AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ರಿಲೀಸ್

ಇತ್ತೀಚಿನ ವರ್ಷಗಳಲ್ಲಿ ಹಲವು ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿವೆ. ಆದರೆ, ಈ ರೀತಿ ರಿಲೀಸ್ ಆಗುವ ಸಿನಿಮಾಗಳು ಕನ್ನಡ ಹಾಗೂ ಮಲಯಾಳಂ ಭಾಷೆಯನ್ನು ಕಡೆಗಣಿಸುತ್ತವೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಇದೆ. ಆದರೆ, ‘ಲಿಯೋ’ ತಂಡದವರು ಆ ರೀತಿ ಅಲ್ಲ.

ಗಣೇಶ ಚತುರ್ಥಿಗೆ ದಳಪತಿ ವಿಜಯ್ ನಟನೆಯ ‘ಲಿಯೋ’ ಚಿತ್ರದ ಕನ್ನಡ ಪೋಸ್ಟರ್ ರಿಲೀಸ್
ಲಿಯೋ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on:Sep 19, 2023 | 10:08 AM

Share

‘ಲಿಯೋ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರಕ್ಕೆ ದಳಪತಿ ವಿಜಯ್ ಹೀರೋ. ಹಲವು ಬ್ಲಾಕ್​ಬಸ್ಟರ್ ಹಿಟ್ ಸಿನಿಮಾ ನೀಡಿದ ಲೋಕೇಶ್ ಕನಗರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ‘ಲಿಯೋ’ ಸಿನಿಮಾದ (Leo Movie) ಕನ್ನಡ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಚಿತ್ರ ಕನ್ನಡದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲು ತಯಾರಿ ನಡೆದಿದೆ ಎನ್ನುವ ಸೂಚನೆ ಸಿಕ್ಕಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇತ್ತೀಚಿನ ವರ್ಷಗಳಲ್ಲಿ ಹಲವು ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿವೆ. ಆದರೆ, ಈ ರೀತಿ ರಿಲೀಸ್ ಆಗುವ ಸಿನಿಮಾಗಳು ಕನ್ನಡ ಹಾಗೂ ಮಲಯಾಳಂ ಭಾಷೆಯನ್ನು ಕಡೆಗಣಿಸುತ್ತವೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಇದೆ. ಆದರೆ, ‘ಲಿಯೋ’ ತಂಡದವರು ಆ ರೀತಿ ಅಲ್ಲ. ಈ ಚಿತ್ರವನ್ನು ಕನ್ನಡದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್ ಮಾಡಲಾಗುತ್ತಿದ್ದು, ಇದಕ್ಕೆ ವಿಶೇಷ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ.

ಇನ್ನು, ಸಿನಿಮಾನ ಕನ್ನಡದಲ್ಲಿ ರಿಲೀಸ್ ಮಾಡಲು ಹೆಚ್ಚು ಆದ್ಯತೆ ನೀಡೋಕೆ ‘ಘೋಸ್ಟ್’ ಸಿನಿಮಾ ಕೂಡ ಕಾರಣ ಎಂದು ಹೇಳಲಾಗುತ್ತಿದೆ. ‘ಲಿಯೋ’ ಸಿನಿಮಾ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಕನ್ನಡದಲ್ಲಿ ಶಿವರಾಜ್​ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರಕ್ಕೆ ಕಠಿಣ ಸ್ಪರ್ಧೆ ಒಡ್ಡಲು ಕನ್ನಡದಲ್ಲಿ ‘ಲಿಯೋ’ ಚಿತ್ರವನ್ನು ರಿಲೀಸ್ ಮಾಡಲು ಹೆಚ್ಚು ಒತ್ತು ನೀಡಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ವಿದೇಶದಲ್ಲಿ ನಡೆಯಲಿದೆ ವಿಜಯ್ ನಟನೆಯ ಲಿಯೋ  ಸಿನಿಮಾ ಪ್ರೀ ರಿಲೀಸ್ ಇವೆಂಟ್

‘ಲಿಯೋ’ ಚಿತ್ರಕ್ಕೆ ಲೋಕೇಶ್ ಕನಗರಾಜ್ ಅವರ ನಿರ್ದೇಶನ ಇದೆ. ಅವರು ಈ ಮೊದಲು ‘ಕೈದಿ’, ‘ವಿಕ್ರಮ್’ ಅಂಥ ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ. ಇವೆರಡೂ ಸಿನಿಮಾಗಳು ‘ಲಿಯೋ’ ಜೊತೆ ಕನೆಕ್ಷನ್ ಹೊಂದಿರಲಿದೆ ಎನ್ನಲಾಗಿದೆ. ದಳಪತಿ ವಿಜಯ್​ಗೆ ಜೊತೆಯಾಗಿ ತ್ರಿಷಾ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Tue, 19 September 23