AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಬರ್ತ್​​ಡೇಗೆ ವಿಶ್ ತಿಳಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’; ಹೇಗಿದೆ ನೋಡಿ ಪೋಸ್ಟ್

Toxic Movie: ‘ಟಾಕ್ಸಿಕ್’ ಚಿತ್ರಕ್ಕೆ ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ದೊಡ್ಡ ಬಜೆಟ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ಸಿನಿಮಾದಲ್ಲಿ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ.

ಯಶ್​ ಬರ್ತ್​​ಡೇಗೆ ವಿಶ್ ತಿಳಿಸಿದ ‘ಕೆವಿಎನ್ ಪ್ರೊಡಕ್ಷನ್ಸ್’; ಹೇಗಿದೆ ನೋಡಿ ಪೋಸ್ಟ್
ಯಶ್
ರಾಜೇಶ್ ದುಗ್ಗುಮನೆ
|

Updated on:Jan 08, 2024 | 10:50 AM

Share

ಯಶ್ ಅವರಿಗೆ ಇಂದು (ಜನವರಿ 8) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಹಾಕಿ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಟ್ವಿಟರ್​ನಲ್ಲಿ YashBoss ಹ್ಯಾಶ್​ಟ್ಯಾಗ್ ವೈರಲ್ ಆಗಿದೆ. ‘ಟಾಕ್ಸಿಕ್’ ಸಿನಿಮಾ (Toxic Movie) ನಿರ್ಮಾಣ ಸಂಸ್ಥೆ ‘ಕೆವಿಎನ್​ ಪ್ರೊಡಕ್ಷನ್ಸ್’ ಕೂಡ ಯಶ್ ಅವರಿಗೆ ತಮ್ಮದೇ ಸ್ಟೈಲ್​ನಲ್ಲಿ ವಿಶ್ ಮಾಡಿದೆ. ಇಂದು ಸಿನಿಮಾ ಬಗ್ಗೆ ಹೊಸ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರಕ್ಕೆ ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದ್ದು ದೊಡ್ಡ ಬಜೆಟ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ಸಿನಿಮಾದಲ್ಲಿ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಯಶ್ ಬರ್ತ್​ಡೇ ದಿನ ಸಿನಿಮಾದ ಪೋಸ್ಟರ್ ರಿಲೀಸ್ ಆಗಬಹುದೇ ಎಂದು ಫ್ಯಾನ್ಸ್ ಕಾದಿದ್ದಾರೆ.

‘ತೆರೆಮೇಲೆ ಹಾಗೂ ನಮ್ಮ ಹೃದಯವನ್ನು ರಾಕ್ ಮಾಡಿದ ಯಶ್​ಗೆ ಜನ್ಮದಿನದ ಶುಭಾಶಯ’ ಎಂದು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಬರೆದುಕೊಂಡಿದೆ. ಈ ಮೊದಲು ರಿಲೀಸ್ ಮಾಡಿದ್ದ ಮೋಷನ್ ಪೋಸ್ಟರ್​ನ ಮತ್ತೆ ರಿಲೀಸ್ ಮಾಡಲಾಗಿದೆ. ಇದಕ್ಕೆ ಫ್ಯಾನ್ಸ್ ಬೇಸರಗೊಂಡಿದ್ದಾರೆ. ‘ಫಸ್ಟ್ ಲುಕ್ ಅಪ್​ಡೇಟ್ ನೀಡಿ’ ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಇನ್ನೂ ಕೆಲವರು ‘ವರ್ಕಿಂಗ್ ಸ್ಟಿಲ್ ಆದರೂ ರಿಲೀಸ್ ಮಾಡಲಿ’ ಎಂದು ಕೋರಿದ್ದಾರೆ.

ಇದನ್ನೂ ಓದಿ: ಗದಗ: ನಟ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಯುವಕರು ಸಾವು

‘ಯಶ್ 19’ ಚಿತ್ರಕ್ಕಾಗಿ ಯಶ್ ಅವರು ಯಾರ ಜೊತೆ ಕೈ ಜೋಡಿಸುತ್ತಾರೆ ಎನ್ನುವ ಕುತೂಹಲ ಮೂಡಿತ್ತು. ಇದಕ್ಕೆ ಕಳೆದ ಡಿಸೆಂಬರ್​ನಲ್ಲಿ ಉತ್ತರ ಸಿಕ್ಕಿತ್ತು. ಗೀತು ಮೋಹನ್​ದಾಸ್​ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Mon, 8 January 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ