AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾಗೆ ಸಾಹಸ ಸನ್ನಿವೇಶದ ಕ್ಲೈಮ್ಯಾಕ್ಸ್ ಶೂಟಿಂಗ್

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರಕ್ಕೆ ಮಡೆನೂರ್ ಮನು ಹೀರೋ ಆಗಿದ್ದಾರೆ. ನಾಯಕಿ ಮೌನಾ ಅವರಿಗೆ ಇದು ಮೊದಲ ಸಿನಿಮಾ. ಶರತ್ ಲೋಹಿತಾಶ್ವ, ಡ್ರ್ಯಾಗನ್‌ ಮಂಜು, ಸೀನ,‌ ಕರಿಸುಬ್ಬು, ಹರೀಶ್​ ರಾಜ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ. ಯೋಗರಾಜ್ ಭಟ್ ಮತ್ತು ಇಸ್ಲಾಮುದ್ದೀನ್ ಕಥೆ ಬರೆದಿದ್ದಾರೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಹಾಡುಗಳನ್ನು ಬರೆದಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾಗೆ ಸಾಹಸ ಸನ್ನಿವೇಶದ ಕ್ಲೈಮ್ಯಾಕ್ಸ್ ಶೂಟಿಂಗ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡ
ಮದನ್​ ಕುಮಾರ್​
|

Updated on: Nov 27, 2024 | 10:14 PM

Share

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರ್ ಮನು ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ‘ಯೋಗರಾಜ್ ಸಿನಿಮಾಸ್’ ಅರ್ಪಿಸುವ ಈ ಚಿತ್ರವನ್ನು ‘ಪರ್ಲ್ ಸಿನಿ ಕ್ರಿಯೇಷನ್ಸ್’ ಮೂಲಕ ಸಂತೋಷ್ ಕುಮಾರ್ ಎ.ಕೆ. ಹಾಗೂ ವಿದ್ಯಾ ಅವರು ನಿರ್ಮಾಣ ಮಾಡುತ್ತಿದ್ದಾರೆ. ಕೆ. ರಾಮನಾರಾಯಣ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆದಿದೆ. ಸಾಹಸ ಸನ್ನಿವೇಶದ ಶೂಟಿಂಗ್ ಮಾಡಲಾಗಿದೆ. ರಾಮನಗರದ ಸಮೀಪ ಅದ್ದೂರಿ ಚಿತ್ರೀಕರಣ ನಡೆದಿದೆ.

ವಿನೋದ್ ಮಾಸ್ಟರ್ ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದ ಕ್ಲೈಮ್ಯಾಕ್ಸ್​ನ ದೃಶ್ಯಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಮೌನಾ ಗುಡ್ಡಮನೆ ಅವರು ನಾಯಕಿಯಾಗಿ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಡ್ರ್ಯಾಗನ್ ಮಂಜು, ಕರಿ ಸುಬ್ಬು, ಸೀನ ಮುಂತಾದವರು ಈ ಸಾಹಸ ಸನ್ನಿವೇಶದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಶೂಟಿಂಗ್ ನಡುವೆ ಸುದ್ದಿಗೋಷ್ಟಿ ನಡೆಸಿ ಸಿನಿಮಾ ಬಗ್ಗೆ ಚಿತ್ರತಂಡದವರು ಮಾತನಾಡಿದರು.

‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ವಿಭಿನ್ನ ಕಥಾಹಂದರ ಇದೆ ಎಂದು ನಿರ್ದೇಶಕ ರಾಮ್ ನಾರಾಯಣ್ ಹೇಳಿದ್ದಾರೆ. ‘ಯೋಗರಾಜ್ ಭಟ್ ಅವರ ಮಾರ್ಗದರ್ಶನದಲ್ಲಿ ಸಂತೋಷ್ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸಾಹಸ ಸನ್ನಿವೇಶದ ಶೂಟಿಂಗ್​ ಅದ್ದೂರಿಯಾಗಿ ಮಾಡಿದ್ದೇವೆ. ಸೋನಾಲ್ ಮೊಂತೆರೋ ಅವರು ವಿಶೇಷವಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಹುತೇಕ ಶೂಟಿಂಗ್ ಮುಗಿದಿದೆ. 2 ಸಾಂಗ್​ ಚಿತ್ರೀಕರಣ ಬಾಕಿಯಿದೆ’ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಡಿಸೆಂಬರ್​ 25ಕ್ಕೆ ಬಿಡುಗಡೆ ಆಗಲಿದೆ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ

ನಿರ್ಮಾಪಕ ಸಂತೋಷ್ ಅವರು ಮಾತನಾಡಿ, ‘ಯೋಗರಾಜ್ ಭಟ್ ಅವರು ನಮ್ಮ ಸಿನಿಮಾಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಎಲ್ಲ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ಅಂದುಕೊಂಡಂತೆ ನಡೆದರೆ ಫೆಬ್ರವರಿಯಲ್ಲಿ ಸಿನಿಮಾ ರಿಲೀಸ್ ಮಾಡುತ್ತೇವೆ’ ಎಂದು ಹೇಳಿದರು. ‘ಸಾಕಷ್ಟು ತಯಾರಿ ಮಾಡಿಕೊಂಡು ಈ ಸಿನಿಮಾದಲ್ಲಿ ನಟಿಸಿದ್ದೇನೆ. ಶರತ್ ಲೋಹಿತಾಶ್ವ, ತಬಲ ನಾಣಿ ಅವರಂತಹ ಹಿರಿಯ ಕಲಾವಿದರ ಜತೆ ನಟಿಸಿ‌ ಅನೇಕ ವಿಚಾರ ಕಲಿತೆದ್ದೇನೆ’ ಎಂದಿದ್ದಾರೆ ಹೀರೋ ಮಡೆನೂರ್ ಮನು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More