
ಯಶ್ ಅವರಿಗೆ ಇಂದು (ಜನವರಿ 8) ಬರ್ತ್ಡೇ ಸಂಭ್ರಮ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಾಮನ್ ಡಿಪಿ ಹಾಕಿ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಟ್ವಿಟರ್ನಲ್ಲಿ YashBoss ಹ್ಯಾಶ್ಟ್ಯಾಗ್ ವೈರಲ್ ಆಗಿದೆ. ‘ಟಾಕ್ಸಿಕ್’ ಸಿನಿಮಾ (Toxic Movie) ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಕೂಡ ಯಶ್ ಅವರಿಗೆ ತಮ್ಮದೇ ಸ್ಟೈಲ್ನಲ್ಲಿ ವಿಶ್ ಮಾಡಿದೆ. ಇಂದು ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.
‘ಟಾಕ್ಸಿಕ್’ ಚಿತ್ರಕ್ಕೆ ‘ಕೆವಿಎನ್ ಪ್ರೊಡಕ್ಷನ್ಸ್’ ಬಂಡವಾಳ ಹೂಡುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ದೊಡ್ಡ ಬಜೆಟ್ನಲ್ಲಿ ಚಿತ್ರ ಮೂಡಿ ಬರುತ್ತಿದೆ. ಸಿನಿಮಾದಲ್ಲಿ ಹಾಲಿವುಡ್ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಯಶ್ ಬರ್ತ್ಡೇ ದಿನ ಸಿನಿಮಾದ ಪೋಸ್ಟರ್ ರಿಲೀಸ್ ಆಗಬಹುದೇ ಎಂದು ಫ್ಯಾನ್ಸ್ ಕಾದಿದ್ದಾರೆ.
‘ತೆರೆಮೇಲೆ ಹಾಗೂ ನಮ್ಮ ಹೃದಯವನ್ನು ರಾಕ್ ಮಾಡಿದ ಯಶ್ಗೆ ಜನ್ಮದಿನದ ಶುಭಾಶಯ’ ಎಂದು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಬರೆದುಕೊಂಡಿದೆ. ಈ ಮೊದಲು ರಿಲೀಸ್ ಮಾಡಿದ್ದ ಮೋಷನ್ ಪೋಸ್ಟರ್ನ ಮತ್ತೆ ರಿಲೀಸ್ ಮಾಡಲಾಗಿದೆ. ಇದಕ್ಕೆ ಫ್ಯಾನ್ಸ್ ಬೇಸರಗೊಂಡಿದ್ದಾರೆ. ‘ಫಸ್ಟ್ ಲುಕ್ ಅಪ್ಡೇಟ್ ನೀಡಿ’ ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಇನ್ನೂ ಕೆಲವರು ‘ವರ್ಕಿಂಗ್ ಸ್ಟಿಲ್ ಆದರೂ ರಿಲೀಸ್ ಮಾಡಲಿ’ ಎಂದು ಕೋರಿದ್ದಾರೆ.
ಇದನ್ನೂ ಓದಿ: ಗದಗ: ನಟ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಸಾವು
‘ಯಶ್ 19’ ಚಿತ್ರಕ್ಕಾಗಿ ಯಶ್ ಅವರು ಯಾರ ಜೊತೆ ಕೈ ಜೋಡಿಸುತ್ತಾರೆ ಎನ್ನುವ ಕುತೂಹಲ ಮೂಡಿತ್ತು. ಇದಕ್ಕೆ ಕಳೆದ ಡಿಸೆಂಬರ್ನಲ್ಲಿ ಉತ್ತರ ಸಿಕ್ಕಿತ್ತು. ಗೀತು ಮೋಹನ್ದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:21 am, Mon, 8 January 24