ಬಿಡುಗಡೆಯಾಯ್ತು ‘ಲೇಡೀಸ್ ಬಾರ್’ ಸಿನಿಮಾದ ಟೀಸರ್, ಹಾಡು

Ladies Bar: ‘ಲೇಡೀಸ್ ಬಾರ್’ ಸಿನಿಮಾದ ಆಡಿಯೋ ಹಾಗೂ ಟೀಸರ್ ಬಿಡುಗಡೆ ಆಗಿದೆ. ಸಿನಿಮಾ ಜನವರಿಯಲ್ಲಿ ತೆರೆಗೆ ಬರಲಿದೆ.

ಬಿಡುಗಡೆಯಾಯ್ತು ‘ಲೇಡೀಸ್ ಬಾರ್’ ಸಿನಿಮಾದ ಟೀಸರ್, ಹಾಡು
Follow us
ಮಂಜುನಾಥ ಸಿ.
|

Updated on:Dec 05, 2023 | 10:37 PM

ಡಿ.ಎಂ.ಸಿ ಪ್ರೊಡಕ್ಷನ್ಸ್ ಅಡಿಯಲ್ಲಿ ಟಿ.ಎಂ ಸೋಮರಾಜು ನಿರ್ಮಾಣ ಮಾಡಿರುವ ಹಾಗೂ ಮುತ್ತು ಎ.ಎನ್ ‘ಲೇಡಿಸ್ ಬಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ‘ಲೇಡೀಸ್ ಬಾರ್’ ಸಿನಿಮಾದ ಟೀಸರ್ (Teaser) ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ರಾಜಕೀಯ ಮುಖಂಡರಾದ ಎಂ.ಡಿ ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು. ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು ‘ಲೇಡಿಸ್ ಬಾರ್’ ಕುರಿತು ಮಾಹಿತಿ ನೀಡಿದರು.

ನಿರ್ದೇಶಕ ಎ.ಎನ್ ಮುತ್ತು ಮಾತನಾಡಿ ‘ಲೇಡಿಸ್ ಬಾರ್’ ಶೀರ್ಷಿಕೆ ಕೇಳಿ ಇದು ಕುಡಿತದ ಬಗ್ಗೆ ಸಿನಿಮಾ ಅಂದುಕೊಳ್ಳಬಹುದು. ಆದರೆ ನಮ್ಮ ಚಿತ್ರದಲ್ಲಿ ಬರೀ ಕುಡಿತವಷ್ಟೇ ತೋರಿಸಿಲ್ಲ. ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ಪ್ರಯತ್ನ ಮಾಡಿದ್ದೇವೆ. ಸಿನಿಮಾ ನೋಡಿದಾಗ ಅದು ಗೊತ್ತಾಗುತ್ತದೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ಮಾಡಿದ್ದೇವೆ‌. ಸದ್ಯದಲ್ಲೇ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಲಿದ್ದು, ಜನವರಿಯಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.

ನಾನು ಉದ್ಯಮಿ ಜೊತೆಗೆ ರೈತ ಕೂಡ ಎಂದು ಮಾತನಾಡಿದ ಟಿ.ಎಂ.ಸೋಮರಾಜು, ಸಿನಿಮಾ ರಂಗ ಪರಿಚಯವೇ ಇಲ್ಲ. ನನ್ನ ಗೆಳೆಯ ರಾಜಶೇಖರ್ ನನ್ನನ್ನು ಈ ರಂಗಕ್ಕೆ ಕರೆದುಕೊಂಡು ಬಂದಿದ್ದಾರೆ. ನಿರ್ದೇಶಕ ಎ.ಎನ್ ಮುತ್ತು ಅವರು ಹೇಳಿದ ಕಥೆ ಇಷ್ಟವಾಯಿತು ನಿರ್ಮಾಣ ಮಾಡಿದ್ದೇನೆ. ಪ್ರಮುಖಪಾತ್ರದಲ್ಲೂ ನಟಿಸಿದ್ದೇನೆ. ನಮ್ಮ ಚಿತ್ರವನ್ನು ನೋಡಿ ಪ್ರೋತ್ಸಾಹ ನೀಡಿ ಎಂದರು. ಸಿನಿಮಾದ ಸಹ ನಿರ್ಮಾಪಕ ರಾಜಶೇಖರ್ ಸಹ ಮಾತನಾಡಿ ‘ಲೇಡೀಸ್ ಬಾರ್’ ಸಿನಿಮಾ ಸಾಗಿ ಬಂದ ಬಗೆ ಹೇಗಿತ್ತೆಂಬುದನ್ನು ವಿವರಿಸಿದರು.

ಇದನ್ನೂ ಓದಿ:ಕುತೂಹಲದ ಕಿಡಿ ಹೊತ್ತಿಸಿದ ‘ಕೆಂಡ’ ಸಿನಿಮಾ ಟೀಸರ್; ಡಿಫರೆಂಟ್​ ಆಗಿದೆ ಈ ಪ್ರಯತ್ನ

ಸಂಗೀತ ನಿರ್ದೇಶಕ ಹರ್ಷ ಕಾಗೋಡ್, ಛಾಯಾಗ್ರಾಹಕ ವೀನಸ್ ಮೂರ್ತಿ, ಸಾಹಸ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ಶಿವಾನಿ, ಮಾಧುರಿ, ಗಣೇಶ್ ರಾವ್, ಆರಾಧ್ಯ ಮುಂತಾದವರು “ಲೇಡಿಸ್ ಬಾರ್” ಬಗ್ಗೆ ಮಾತನಾಡಿದರು. ಚಿತ್ರದ ಸಿರಿ ಮ್ಯೂಸಿಕ್ ನಲ್ಲಿ ಹಾಡುಗಳನ್ನು ನೋಡಿ, ನಿಮಗನಿಸಿದನ್ನು ಕಾಮೆಂಟ್ ಮಾಡಿ. ಉತ್ತಮ ಕಾಮೆಂಟ್ ಗೆ ನಿರ್ಮಾಪಕರು ಮೊಬೈಲ್‌ ನೀಡಲಿದ್ದಾರೆ ಎಂದು ಸಿರಿ ಮ್ಯೂಸಿಕ್ ಚಿಕ್ಕಣ್ಣ ತಿಳಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:36 pm, Tue, 5 December 23

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್