AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ’- ವಿನೋದ್ ರಾಜ್

ಲೀಲಾವತಿ ಅಂತಿಮ ದರ್ಶನ: ಇಂದು (ಡಿಸೆಂಬರ್ 9) ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ತರಲಾಗುತ್ತದೆ. ಈ ವೇಳೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.

‘ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ’- ವಿನೋದ್ ರಾಜ್
ಲೀಲಾವತಿ-ವಿನೋದ್ ರಾಜ್
ರಾಜೇಶ್ ದುಗ್ಗುಮನೆ
|

Updated on: Dec 09, 2023 | 7:08 AM

Share

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರು ಶುಕ್ರವಾರ (ಡಿಸೆಂಬರ್ 8) ನಿಧನರಾಗಿದ್ದಾರೆ. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ನೂರಾರು ಸಿನಿಮಾಗಳಲ್ಲಿ ನಟಿಸಿದ್ದ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದರು. ತಾಯಿಯನ್ನು ಕಳೆದುಕೊಂಡು ವಿನೋದ್ ರಾಜ್ ಅವರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಅಮ್ಮ ಇಲ್ಲ ಎಂಬ ನೋವು ಅವರನ್ನು ಬಹುವಾಗಿ ಕಾಡುತ್ತಿದೆ. ಅಮ್ಮ ಕಂಡ ಕನಸನ್ನು ಈಡೇರಿಸುವ ಉದ್ದೇಶವನ್ನು ವಿನೋದ್ ಹೊಂದಿದ್ದಾರೆ.

‘56 ವರ್ಷಗಳ ಕಾಲ ತಾಯಿ ಜೊತೆ ಕಾಲ ಕಳೆದೆ. ನನ್ನಮ್ಮ ಪ್ರೀತಿಗೆ ಕೊರತೆ ಮಾಡಲಿಲ್ಲ. ಜೀವನ ಪೂರ್ತಿ ನನ್ನ ಕೈಹಿಡಿದುಕೊಂಡೇ ಕಳೆದುಹೋದರು. ನೀರು ಕುಡಿಯುವಾಗಲೇ ಪ್ರಾಣಬಿಟ್ಟರು. ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಾನು 2-3 ತಿಂಗಳಿಂದ ಊಟ ಮಾಡುವುದನ್ನೇ ಬಿಟ್ಟಿದ್ದೆ. ಶಿವರಾಜ್​ಕುಮಾರ್ ಅಪ್ಸೆಟ್ ಆಗಬೇಡಿ ಎಂದು ಹೇಳಿದ್ದಾರೆ. ಎಷ್ಟು ಬೇಡಿಕೊಂಡರೂ ತಾಯಿ ಪಡೆದುಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದಾರೆ ವಿನೋದ್ ರಾಜ್.

ಇದನ್ನೂ ಓದಿ: ಬೆಂಗಳೂರಿನಲ್ಲೂ ಲೀಲಾವತಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಎಲ್ಲಿ?

‘ಅಮ್ಮ ಹೇಳಿದ ತಾಳ್ಮೆ, ಸಮಾಧಾನ ಯಾರೂ ಹೇಳಲು ಸಾಧ್ಯವಿಲ್ಲ. ಅವರ ಸಾಕಷ್ಟು ಕನಸುಗಳಿದ್ದವು, ಬಾಕಿಯಿರುವ ಕೆಲಸ ಮಾಡುತ್ತೇನೆ. ಮನೆಯಿಂದ ಹೊರಡುವಾಗ ಐವತ್ತು ನೂರು ಕೊಟ್ಟು ಹೋಗುತ್ತಿದ್ದರು. ನಮಗಿಂತ ಬlಡತನದಲ್ಲಿರುವವರ ಬೆನ್ನಿಗೆ ನಿಲ್ಲಬೇಕು ಎಂದು ಅಮ್ಮ ಹೇಳುತ್ತಿದ್ದರು’ ಎಂದು ಅಮ್ಮನ ಮಾತನ್ನು ವಿನೋದ್ ರಾಜ್ ನೆನಪಿಸಿಕೊಂಡಿದ್ದಾರೆ.

ಅಂತಿಮ ದರ್ಶನ…

ಇಂದು (ಡಿಸೆಂಬರ್ 9) ಬೆಳಿಗ್ಗೆ 10:45ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಲೀಲಾವತಿ ಅವರ ಪಾರ್ಥಿವ ಶರೀರ ತರಲಾಗುತ್ತದೆ. ಈ ವೇಳೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಲಿದ್ದಾರೆ. ಸೋಲದೇವನಹಳ್ಳಿಯಲ್ಲಿರುವ ಫಾರ್ಮ್​​ಹೌಸ್​ನಲ್ಲಿ ಬಂಟರ ಸಂಪ್ರದಾಯದಂತೆ ಮಧ್ಯಾಹ್ನ 3:30ಕ್ಕೆ ಅಂತಿಮ ಸಂಸ್ಕಾರ ನಡೆಯಲಿದೆ. ಆಪ್ತರು, ಗಣ್ಯರು, ಕುಟುಂಬದವರು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?