Richiee Movie Song: ‘ರಿಚ್ಚಿ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಬಂದ ಕುನಾಲ್​ ಗಾಂಜಾವಾಲ

ಕರುನಾಡಿನಲ್ಲಿ ಕುನಾಲ್​ ಗಾಂಜಾವಾಲ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅವರೆಲ್ಲರಿಗಾಗಿ ‘ರಿಚ್ಚಿ’ ಸಿನಿಮಾದಿಂದ ಹೊಸ ಹಾಡು ರಿಲೀಸ್​ ಆಗಿದೆ.

Richiee Movie Song: ‘ರಿಚ್ಚಿ’ ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲು ಬಂದ ಕುನಾಲ್​ ಗಾಂಜಾವಾಲ
ಕುನಾಲ್ ಗಾಂಜಾವಾಲಾ, ರಿಚ್ಚಿ
Follow us
ಮದನ್​ ಕುಮಾರ್​
|

Updated on: May 18, 2023 | 8:02 PM

ಹೊಸ ಪ್ರತಿಭೆ ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ ‘ರಿಚ್ಚಿ’ (Richiee) ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ (Kunal Ganjawala) ಧ್ವನಿ ನೀಡಿದ್ದಾರೆ. ಅವರು ಹಾಡಿರುವ ‘ಕಳೆದು ಹೋಗಿರುವೆ..’ ಎಂಬ ಹಾಡು ಇತ್ತೀಚೆಗೆ ಬಿಡುಗಡೆ ಆಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು. ‘ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ ರಿಚ್ಚಿ ಅವರಿಗಾಗಿ ಬಂದಿದ್ದೇನೆ. ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ಸಾಂಗ್. ಇಂದು ಮೆಲೋಡಿ ಸಾಂಗ್ ಬಿಡುಗಡೆಯಾಗಿದೆ’ ಎಂದರು ಕುನಾಲ್​ ಗಾಂಜಾವಾಲ.

‘ಅಗಸ್ತ್ಯ ಅವರ ಸಂಗೀತ ಸಂಯೋಜನೆ ಚೆನ್ನಾಗಿದೆ. ಚಿನ್ನಿ ಪ್ರಕಾಶ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೌಸ್ ಪೀರ್ ಸಾಹಿತ್ಯ ಬರೆದಿದ್ದಾರೆ. ‘ರಿಚ್ಚಿ’ ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಕುನಾಲ್ ಗಾಂಜಾವಾಲ ಹಾರೈಸಿದರು. ಈ ವೇಳೆ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

‘2005ನೇ ಇಸವಿಯಲ್ಲಿ ‘ಆಕಾಶ್’ ಚಿತ್ರದ ಹಾಡು ಹಾಡಲು ಬಂದಾಗ ಡಾ. ರಾಜ್​ಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಕೈಗೊಂದು ಮುತ್ತು ಕೊಟ್ಟಿದ್ದರು. ಅದು ನನ್ನ ಜೀವನದಲ್ಲಿ ಮರೆಯಲಾಗದ ಘಟನೆ’ ಎಂದ ಕುನಾಲ್ ಗಾಂಜಾವಾಲ ಅವರು ಪುನೀತ್ ರಾಜ್​ಕುಮಾರ್ ಅವರೊಟ್ಟಿಗಿನ ಒಡನಾಟವನ್ನು ನೆನಪಿಸಿಕೊಂಡರು.

ಇದನ್ನೂ ಓದಿ: Richiee Kannada Movie: ಚಂದನವನದಲ್ಲಿ ಮತ್ತೆ ಕೇಳಿಸ್ತಿದೆ ‘ರಿಚ್ಚಿ’ ಹೆಸರು; ಕುನಾಲ್​ ಗಾಂಜಾವಾಲಾ ಹಾಡಿದ ಗೀತೆಯಿಂದ ಹೆಚ್ಚಲಿದೆ ಸದ್ದು

‘ರಿಚ್ಚಿ’ ಸಿನಿಮಾದ ಬಗ್ಗೆ ನಾಯಕ ರಿಚ್ಚಿ ಮಾತನಾಡಿದ್ದಾರೆ. ‘ಇದು  ಒಂದು ಪ್ರೇಮಕಥೆಯ ಚಿತ್ರ. ನಾನು ಚಿಕ್ಕಂದಿನಿಂದಲೇ ಕುನಾಲ್ ಗಾಂಜಾವಾಲ ಅವರ ಅಭಿಮಾನಿ. ನನ್ನ ಚಿತ್ರಕ್ಕೆ ಅವರು ಹಾಡಬೇಕೆಂಬುದು ನನ್ನ ಆಸೆ. ಅದು ಈಡೇರಿದೆ. ಎರಡು ಹಾಡುಗಳನ್ನು ಅವರು ಹಾಡಿದ್ದಾರೆ. ಒಂದು ಈಗ ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರ ಬರಲಿದೆ. ಆಗಸ್ಟ್ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ ರಿಚ್ಚಿ. ನಟಿಸುವುದರ ಜೊತೆ ನಿರ್ಮಾಪಕನಾಗಿ ಹಾಗೂ ನಿರ್ದೇಶಕನಾಗಿಯೂ ಅವರು ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

‘ರಿಚ್ಚಿ’ ಸಿನಿಮಾದ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಅವರು ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕ ರಾಕೇಶ್ ರಾವ್, ಪ್ರಕೃತಿ ಬನವಾಸಿ, ನಿರ್ಮಾಪಕರಾದ ಅಣಜಿ ನಾಗರಾಜ್, ವೆಂಕಟೇಶ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ