Leelavathi Passes Away: ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ

Actress M Leelavathi Death: ಸ್ಯಾಂಡಲ್​ವುಡ್​ನ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ಪುತ್ರ ವಿನೋದ್​ ರಾಜ್​ ಜೊತೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಅವರು ವಾಸವಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು 86ನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

Leelavathi Passes Away: ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ
ಲೀಲಾವತಿ
Follow us
ಮದನ್​ ಕುಮಾರ್​
|

Updated on:Dec 08, 2023 | 6:04 PM

ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ (Leelavathi) ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇಂದು (ಡಿಸೆಂಬರ್​ 8) ನಿಧನರಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ (Leelavathi Death) ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು. ಪುತ್ರ ವಿನೋದ್​ ರಾಜ್​ (Vinod Raj) ಅವರನ್ನು ಲೀಲಾವತಿ ಅಗಲಿದ್ದಾರೆ.

ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ ಬಳಿ ಪುತ್ರ ವಿನೋದ್​ ರಾಜ್​ ಜೊತೆ ವಾಸವಾಗಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ವಿನೋದ್​ ರಾಜ್​ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು. ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ದರ್ಶನ್​, ಅಭಿಷೇಕ್​ ಅಂಬರೀಷ್​, ಅರ್ಜುನ್​ ಸರ್ಜಾ, ಡಿ.ಕೆ. ಶಿವಕುಮಾರ್​, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಬಂದು ವಿನೋದ್​ ರಾಜ್​ಗೆ ಧೈರ್ಯ ತುಂಬಿದ್ದರು.

ಇದನ್ನೂ ಓದಿ: Kannada Rajyotsava: ವ್ಹೀಲ್​ ಚೇರ್​ನಲ್ಲಿ ಬಂದು ಧ್ವಜಾರೋಹಣ ಮಾಡಿದ ನಟಿ ಲೀಲಾವತಿ

ಲೀಲಾವತಿ ಅವರು ಇನ್ನೂ ಒಂದಷ್ಟು ವರ್ಷಗಳ ಕಾಲ ಆರೋಗ್ಯಯುತವಾಗಿ ಇರಲಿ ಎಂದು ಎಲ್ಲರೂ ಹಾರೈಸಿದ್ದರು. ಆದರೆ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ‘‘ಅಮ್ಮ ಲೀಲಾವತಿ, ಎಂಜಿಆರ್ ಜೊತೆ ನಟಿಸುವಾಗ ಒಮ್ಮೆ ಹೀಗಾಗಿತ್ತು…’’

ಲೀಲಾವತಿ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಸಿನಿಮಾ ಕಲಾವಿದರ ಬಗ್ಗೆ ಕಾಳಜಿ ಹೊಂದಿದ್ದರು. ಅನೇಕ ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಿದ್ದರು. ಪ್ರಾಣಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಅದೇ ಕಾರಣಕ್ಕಾಗಿ ಅವರು ಸ್ವಂತ ಹಣದಲ್ಲಿ ಸೋಲದೇವನಹಳ್ಳಿ ಬಳಿ ಪಶು ಆಸ್ಪತ್ರೆ ನಿರ್ಮಿಸಿದ್ದರು. ಆ ಆಸ್ಪತ್ರೆ ಉದ್ಘಾಟನೆ ಆದ ಕೆಲವೇ ದಿನಗಳ ಬಳಿಕ ಅವರು ಇಹಲೋಕ ತ್ಯಜಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:00 pm, Fri, 8 December 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್