‘ಲೈನ್ ಮ್ಯಾನ್’ ಹಾಡು ಬಿಡುಗಡೆ, ಸಿನಿಮಾ ಬಿಡುಗಡೆಯೂ ಸನಿಹ

|

Updated on: Mar 01, 2024 | 11:15 PM

Line Man: ವಿದ್ಯುತ್ ಪ್ರಸರಣ ಇಲಾಖೆಯ ಲೈನ್​ಮ್ಯಾನ್​ಗಳ ಕೆಲಸ ಅತ್ಯಂತ ಕಠಿಣವಾದುದು ಅವರ ಬದುಕನ್ನೇ ಆಧರಿಸಿ ನಿರ್ಮಿಸಲಾದ ಸಿನಿಮಾ ‘ಲೈನ್​ಮ್ಯಾನ್’. ಈ ಸಿನಿಮಾ ಮಾರ್ಚ್ 15ಕ್ಕೆ ಬಿಡುಗಡೆ ಆಗಲಿದೆ.

‘ಲೈನ್ ಮ್ಯಾನ್’ ಹಾಡು ಬಿಡುಗಡೆ, ಸಿನಿಮಾ ಬಿಡುಗಡೆಯೂ ಸನಿಹ
Follow us on

‘ಲೈನ್ ಮ್ಯಾನ್’, ಭಿನ್ನ ಹೆಸರಿನಂದ ಗಮನ ಸೆಳೆಯುತ್ತಿರುವ ಈ ಸಿನಿಮಾ (Movie) ಮಾರ್ಚ್ 15ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಮೋಷನ್ ಪೋಸ್ಟರ್ ರಿಲೀಸ್ ಮಾಡಿ ಈಗಾಗಲೇ ನಿರೀಕ್ಷೆ ಹುಟ್ಟಿಸಿರುವ ಚಿತ್ರತಂಡ ಇದೀಗ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ. ಮೊದಲ ಹಾಡಾಗಿ ‘ಧರೆಗೆ ದೊಡ್ಡವರು’ ಜನಪದ ಹಾಡನ್ನು ಬಿಡುಗಡೆ ಮಾಡಲಾಗಿದೆ. ನಿಂಗಶೆಟ್ಟಿ, ನಿಂಗರಾಜು ಕೆ ಕಲ್ಲಪ್ಪ ಹಾಗೂ ಶಂಕರ್ ಧ್ವನಿಯಾಗಿರುವ ಅರ್ಥಪೂರ್ಣ ಗೀತೆಗೆ ಕದ್ರಿ ಮಣಿಕಾಂತ್ ಟ್ಯೂನ್ ಹಾಕಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿಯೂ ಹಾಡು ಬಿಡುಗಡೆಯಾಗಿದೆ.

ವಿದ್ಯುತ್ ಇಲಾಖೆಗಳಲ್ಲಿ ಕೆಲಸ ಮಾಡುವ ಲೈನ್ ಮ್ಯಾನ್‌ಗಳದ್ದು ಯಾವಾಗಲೂ ಕಷ್ಟ ಕೆಲಸ. ಅದರಲ್ಲೂ ಮಳೆಗಾಲದ ಸಮಯದಲ್ಲಂತೂ ಜೀವವನ್ನು ಪಣಕ್ಕಿಟ್ಟು ಅವರು ಕೆಲಸ ಮಾಡುತ್ತಾರೆ. ಅಂಥಹವರ ಕಥೆಯೇ ‘ಲೈನ್ ಮ್ಯಾನ್’ ಸಿನಿಮಾದ ಕತೆ. ರಘು ಶಾಸ್ತ್ರಿ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಯುವ ನಟ ತ್ರಿಗುಣ್, ಲೈನ್ ಮ್ಯಾನ್ ಪಾತ್ರದಲ್ಲಿ ನಟಿಸಿದ್ದಾರೆ. ಕಾಜಲ್ ಕುಂದರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹಿರಿಯ ನಟಿ ಬಿ ಜಯಶ್ರೀ, ಮೈಕೋ ನಾಗರಾಜ್, ಹರಿಣಿ, ಅಂಜಲಿ, ಅಪೂರ್ವಶ್ರೀ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಇದನ್ನೂ ಓದಿ:’ಕಾಟೇರ‘ ಸಿನಿಮಾದ ಹೈದರಾಬಾದ್-ಕರ್ನಾಟಕ ವಿತರಣೆ ಹಕ್ಕು ಯಾರ ಪಾಲಾಯ್ತು?

‘ಭಿನ್ನ’, ‘ಡಿಯರ್ ಸತ್ಯ’ ಸಿನಿಮಾಗಳನ್ನು ನಿರ್ಮಿಸಿರುವ ಪರ್ಪಲ್ ರಾಕ್ ಸಂಸ್ಥೆಯ ಮೂರನೇ ಸಿನಿಮಾ ಇದಾಗಿದೆ. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಪ್ರಚುರ ಪಿ.ಪಿ, ಜ್ಯೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ. ಕನ್ನಡ ಹಾಗೂ ತೆಲುಗು ಸೇರಿ ಎರಡು ಭಾಷೆಯಲ್ಲಿ ಚಿತ್ರ ತಯಾರಾಗಿದ್ದು, ‘ಲೈನ್ ಮ್ಯಾನ್’ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯಾದ್ಯಂತ ತೆರೆಗೆ ಬರ್ತಿದೆ.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಯೂ ಸಹ ‘ಲೈನ್ ಮ್ಯಾನ್’ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ಮಾರ್ಚ್ 2‌ ಹಾಗೂ ಚಿತ್ರೋತ್ಸವದ ಕೊನೆಯ ದಿನವಾದ ಮಾರ್ಚ್ 7ರಂದು ಲೈನ್ ಮ್ಯಾನ್ ವಿಶೇಷ ಪ್ರದರ್ಶನ ಇರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ