ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?

Leelavathi: ಲೀಲಾವತಿ ಅವರ ಅಂತಿಮ ದರ್ಶನಕ್ಕೆ ನೆಲಮಂಗಲದಲ್ಲಿ ಮಾತ್ರವೇ ಅಲ್ಲದೆ ಬೆಂಗಳೂರಿನಲ್ಲಿಯೂ ವ್ಯವಸ್ಥೆ ಮಾಡಲಾಗಿದೆ. ಸ್ಥಳ, ಸಮಯ ಇತ್ಯಾದಿ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?
Follow us
ಮಂಜುನಾಥ ಸಿ.
|

Updated on:Dec 09, 2023 | 12:04 AM

ಹಿರಿಯ ನಟಿ ಲೀಲಾವತಿ (Leelavathi) ಅವರ ಅಂತಿಮ ದರ್ಶನಕ್ಕೆ ನೆಲಮಂಗಲದಲ್ಲಿ ಈಗಾಗಲೇ ವ್ಯವಸ್ಥೆ ಮಾಡಲಾಗಿದೆ. ನೆಲಮಂಗಲದಲ್ಲಿ ಮಾತ್ರವೇ ಅಲ್ಲದೆ ಬೆಂಗಳೂರಿನಲ್ಲಿಯೂ ಸಹ ಲೀಲಾವತಿ ಅವರ ಅಂತಿಮ ದರ್ಶನ ಮಾಡುವ ನಿರ್ಧಾರವನ್ನು ತಡವಾಗಿ ಮಾಡಲಾಗಿದೆ. ಆ ಮೂಲಕ ಬೆಂಗಳೂರಿನ ಜನರಿಗೂ ಅಂತಿಮ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ನೆಲಮಂಗಲದ ಜ್ಯೂನಿಯರ್ ಕಾಲೇಜಿನ ಅಂಬೇಡ್ಕರ್ ಮೈದಾನದಲ್ಲಿ ಈಗಾಗಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಲೀಲಾವತಿಯವರ ಪಾರ್ಥಿವ ಶರೀರವನ್ನು ಮೈದಾನಕ್ಕೆ ಕರೆತರಲಾಗಿದೆ. ಡಿಸೆಂಬರ್ 08ರ ಬೆಳಿಗ್ಗೆ 5 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೂ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರು ಹಾಗೂ ಗಣ್ಯರು ಅಂತಿಮ ದರ್ಶನ ಪಡೆಯಬಹುದಾಗಿದ್ದು, ಅದಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ:500 ರೂಪಾಯಿ ಸಂಭಾವನೆ ಇದ್ದ ಕಾಲಕ್ಕೆ 50 ಸಾವಿರ ಸಂಭಾವನೆ ಪಡೆದಿದ್ದ ಲೀಲಾವತಿ

10 ಗಂಟೆ ಬಳಿಕ ಪಾರ್ಥಿವ ಶರೀರವನ್ನು ನೆಲಮಂಗಲದಿಂದ ಬೆಂಗಳೂರಿಗೆ ತಂದು ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತದೆ. ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ ಎರಡು ಗಂಟೆಗಳ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಕನ್ನಡ ಚಿತ್ರರಂಗದ ಹಲವು ಗಣ್ಯರು, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಅಶೋಕ್, ಸರ್ಕಾರದ ಹಲವು ಸಚಿವರುಗಳು ಸಹ ಅಂತಿಮ ದರ್ಶನ ಪಡೆಯಲಿದ್ದಾರೆ. ಕೆಲವು ಪರಭಾಷೆಯ ನಟರು ಬರುವ ಸಾಧ್ಯತೆಯೂ ಇದೆ.

ಎರಡು ಗಂಟೆ ಬಳಿಕ ಪಾರ್ಥಿವ ಶರೀರವನ್ನು ನೆಲಮಂಗಲದ ಸೋಲದೇವನಹಳ್ಳಿಗೆ ಕೊಂಡೊಯ್ದು, ಲೀಲಾವತಿಯವರ ತೋಟದಲ್ಲಿ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿ ಅಂತಿಮ ಸಂಸ್ಕಾರ ಮಾಡಲಾಗುತ್ತದೆ.

ಲೀಲಾವತಿಯವರು ಡಿಸೆಂಬರ್ 08 ರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೀಲಾವತಿ ಕನ್ನಡದ ಮೇರು ನಟಿ. ಚಿತ್ರರಂಗದಿಂದ ದೂರಾಗಿ ನೆಲಮಂಗಲದ ಸಮೀಪ ಸೋಲದೇವನಹಳ್ಳಿಯಲ್ಲಿ ಪುತ್ರ ವಿನೋದ್ ರಾಜ್​ ಜೊತೆ ವಾಸವಾಗಿದ್ದರು. 85 ವರ್ಷ ವಯಸ್ಸಾಗಿದ್ದ ಲೀಲಾವತಿಯವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಇಂದು ನಿಧನ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:45 pm, Fri, 8 December 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್