ಗಮನ ಸೆಳೆಯುತ್ತಿರುವ ‘ಪುಕ್ಸಟ್ಟೆ ಲೈಫು’ ಟ್ರೈಲರ್; ಸಂಚಾರಿ ವಿಜಯ್​ರನ್ನು ನೋಡಿ ಕಣ್ತುಂಬಿಕೊಂಡ ಅಭಿಮಾನಿಗಳು

Sanchari Vijay: ವೃತ್ತಿ ಜೀವನದಲ್ಲಿ ವಿಶೇಷ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ನಟ ದಿ.ಸಂಚಾರಿ ವಿಜಯ್ ಅಭಿನಯಿಸಿದ್ದ ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ.

ಗಮನ ಸೆಳೆಯುತ್ತಿರುವ ‘ಪುಕ್ಸಟ್ಟೆ ಲೈಫು’ ಟ್ರೈಲರ್; ಸಂಚಾರಿ ವಿಜಯ್​ರನ್ನು ನೋಡಿ ಕಣ್ತುಂಬಿಕೊಂಡ ಅಭಿಮಾನಿಗಳು
‘ಪುಕ್ಸಟ್ಟೆ ಲೈಫು’ ಚಿತ್ರದ ಪೋಸ್ಟರ್
Follow us
TV9 Web
| Updated By: shivaprasad.hs

Updated on: Sep 01, 2021 | 5:23 PM

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ದಿ.ಸಂಚಾರಿ ವಿಜಯ್ ಬಣ್ಣ ಹಚ್ಚಿರುವ ‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಅವರ ಭಿನ್ನವಾದ ಪಾತ್ರ ಗಮನ ಸೆಳೆದಿದೆ. ವೃತ್ತಿ ಜೀವನದಲ್ಲಿ ಪ್ರತಿ ಚಿತ್ರದಲ್ಲೂ ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ವಿಜಯ್, ನೂತನ ಚಿತ್ರದ ಟ್ರೈಲರ್​ನಲ್ಲೂ ಸಂಪೂರ್ಣವಾಗಿ ಆವರಿಸಿಕೊಂಡು ನೋಡುಗರ ಮನಗೆದ್ದಿದ್ದಾರೆ. ಚಿತ್ರದಲ್ಲಿ ಬೀಗ ರಿಪೇರಿ ಮಾಡುವ ವ್ಯಕ್ತಿಯೊಬ್ಬನ ಪಾತ್ರವನ್ನು ವಿಜಯ್ ನಿರ್ವಹಿಸಿದ್ದಾರೆ.

ಪುಕ್ಸಟ್ಟೆ ಲೈಫು ಚಿತ್ರವನ್ನು ಅರವಿಂದ್ ಕುಪ್ಳೀಕರ್ ನಿರ್ದೇಶನ ಮಾಡಿದ್ದು, ಸರ್ವಸ್ವ ಪ್ರೊಡಕ್ಷನ್ಸ್​ನ ಬ್ಯಾನರ್​ನಲ್ಲಿ ನಾಗರಾಜ ಸೋಮಯಾಜಿ ನಿರ್ಮಾಣ ಮಾಡಿದ್ದಾರೆ. ವಸು ದೀಕ್ಷಿತ್ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದಲ್ಲಿ ಅಚ್ಯುತ್ ಕುಮಾರ್, ರಂಗಾಯಣ ರಘು, ಮಾತಂಗಿ ಪ್ರಸನ್ನ ಸೇರಿದಂತೆ ಖ್ಯಾತ ನಾಮರು ಬಣ್ಣ ಹಚ್ಚಿದ್ದಾರೆ.

ಚಿತ್ರದ ಟ್ರೈಲರ್ ಇಲ್ಲಿದೆ:

 ಗಮನ ಸೆಳೆಯುತ್ತಿರುವ ವಿಜಯ್ ಅಭಿನಯದ ‘ಮೇಲೊಬ್ಬ ಮಾಯಾವಿ’: ಸಂಚಾರಿ ವಿಜಯ್ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಮೇಲೊಬ್ಬ ಮಾಯಾವಿ’ ಚಿತ್ರದ ಕಂಟೆಂಟ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಹರಳು ಮಾಫಿಯಾದ (gem mafia) ಕಥೆಯನ್ನು ಒಳಗೊಂಡಿರುವ ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಕೆರಳಿಸಿತ್ತು. ಸಿನಿಮಾದ ಟೈಟಲ್ ವಿಡಿಯೋ ಸಾಂಗ್ ಕೂಡ ಗಮನ ಸೆಳೆಯುತ್ತಿದ್ದು, ಬಿಗ್ ಬಾಸ್ ಖ್ಯಾತಿಯ ಚಕ್ರವರ್ತಿ ಚಂದ್ರಚೂಡ್ ಹಾಡಿಗೆ ಸಾಹಿತ್ಯ ರಚಿಸಿದ್ದಾರೆ. ಈ ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಎಲ್.ಎನ್. ಶಾಸ್ತ್ರೀ, ಹೇಮಂತ್ ಮತ್ತು ಶಮಿತಾ ಮಲ್ನಾಡ್ ಹಾಡಿದ್ದಾರೆ. ಎಲ್.ಎನ್. ಶಾಸ್ತ್ರೀಯವರು ತಮ್ಮ ಕೊನೆಯ ದಿನಗಳಲ್ಲಿ ಹಾಡಿದ ಈ ಹಾಡು ಸಿನಿ ರಸಿಕರಿಗೆ ಪ್ರಿಯವಾಗಿತ್ತು. ‘ಮೇಲೊಬ್ಬ ಮಾಯಾವಿ’ಯನ್ನು ಬಿ.ನವೀನ್ ಕೃಷ್ಣ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:

ದಕ್ಷಿಣ ಕೊರಿಯಾದತ್ತ ಹೊರಟ ಕನ್ನಡದ ‘ಪೆಡ್ರೋ’; ಸಂತಸ ಹಂಚಿಕೊಡ ರಿಷಬ್​ ಶೆಟ್ಟಿ

ಫೈಟರ್ ವಿವೇಕ್ ಕುಟುಂಬಕ್ಕೆ ₹5 ಲಕ್ಷ ಚೆಕ್ ನೀಡಿದ ಗುರು ದೇಶಪಾಂಡೆ; ವಿವೇಕ್ ತಮ್ಮನ ಶಿಕ್ಷಣ ವೆಚ್ಚ ಭರಿಸುವುದಾಗಿ ಭರವಸೆ

(Late actor Sanchari Vijay starring Kannada movie Puksatte Lifeuu trailer is launched)

ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ನನ್ನನ್ನು ಹುದ್ದೆಯಿಂದ ಸರಿಸಬೇಕೆನ್ನುವವರಿಗೆ ಒಳ್ಳೆಯದಾಗಲಿ: ವಿಜಯೇಂದ್ರ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಜೈಪುರ ಸಾಹಿತ್ಯ ಉತ್ಸವ; ಕಲ್ ಪೆನ್ ಜೊತೆ ಟಿವಿ9 ಸಿಇಒ ಬರುಣ್ ದಾಸ್ ಸಂವಾದ
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಪಕ್ಷದ ವಿದ್ಯಮಾನಗಳು ಶಿವಕುಮಾರ್​ರನ್ನು ದೆಹಲಿಗೆ ಹೋಗುವಂತೆ ಮಾಡಿದವೇ?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ