
“ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಯೋಗರಾಜ್ ಭಟ್ಟರು (Ypgaraj Bhatt) ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಕೆ.ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಹಾಡೊಂದನ್ನು ಇತ್ತೀಚೆಗಷ್ಟೆ ಶತಾಯುಷಿ ಸಾಲುಮರದ ತಿಮ್ಮಕ್ಕ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಅಧಿಕೃತವಾಗಿ ಘೋಷಣೆ ಮಾಡಲಾಯ್ತು.
ರಾಜಕುಮಾರ್ ಅವರ ಜನ್ಮದಿನದಂದು ಹಾಡು ಬಿಡುಗಡೆ ಆಗಿದ್ದು, ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಯೋಗರಾಜ್ ಭಟ್, ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಅವರದ್ದೇ ಸಿನಿಮಾದ ಸೂಪರ್ ಹಿಟ್ ಗೀತೆಯನ್ನೇ ಶೀರ್ಷಿಕೆಯಾಗಿ ಹೊಂದಿರುವ ಈ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಆಗಿರುವುದು ವಿಶೇಷ. ನಾನು ಸಹ ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರು ಏನು ಹೇಳಿಕೊಟ್ಟರೊ ಅದನ್ನು ಮಾಡಿದ್ದೇನೆ. ಇತ್ತೀಚೆಗೆ ಈ ಚಿತ್ರವನ್ನು ನೋಡಿದಾಗ ಎಲ್ಲಾ ಕಲಾವಿದರ ಅಭಿನಯ ಮನಸ್ಸಿಗೆ ಹತ್ತಿರವಾಯಿತು. ತಂತ್ರಜ್ಞರ ಕೆಲಸವೂ ಬಹಳ ಇಷ್ಟವಾಯಿತು. ರಾಮ್ ನಾರಾಯಣ್ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಇನ್ನೂ, ಗ್ರಾಮೀಣ ಪ್ರತಿಭೆ ಮಡೆನೂರ್ ಮನು. ಆತನನ್ನು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿರುವ ನಿರ್ಮಾಪಕರಾದ ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ಎಂದರು.
“ಕುಲದಲ್ಲಿ ಕೀಳ್ಯಾವುದೋ” ಸರ್ವಕಾಲಿಕ ಜನಪ್ರಿಯ ಗೀತೆ. ಇಂತಹ ಜನಪ್ರಿಯ ಗೀತೆಯ ಸಾಲನಿಟ್ಟುಕೊಂಡು ಹಾಡು ಬರೆಯುವುದು ಅಷ್ಟು ಸುಲಭದ ಮಾತಲ್ಲ. ಈ ಹಾಡನ್ನು ಯೋಗರಾಜ್ ಭಟ್ ಅವರ ಹತ್ತಿರ ಬರೆಸುವುದು ಅಂತ ನಿರ್ಧಾರವಾಯಿತು. ಆದರೆ ಅವರು “ಮನದ ಕಡಲು” ಚಿತ್ರದ ಬಿಡುಗಡೆಯ ಬ್ಯುಸಿಯಲ್ಲಿದ್ದರು. ಹಾಗಾಗಿ ಅವರೆ ನನಗೆ ಈ ಹಾಡನ್ನು ಬರೆಯುವಂತೆ ಹೇಳಿದರು. ಆನಂತರ ನಾನೇ ಈ ಹಾಡು ಬರೆದೆ. ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೂ ಈ ಹಾಡು ಇಷ್ಟವಾಯಿತು. ಚೇತನ್ ಅವರು ಹಾಡಿರುವ ಈ ಶೀರ್ಷಿಕೆಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಮಾಪಕರು ಯಾವುದೇ ಕೊರತೆ ಬಾರೆದ ಹಾಗೆ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೇ 23 ರಂದು ನಿಮ್ಮ ಮುಂದೆ ಬರೆಲಿದೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದರು.
ಇದನ್ನೂ ಓದಿ:ಯೋಗರಾಜ್ ಭಟ್ಟರ ಈ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳುವಂತಿಲ್ಲ
ಚಿತ್ರ ಆರಂಭದಿಂದಲೂ ನಮಗೆ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರ ಮೇ 23 ತೆರೆಗೆ ಬರಲಿದೆ. ನಿಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಂತೋಷ್ ಕುಮಾರ್. ನಾಯಕ ಮಡೆನೂರ್ ಮನು ಮಾತನಾಡಿ, ನಿರ್ದೇಶಕ ರಾಮ್ ನಾರಾಯಣ್ ಅನ್ನು ಕೊಂಡಾಡಿದರು. ಚಿತ್ರ ಮೇ 23 ಬಿಡುಗಡೆಯಾಗಲಿದೆ. ಎಲ್ಲರೂ ಬಂದು ಆಶೀರ್ವದಿಸಿ ಎದು ಮನವಿ ಮಾಡಿದರು. ಹಿರಿಯ ನಟರಾದ ಉಮೇಶ್, ಕರಿಸುಬ್ಬು, ಡ್ರ್ಯಾಗನ್ ಮಂಜು, ಸೀನ, ಸಂಭಾಷಣೆ ಬರೆದಿರುವ ವಿಜಯಾನಂದ್ ಹಾಗೂ ಹಾಡಿನಲ್ಲಿ ಅಭಿನಯಿಸಿರುವ ನಟಿ ಯಶಸ್ವಿನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ