾರೆ’ ಎಂದರು.

ವಿಶೇಷ ಏನೆಂದರೆ, ಇದು ಕನ್ನಡದಲ್ಲಿ ಕ್ರಿಕೆಟ್ ಕಥೆ ಇರುವ ಮೊದಲ ಮಹಿಳಾ ಪ್ರಧಾನ ಸಿನಿಮಾ. ಮಂಡ್ಯ ಹುಡುಗಿಯು ಕ್ರಿಕೆಟರ್ ಆದ ಕಥೆಯನ್ನು ಈ ಸಿನಿಮಾ ಕಟ್ಟಿಕೊಡಲಾಗಿದೆ. ಮಂಡ್ಯ ಯುವತಿಯ ಪಾತ್ರದಲ್ಲಿ ಸಾರಿಕಾ ರಾವ್ ನಟಿಸಿದ್ದಾರೆ. ಆ ಪಾತ್ರಕ್ಕಾಗಿ ಅವರು ರಣಜಿ ಆಟಗಾರ ಕೆ.ಬಿ. ಪವನ್ ಬಳಿ ತರಬೇತಿ ಪಡೆದುಕೊಂಡಿದ್ದಾರೆ. ನಂತರ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ.

‘ಸಹಾರಾ’ ಸಿನಿಮಾ ಟ್ರೇಲರ್​:

ಮಂಜೇಶ್ ಭಗವತ್ ಅವರು ‘ಸಹಾರಾ’ ಸಿನಿಮಾಗೆ ನಿರ್ದೇಶ ಮಾಡಿದ್ದಾರೆ. ಕಳೆದ 8 ವರ್ಷಗಳಿಂದ ಸ್ಯಾಂಡಲ್​ವುಡ್​ನಲ್ಲಿ ಅವರು ಸಹನಿರ್ದೇಶಕರಾಗಿ ಅನುಭವ ಪಡೆದಿದ್ದಾರೆ. ಈಗ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ‘ಸಹಾರಾ’ ಚಿತ್ರಕ್ಕೆ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅವರೇ ಬರೆದಿದ್ದಾರೆ. ‘ಮಾ ಕ್ರಿಯೆಷನ್ಸ್’ ಸಿನಿಮಾ ನಿರ್ಮಾಣ ಆಗಿದೆ. ಎಂ. ಗೌಡ ಅವರು ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಜಾನ್ವಿ ಕಪೂರ್​ ಬೆನ್ನಿನಲ್ಲಿ ಕ್ರಿಕೆಟ್​ ಬಾಲ್​ಗಳ ಸಾಲು; ಇದೆಂಥಾ ಡ್ರೆಸ್​?

ಈ ಸಿನಿಮಾಗೆ ಕಿಚ್ಚ ಸುದೀಪ್ ಅವರು ನಿರೂಪಣೆ ಮಾಡಿದ್ದಾರೆ. ಆಂಥೋನಿ ರುತ್ ವಿನ್ಸೆಂಟ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ನೃತ್ಯ ನಿರ್ದೇಶನ ಈ ಸಿನಿಮಾಗಿದೆ. ‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್​ ಜೊತೆ ಮಂಜುನಾಥ ಹೆಗಡೆ, ಅಂಕುಶ್ ರಜತ್, ಕುರಿ ಸುನಿಲ್, ರಂಜನ್, ಪ್ರಕಾಶ್ ಶೆಟ್ಟಿ, ಮಂಜುಳಾ ರೆಡ್ಡಿ ಮುಂತಾದ ಕಲಾವಿದರು ನಟಿಸಿದ್ದಾರೆ. ‘ಪಿ.ಆರ್.ಕೆ’ ಸಂಸ್ಥೆಯು ಈ ಸಿನಿಮಾದ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಡಿಜಿಟಲ್​ನಲ್ಲಿ ಟ್ರೇಲರ್​ ಅನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಬಿಡುಗಡೆ ಮಾಡಿದ್ದಾರೆ. ‘ಕೆಆರ್.ಜಿ.’ ಸಂಸ್ಥೆಯು ಈ ಸಿನಿಮಾದ ವಿತರಣೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?