ಚಿರಂಜೀವಿ ಸರ್ಜಾ ಹುಟ್ಟುಹಬ್ಬಕ್ಕೆ ಬರ್ತಿದೆ ಕ್ಷತ್ರಿಯ ಚಿತ್ರದ ಟೀಸರ್

ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ.ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರಕ್ಕೆ ಈಗಾಗಲೇ ಶೇ. 90ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಈ ತಿಂಗಳ ಅಂತ್ಯದಲ್ಲಿ ಕೊನೆಯ ಹಂತದ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ನಟ ಚಿರು ಸರ್ಜಾ ಅವರು ಈ […]

ಚಿರಂಜೀವಿ ಸರ್ಜಾ ಹುಟ್ಟುಹಬ್ಬಕ್ಕೆ ಬರ್ತಿದೆ ಕ್ಷತ್ರಿಯ ಚಿತ್ರದ ಟೀಸರ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Oct 12, 2020 | 2:51 PM

ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ.ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರಕ್ಕೆ ಈಗಾಗಲೇ ಶೇ. 90ರಷ್ಟು ಭಾಗದ ಚಿತ್ರೀಕರಣ ಮುಗಿದಿದ್ದು, ಈ ತಿಂಗಳ ಅಂತ್ಯದಲ್ಲಿ ಕೊನೆಯ ಹಂತದ ಚಿತ್ರೀಕರಣ ಸಹ ಪ್ರಾರಂಭವಾಗಲಿದೆ.

ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ನಟ ಚಿರು ಸರ್ಜಾ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದರು. ಚಿತ್ರದ ಮೊದಲಾರ್ಧದಲ್ಲಿ ಸೆಂಟಿಮೆಂಟ್ ಕಥಾವಸ್ತುವಿದ್ದರೆ, ದ್ವಿತೀಯಾರ್ಧ ಪಕ್ಕಾ ಕಮರ್ಷಿಯಲ್ ಅಂಶಗಳನ್ನೊಳಗೊಂಡಿದೆ. ಕನ್ನಡ ಚಿತ್ರರಂಗದ ಸಾಕಷ್ಟು ನಿರ್ದೇಶಕರ ಜೊತೆ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನಿಲ್ ಮಂಡ್ಯ ಕ್ಷತ್ರಿಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಪಿ.ವಾಸು, ದಿನಕರ ತೂಗುದೀಪ, ತರುಣ್ ಸುಧೀರ್, ಮುಂಗಾರು ಮಳೆ ಕೃಷ್ಣ ಮತ್ತು ಸಂತೋಷ್ ಅನಂದರಾಮ್ ಅವರ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಮತ್ತು ರಾಜಕುಮಾರ ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿದ್ದ ಅನಿಲ್ ಮಂಡ್ಯ ಕಳೆದ ಎರಡು ದಶಕಗಳಲ್ಲಿ ಸಾಕಷ್ಟು ನಟರ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವವರು.

ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ಚಿರಂಜೀವಿ ಸರ್ಜಾ, ಸಂಜನಾ ಆನಂದ್, ಸುಧಾರಾಣಿ, ದೇವರಾಜ್, ಅಬ್ರಾರ್ ಜಾಹೂರ್‍ಧಾರ್, ಶ್ರೀನಾಥ್, ಸಾಧು ಕೋಕಿಲ, ಅಚ್ಯುತ್‍ಕುಮಾರ್, ವಿಶಾಲ್ ಹೆಗ್ಡೆ, ಮೋಹನ್, ಅಶ್ವಿನಿಗೌಡ, ಭಜರಂಗಿ ಚೇತನ್, ಹೊನ್ನವಳ್ಳಿ ಕೃಷ್ಣ, ಗಿರೀಶ್, ಶಾಲಿನಿ, ಸ್ವಪ್ನರಾಜಾ, ಆರತಿ ಕುಲಕರ್ಣಿ, ವಾಣಿಶ್ರೀ, ಸುಂದರ್, ನದಾಫ್, ಶ್ರೀಕಾಂತ್, ಆನಂದ್, ಮೈಸೂರು ಬಾಲ, ಮುಂತಾದವರು ನಟಿಸಿದ್ದಾರೆ.

ಈ ಚಿತ್ರಕ್ಕೆ ಭರ್ಜರಿ ಚೇತನ್ ಕುಮಾರ್ ಅವರು ಸಂಭಾಷಣೆ ರಚಿಸುತ್ತಿದ್ದಾರೆ. ರವಿ ವಿ. ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. ಧರ್ಮವಿಶ್ ಅವರ ಸಂಗೀತ ಸಂಯೋಜನೆಯ 5 ಹಾಡುಗಳು ಈ ಚಿತ್ರದಲ್ಲಿವೆ. ಕೆ.ರವಿವರ್ಮ ಅವರ ಸಾಹಸ ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಜನ್ ಅವರ ಎಫೆಕ್ಟ್ ಈ ಸಿನಿಮಾದಲ್ಲಿದೆ.

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ