ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿ (Rishab Shetty) ಅವರು ನಿರ್ಮಾಣ ಮಾಡುತ್ತಿರುವ ‘ಲಾಫಿಂಗ್ ಬುದ್ಧ’ (Laughing Buddha Kannada Movie) ಸಿನಿಮಾದ ಚಿತ್ರೀಕರಣ ಕೆಲಸಗಳು ಈಗಾಗಲೇ ಪೂರ್ಣ ಆಗಿವೆ. ಈಗ ಇದೇ ಸಿನಿಮಾ ತಂಡದಿಂದ ‘ಕರ್ನಾಟಕ ಪೊಲೀಸ್ ಇಲಾಖೆ’ಗೆ ಶುಭಾಶಯ ತಿಳಿಸಲಾಗಿದೆ. ‘ಪೊಲೀಸ್ ಧ್ವಜ ದಿನ’ದ (Police Flag Day) ಪ್ರಯುಕ್ತ ಕರ್ನಾಟಕ ಪೊಲೀಸ್ ಇಲಾಖೆಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
‘ಧೈರ್ಯದ ಮತ್ತೊಂದು ಹೆಸರು ಹಾಗೂ ಪ್ರತೀಕವಾಗಿರುವ ಕೆಚ್ಚೆದೆಯ ಕರ್ನಾಟಕ ಪೊಲೀಸರಿಗೆ ನಮ್ಮ ಲಾಫಿಂಗ್ ಬುದ್ಧ ಚಿತ್ರತಂಡದಿಂದ ಅಭಿನಂದನೆಗಳು’ ಎಂದು ಶುಭ ಕೋರಲಾಗಿದೆ. ರಿಷಬ್ ಶೆಟ್ಟಿ ಕೂಡ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ‘ನಮ್ಮ ಧೀರ ಪೊಲೀಸರ ನಿಸ್ವಾರ್ಥ ಸೇವೆ, ಧೈರ್ಯ, ಶೌರ್ಯ ಹಾಗು ಕರ್ತವ್ಯ ನಿಷ್ಠೆಯನ್ನು ಗೌರವಿಸುವ ಸುದಿನವಾದ ಪೊಲೀಸ್ ಧ್ವಜ ದಿನಾಚರಣೆಯ ಶುಭಾಶಯಗಳು’ ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಖಚಿತವಾಯ್ತು ಸುದ್ದಿ, ‘ಲಗಾನ್’ ನಿರ್ದೇಶಕನ ಸಿನಿಮಾದಲ್ಲಿ ರಿಷಬ್ ಶೆಟ್ಟಿ
‘ಲಾಫಿಂಗ್ ಬುದ್ಧ’ ಚಿತ್ರವು ರಿಷಬ್ ಶೆಟ್ಟಿ ಫಿಲ್ಮ್ಸ್ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆ. ಭರತ್ ರಾಜ್ ಎಂ. ಅವರು ಈ ಸಿನಿಮಾಗೆ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿದ್ದಾರೆ ಎಂಬುದು ವಿಶೇಷ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಅವರ ಪಾಲಿಗೆ ‘ಲಾಫಿಂಗ್ ಬುದ್ಧ’ ಸಿನಿಮಾ ಸ್ಪೆಷಲ್ ಆಗಿರಲಿದೆ.
ಪ್ರಮೋದ್ ಶೆಟ್ಟಿ ಜೊತೆ ಸುಂದರ್ ರಾಜ್, ತೇಜು ಬೆಳವಾಡಿ ಮುಂತಾದ ಕಲಾವಿದರು ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಭದ್ರಾವತಿ, ಸಾಗರ, ಜೋಗ, ಬೆಂಗಳೂರು ಮುಂತಾದ ಕಡೆಗಳಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಕೂಡ ಈಗಾಗಲೇ ಮುಗಿದಿವೆ. ‘ಲಾಫಿಂಗ್ ಬುದ್ಧ’ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.